ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಅಮೆರಿಕದಲ್ಲಿ ಭಾರತೀಯ ಮೂಲದ ಯುವತಿ ಶವವಾಗಿ ಪತ್ತೆ; ಮಾಜಿ ಗೆಳೆಯನೇ ಹತ್ಯೆ ಮಾಡಿ ಭಾರತಕ್ಕೆ ಪರಾರಿಯಾಗಿರುವ ಶಂಕೆ

Crime News: ಅಮೆರಿಕದಲ್ಲಿ ಭಾರತೀಯ ಮೂಲದ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿರುವ ಘಟನೆ ಭಾರಿ ಆಘಾತಕ್ಕೆ ಕಾರಣವಾಗಿದೆ. ಈ ಹತ್ಯೆಯ ಹಿಂದೆ ಆಕೆಯ ಮಾಜಿ ಗೆಳೆಯನ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ಆತ ಅಪರಾಧ ಎಸಗಿ ಭಾರತಕ್ಕೆ ಪರಾರಿಯಾಗಿದ್ದಾನೆ ಎನ್ನಲಾಗುತ್ತಿದೆ.

ಅಮೆರಿಕದಲ್ಲಿ ಭಾರತೀಯ ಮೂಲದ ಯುವತಿ ಶವವಾಗಿ ಪತ್ತೆ

ನ್ಯೂಯಾರ್ಕ್: ಅಮೆರಿಕದ (America) ಅಪಾರ್ಟ್‌ಮೆಂಟ್‍ನಲ್ಲಿ 27 ವರ್ಷದ ಭಾರತೀಯ ಯುವತಿಯ ಶವ ಪತ್ತೆಯಾಗಿದ್ದು, ಆಕೆಯ ಮಾಜಿ ಗೆಳೆಯನೆ ಕೊಲೆ (murder) ಮಾಡಿರುವ ಶಂಕೆ ವ್ಯಕ್ತವಾಗಿದೆ. ಆಕೆಯನ್ನು ಹತ್ಯೆ ಮಾಡಿ ಆರೋಪಿ ನಾಪತ್ತೆಯಾಗಿದ್ದು, ಆತ ಭಾರತಕ್ಕೆ ಪರಾರಿಯಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಮೇರಿಲ್ಯಾಂಡ್‌ನಲ್ಲಿರುವ ತನ್ನ ಮಾಜಿ ಗೆಳೆಯನ ಅಪಾರ್ಟ್‌ಮೆಂಟ್‌ನಲ್ಲಿ ಹೊಸ ವರ್ಷದ ಮುನ್ನಾದಿನದಂದು ಇರಿತದ ಗಾಯಗಳೊಂದಿಗೆ ಯುವತಿ ಶವವಾಗಿ ಪತ್ತೆಯಾಗಿದ್ದರು. ಮೃತ ಯುವತಿಯನ್ನು ಎಲ್ಲಿಕಾಟ್ ನಗರದ ಡೇಟಾ ಮತ್ತು ಸ್ಟ್ರಾಟಜಿ ಅನಾಲಿಸ್ಟ್ ನಿಕಿತಾ ಗೋಡಿಶಾಲ ಎಂದು ಗುರುತಿಸಲಾಗಿದೆ ಎಂದು ಹೊವಾರ್ಡ್ ಕೌಂಟಿ ಪೊಲೀಸರು ತಿಳಿಸಿದ್ದಾರೆ.

ಮನೆಯಲ್ಲಿ ಮಲಗಿದ್ದ ತಾಯಿ- ಮಗು ಕೆರೆಯಲ್ಲಿ ಶವವಾಗಿ ಪತ್ತೆ

ನಿಕಿತಾ ಗೋಡಿಶಾಲಳ ಮೃತದೇಹ ಆಕೆಯ ಮಾಜಿ ಗೆಳೆಯ 26 ವರ್ಷದ ಅರ್ಜುನ್ ಶರ್ಮಾ ಒಡೆತನದ ಅಪಾರ್ಟ್‌ಮೆಂಟ್‌ನಲ್ಲಿ ಪತ್ತೆಯಾಗಿದೆ. ತನಿಖಾಧಿಕಾರಿಗಳು ಮಾಜಿ ಗೆಳೆಯನ ವಿರುದ್ಧ ಕೊಲೆ ಆರೋಪ ಹೊರಿಸಿ ಬಂಧನ ವಾರಂಟ್ ಪಡೆದಿದ್ದಾರೆ. ತನಿಖಾಧಿಕಾರಿಗಳ ಪ್ರಕಾರ, ಶರ್ಮಾ ಜನವರಿ 2 ರಂದು ಪೊಲೀಸರಿಗೆ ನಾಪತ್ತೆ ದೂರು ನೀಡಿದ್ದಾನೆ. ಡಿಸೆಂಬರ್ 31 ರಂದು ಮೇರಿಲ್ಯಾಂಡ್ ನಗರದ ತನ್ನ ಅಪಾರ್ಟ್ಮೆಂಟ್ನಲ್ಲಿ ಗೋಡಿಶಾಲಳನ್ನು ಕೊನೆಯ ಬಾರಿಗೆ ನೋಡಿದ್ದಾಗಿ ಅಧಿಕಾರಿಗಳಿಗೆ ಹೇಳಿದ್ದಾನೆ. ಜನವರಿ 3 ರಂದು, ಪೊಲೀಸರು ಅದೇ ಅಪಾರ್ಟ್ಮೆಂಟ್‍ನಲ್ಲಿ ಶೋಧ ವಾರಂಟ್ ಅನ್ನು ಕಾರ್ಯಗತಗೊಳಿಸಿದಾಗ ಗೋಡಿಶಾಲಾ ಇರಿತದ ಗಾಯಗಳೊಂದಿಗೆ ಶವವಾಗಿ ಬಿದ್ದಿರುವುದು ಕಂಡುಬಂದಿದೆ.

ಗೋಡಿಶಾಲಾ ನಾಪತ್ತೆಯಾಗಿದ್ದಾರೆಂದು ವರದಿ ಮಾಡಿದ ದಿನವೇ ಶರ್ಮಾ ಭಾರತಕ್ಕೆ ಪಲಾಯನಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆಯ ವೇಳೆ, ಡಿಸೆಂಬರ್ 31 ರಂದು ಸಂಜೆ 7 ಗಂಟೆಯ ನಂತರ ಶರ್ಮಾನು ಗೋಡಿಶಾಲಳನ್ನು ಹತ್ಯೆ ಮಾಡಿದ್ದಾನೆ ಎಂದು ಹೇಳಲಾಗಿದೆ.

ಪ್ರಸ್ತುತ ತನಿಖೆ ಮುಂದುವರೆದಿದ್ದು, ಈ ಸಮಯದಲ್ಲಿ ಯಾವುದೇ ಕಾರಣ ತಿಳಿದುಬಂದಿಲ್ಲ. ಹೊವಾರ್ಡ್ ಕೌಂಟಿ ಪೊಲೀಸರು ಮಾಜಿ ಗೆಳೆಯನನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಫೆಡರಲ್ ಕಾನೂನು ಜಾರಿ ಸಂಸ್ಥೆಗಳೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

Ballari Firing: ಬಳ್ಳಾರಿ ಘರ್ಷಣೆ: ಗುಂಡು ಹಾರಿಸಿದ ಸತೀಶ್‌ ರೆಡ್ಡಿಯ ಗನ್‌ಮ್ಯಾನ್‌ ಬಂಧನ, ಎಲ್ಲ ಆರೋಪಿಗಳು ಬೆಂಗಳೂರಿಗೆ ಶಿಫ್ಟ್

ನಿಕಿತಾ ಗೋಡಿಶಾಲ ಅವರ ಕುಟುಂಬದೊಂದಿಗೆ ಭಾರತೀಯ ರಾಯಭಾರ ಕಚೇರಿ ಸಂಪರ್ಕದಲ್ಲಿದೆ. ಸಾಧ್ಯವಿರುವ ಎಲ್ಲ ಕಾನ್ಸುಲರ್ ಸಹಾಯವನ್ನು ನೀಡುತ್ತಿದೆ ಎಂದು ಹೇಳಿದರು. ರಾಯಭಾರ ಕಚೇರಿಯು ಸ್ಥಳೀಯ ಅಧಿಕಾರಿಗಳೊಂದಿಗೆ ಈ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯುತ್ತಿದೆ ಎಂದು ಅದು ಹೇಳಿದೆ.

ಅಂದಹಾಗೆ, ಯುನೈಟೆಡ್ ಸ್ಟೇಟ್ಸ್ ಮತ್ತು ಭಾರತವು ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಸಹಕಾರವನ್ನು ಅನುಮತಿಸುವ ಹಸ್ತಾಂತರ ಒಪ್ಪಂದವನ್ನು ಹೊಂದಿವೆ. ಆದರೂ ಅಂತಹ ಪ್ರಕ್ರಿಯೆಗಳು ಸಾಮಾನ್ಯವಾಗಿ ನ್ಯಾಯಾಲಯದ ಪರಿಶೀಲನೆಗಳು ಮತ್ತು ರಾಜತಾಂತ್ರಿಕ ಸಮನ್ವಯವನ್ನು ಒಳಗೊಂಡಿರುತ್ತವೆ. ಇದು ಸಾಮಾನ್ಯವಾಗಿ ಕೆಲವು ತಿಂಗಳುಗಳವರೆಗೆ ವಿಸ್ತರಿಸುತ್ತದೆ.