ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Canada Shootout: ಕೆನಡಾದಲ್ಲಿ ಗುಂಡಿನ ದಾಳಿ; 22 ವರ್ಷದ ಭಾರತೀಯ ವಿದ್ಯಾರ್ಥಿನಿ ಸಾವು

ಕೆನಡಾದ (Canada) ಒಂಟಾರಿಯೊ ಪ್ರಾಂತ್ಯದ ಹ್ಯಾಮಿಲ್ಟನ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಹ್ಯಾಮಿಲ್ಟನ್‌ನ ಕಿಂಗ್ ಸ್ಟ್ರೀಟ್‌ನಲ್ಲಿ ಗುರುವಾರ ರಾತ್ರಿ ಸಂಭವಿಸಿದ ಗುಂಡಿನ ದಾಳಿಯಲ್ಲಿ ಆಕೆ ಮೃತಪಟ್ಟಿದ್ದಾಳೆ ಹೇಳಲಾಗಿದೆ.

ಗುಂಡು ತಗುಲಿ ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿನಿ ಸಾವು

Profile Vishakha Bhat Apr 19, 2025 3:46 PM

ಒಟ್ಟಾವಾ: ಕೆನಡಾದ (Canada) ಒಂಟಾರಿಯೊ ಪ್ರಾಂತ್ಯದ ಹ್ಯಾಮಿಲ್ಟನ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ (Canada Shootout) ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಹ್ಯಾಮಿಲ್ಟನ್‌ನ ಕಿಂಗ್ ಸ್ಟ್ರೀಟ್‌ನಲ್ಲಿ ಗುರುವಾರ ರಾತ್ರಿ ಸಂಭವಿಸಿದ ಈ ಗುಂಡಿನ ದಾಳಿಯಲ್ಲಿ ಮೊಹಾಕ್ ಕಾಲೇಜಿನಲ್ಲಿ ಓದಿತ್ತಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿನಿ ಹರ್ಸಿಮ್ರತ್ ರಾಂಧವಾಗೆ ಗುಂಡು ತಗುಲಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಕಪ್ಪು ಬಣ್ಣದ ಕಾರಿನ ಪ್ರಯಾಣಿಕನೊಬ್ಬ ಬಿಳಿ ಸೆಡಾನ್ ಕಾರಿನಲ್ಲಿದ್ದವರ ಮೇಲೆ ಗುಂಡು ಹಾರಿಸಿದ್ದಾನೆ ಎಂದು ತಿಳಿದುಬಂದಿದೆ. ಬಳಿಕ ಎರಡೂ ವಾಹನಗಳು ಸ್ಥಳದಿಂದ ಹೊರಟುಹೋಯಿತು ಎಂದು ತಿಳಿದು ಬಂದಿದೆ. ಪೊಲೀಸರ ಪ್ರಕಾರ, ಈ ಗುಂಡಿನ ದಾಳಿಯು ಉದ್ದೇಶಿತ ಗುರಿಯಾಗಿರಲಿಲ್ಲ. ಘಟನೆಯ ಬಗ್ಗೆ ತನಿಖೆ ಆರಂಭವಾಗಿದ್ದು, ಶಂಕಿತರನ್ನು ಗುರುತಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಗುರುವಾರ ಸಂಜೆ 7.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆಕೆಯ ಎದೆಗೆ ಗುಂಡೇಟಿನ ಗಾಯವಾಗಿದ್ದು, ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಪ್ಪು ಬಣ್ಣದ ಮರ್ಸಿಡಿಸ್ ಎಸ್‌ಯುವಿಯ ಪ್ರಯಾಣಿಕನು ಬಿಳಿ ಸೆಡಾನ್‌ನಲ್ಲಿದ್ದವರ ಮೇಲೆ ಗುಂಡು ಹಾರಿಸಿದ್ದಾನೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಟೊರೊಂಟೊದಲ್ಲಿರುವ ಭಾರತದ ರಾಯಭಾರ ಕಚೇರಿಯು, ಭಾರತದ ಯುವ ವಿದ್ಯಾರ್ಥಿಯ ದುರಂತ ಸಾವಿನಿಂದ ತೀವ್ರ ದುಃಖಿತವಾಗಿದೆ ಎಂದು ಹೇಳಿದೆ. ಪ್ರಸ್ತುತ ಕೊಲೆ ತನಿಖೆ ನಡೆಯುತ್ತಿದೆ. ನಾವು ಆಕೆಯ ಕುಟುಂಬದೊಂದಿಗೆ ನಿಕಟ ಸಂಪರ್ಕದಲ್ಲಿದ್ದೇವೆ ಮತ್ತು ಅಗತ್ಯವಿರುವ ಎಲ್ಲಾ ಸಹಾಯವನ್ನು ನೀಡುತ್ತಿದ್ದೇವೆ. ಈ ಕಷ್ಟದ ಸಮಯದಲ್ಲಿ ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ದುಃಖಿತ ಕುಟುಂಬದೊಂದಿಗೆ ಇವೆ" ಎಂದು ಅದು ಶುಕ್ರವಾರ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದೆ.

ಈ ಸುದ್ದಿಯನ್ನೂ ಓದಿ: Bangladesh Unrest: ಬಾಂಗ್ಲಾದೇಶದಲ್ಲಿ ಹಿಂದೂ ಮುಖಂಡನನ್ನು ಕಿಡ್ನ್ಯಾಪ್‌ ಮಾಡಿ ಬರ್ಬರ ಹತ್ಯೆ

ಸ್ಥಳಿಯ ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಗುಂಡಿನ ದಾಳಿ ಪ್ರಕರಣದಲ್ಲಿ ಭಾರತೀಯ ವಿದ್ಯಾರ್ಥಿನಿ ಅಮಾಯಕಳಾಗಿದ್ದಾಳೆ. ಎರಡು ವಾಹನಗಳ ಸವಾರರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾಳೆ. ವಿದ್ಯಾರ್ಥಿನಿ ಸಾವು ಮತ್ತು ಗುಂಡಿನ ದಾಳಿಯ ಸಂಬಂಧ ತನಿಖೆ ನಡೆಸಲಾಗುತ್ತಿದೆ. ನಾವು ವಿಧ್ಯಾರ್ಥಿನಿಯ ಕುಟುಂಬದವರೊಂದಿಗೆ ಸಂಪರ್ಕದಲ್ಲಿದ್ದೇವೆ. ಅವರಿಗೆ ಎಲ್ಲ ರೀತಿಯ ನೆರವು ನೀಡಲಾಗುತ್ತದೆ. ಈ ಕಷ್ಟದ ಸಮಯದಲ್ಲಿ ಅವರ ಜೊತೆಗೆ ನಾವಿದ್ದೇವೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.