ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Iran- Israel War: ಖಮೇನಿ ಹತ್ಯೆ ಖಂಡಿಸಿ ಪ್ರತಿಭಟಿಸಿದ ಕಾಂಗ್ರೆಸ್‌ ಶಾಸಕನಿಗೆ ಈಗ ಸಂಕಷ್ಟ

ಹಿಂದೂ ಸಂಘಟನೆ ಕಾರ್ಯಕರ್ತ ತೇಜಸ್ ಗೌಡ ಅವರು ಶಾಸಕ ಎನ್ಎ ಹ್ಯಾರಿಸ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಡಿಜಿ ಹಾಗೂ ಐಜಿಪಿಗೆ ದೂರು ಸಲ್ಲಿಸಿದ್ದಾರೆ. ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಖಮೇನಿ ಹತ್ಯೆ ಖಂಡಿಸಿ ಪ್ರತಿಭಟಿಸಿದ ಕಾಂಗ್ರೆಸ್‌ ಶಾಸಕನಿಗೆ ಈಗ ಸಂಕಷ್ಟ

ಕಾಂಗ್ರೆಸ್‌ ಶಾಸಕ ಎನ್‌ಎ ಹ್ಯಾರಿಸ್‌, ಖಮೇನಿ -

ಹರೀಶ್‌ ಕೇರ
ಹರೀಶ್‌ ಕೇರ Mar 5, 2026 1:35 PM

ಬೆಂಗಳೂರು, ಮಾರ್ಚ್​ 5: ಇರಾನ್- ಇಸ್ರೇಲ್‌ ಸಮರ (Iran- Israel War) ಸಂದರ್ಭದಲ್ಲಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ali Khamenei) ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ವಿಚಾರ ಇದೀಗ ರಾಜಕೀಯ ಹಾಗೂ ಕಾನೂನು ವಿವಾದಕ್ಕೆ ಕಾರಣವಾಗಿದೆ. ಹೈಕೋರ್ಟ್ ಆದೇಶ ಉಲ್ಲಂಘಿಸಿ ಪ್ರತಿಭಟನೆ ನಡೆಸಲಾಗಿದೆ ಎಂಬ ಆರೋಪದ ಹಿನ್ನೆಲೆ ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ (Congress) ಶಾಸಕ ಎನ್ಎ ಹ್ಯಾರಿಸ್ (NA Harris) ವಿರುದ್ಧ ದೂರು ಸಲ್ಲಿಕೆಯಾಗಿದೆ.

ಇರಾನ್ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಕೆಲವು ಸಂಘಟನೆಗಳು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದವು. ಆದರೆ, ಈ ವೇಳೆ ಹೈಕೋರ್ಟ್ ನಿರ್ದೇಶನ ಉಲ್ಲಂಘಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಸಾರ್ವಜನಿಕ ಪ್ರತಿಭಟನೆಗಳನ್ನು ಫ್ರೀಡಂ ಪಾರ್ಕ್‌ನಲ್ಲೇ ನಡೆಸಬೇಕು ಎಂದು ಹೈಕೋರ್ಟ್ ನಿರ್ದೇಶನ ಇದೆ. ಅದರ ಹೊರತಾಗಿ ಬೇರೆ ಸ್ಥಳದಲ್ಲಿ ಪ್ರತಿಭಟನೆ ನಡೆದಿರುವುದು ವಿವಾದಕ್ಕೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ತೇಜಸ್ ಗೌಡ ಶಾಸಕ ಎನ್ಎ ಹ್ಯಾರಿಸ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಡಿಜಿ ಹಾಗೂ ಐಜಿಪಿಗೆ ದೂರು ಸಲ್ಲಿಸಿದ್ದಾರೆ. ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಪ್ರತಿಭಟನೆ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಕುರಿತು ಪೊಲೀಸರು ಈಗಾಗಲೇ ಹೈಕೋರ್ಟ್ ಗಮನಕ್ಕೆ ತಂದಿದ್ದಾರೆ. ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಲಾಗಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಅಶೋಕ್ ನಗರ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ದೂರು ಸಲ್ಲಿಸಿರುವುದಾಗಿ ತಿಳಿದುಬಂದಿದೆ. ಘಟನೆಯ ಬಗ್ಗೆ ಕಾನೂನು ಪ್ರಕಾರ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ವಿಚಾರ ರಾಜಕೀಯವಾಗಿ ಮತ್ತಷ್ಟು ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ.

ಖಮೇನಿ ಪುತ್ರ ಮೊಜ್ತಬಾ ಖಮೇನಿ ಇರಾನ್‌ನ ಹೊಸ ಸರ್ವೋಚ್ಚ ನಾಯಕ

ಖಮೇನಿ ಹತ್ಯೆ ಖಂಡಿಸಿ ಭಾರತದ ಹಲವೆಡೆ ಮುಸ್ಲಿಮರು ಪ್ರತಿಭಟನೆಗಳನ್ನು ನಡೆಸಿದ್ದಾರೆ. ಕರ್ನಾಟಕದಲ್ಲಿಯೂ ಚಿಕ್ಕಬಳ್ಳಾಪುರದ ಅಲೀಪುರ, ಬೆಂಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ಪ್ರತಿಭಟನೆಗಳು ನಡೆದಿವೆ. ಅಮೆರಿಕದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತೊಂದೆಡೆ ಇರಾನ್-ಇಸ್ರೇಲ್ ಸಂಘರ್ಷ ತೀವ್ರಗೊಂಡಿದ್ದು, ಸಾವಿರಕ್ಕೂ ಹೆಚ್ಚು ಮಂದಿ ಹತರಾಗಿದ್ದಾರೆ. ಬುಧವಾರವಷ್ಟೇ ಶ್ರೀಲಂಕಾ ವ್ಯಾಪ್ತಿಯಲ್ಲಿ ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯನ್ನು ಅಮೆರಿಕದ ಸಬ್​ಮರೀನ್ ಮುಳುಗಿಸಿದ ಪರಿಣಾಮ 87ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಖಮೇನಿಯ ಮಗನೇ ಉತ್ತರಾಧಿಕಾರಿಯಾಗಬೇಕೆಂದು ಇರಾನ್‌ನ ಎಲೈಟ್ ಫೋರ್ಸ್ ಬಯಸಿದ್ದು ಏಕೆ?