ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Tumkur Breaking: ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ: ತುಮಕೂರು ವಿವಿ ಸಿಂಡಿಕೇಟ್ ಸದಸ್ಯನ ಬಂಧನ

ಹಗರಣಕ್ಕೆ ಸಂಬಂಧಿಸಿ ಮೂರು ದಿನಗಳಿಂದ ವಿಚಾರಣೆ ಎದುರಿಸುತ್ತಿದ್ದ ಕರ್ನಾಟಕ ಲೋಕ ಸೇವಾ ಆಯೋಗ(ಕೆಪಿಎಸ್‌ಸಿ)ದ ಹಿಂದಿನ ಪರೀಕ್ಷಾ ನಿಯಂತ್ರಕ, ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ತನಿಖೆ ಚುರುಕುಗೊಳಿಸಿರುವ ಸಿಐಡಿ ಈ ಹಗರಣಕ್ಕೆ ಸಂಬಂಧಿಸಿ ಬಿಜೆಪಿ ಕಾರ್ಯಕರ್ತರಾಗಿರುವ ಬಸವರಾಜ್ ಕನ್ನಾಳೆಯನ್ನು ಇದೀಗ ಬಂಧಿಸಿದೆ.

ತುಮಕೂರು: ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣ(Irregularities in Veterinary Officer Recruitment)ಕ್ಕೆ ಸಂಬಂಧಿಸಿ ಭಾಲ್ಕಿ ತಾಲೂಕಿನ ಡೋಣಗಾಪುರ ಗ್ರಾಮದ ನಿವಾಸಿ ಹಾಗೂ ತುಮಕೂರು ವಿಶ್ವವಿದ್ಯಾಲಯ(Tumkur University)ದ ಸಿಂಡಿಕೇಟ್ ಸದಸ್ಯ, ಬಸವರಾಜ್ ಕನ್ನಾಳೆ ಅವರನ್ನು ದಿಲ್ಲಿಯ ವಿಮಾನ ನಿಲ್ದಾಣದಲ್ಲಿ ಸಿಐಡಿ ಬಂಧಿಸಿದೆ.

2025ರಿಂದ ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೆಟ್ ಸದಸ್ಯರಾಗಿರುವ ಬಸವರಾಜ್ ಕನ್ನಾಳೆ, ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು.

ಇದನ್ನೂ ಓದಿ: KPSC Recruitment Scam: ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಐಎಎಸ್‌ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅರೆಸ್ಟ್

ಈ ಹಗರಣಕ್ಕೆ ಸಂಬಂಧಿಸಿ ಮೂರು ದಿನಗಳಿಂದ ವಿಚಾರಣೆ ಎದುರಿಸುತ್ತಿದ್ದ ಕರ್ನಾಟಕ ಲೋಕ ಸೇವಾ ಆಯೋಗ(ಕೆಪಿಎಸ್‌ಸಿ)ದ ಹಿಂದಿನ ಪರೀಕ್ಷಾ ನಿಯಂತ್ರಕ, ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ತನಿಖೆ ಚುರುಕುಗೊಳಿಸಿರುವ ಸಿಐಡಿ ಈ ಹಗರಣಕ್ಕೆ ಸಂಬಂಧಿಸಿ ಬಿಜೆಪಿ ಕಾರ್ಯಕರ್ತರಾಗಿರುವ ಬಸವರಾಜ್ ಕನ್ನಾಳೆಯನ್ನು ಇದೀಗ ಬಂಧಿಸಿದೆ.

ಭಾಲ್ಕಿ ತಾಲೂಕಿನ ಡೋಣಗಾಪುರ್ ಗ್ರಾಮದ ಹಾಗೂ ಭಾಲ್ಕಿ ನಗರದ ಲೆಕ್ಚರರ್ ಕಾಲನಿಯಲ್ಲಿ ರುವ ಬಸವರಾಜ್ ಕನ್ನಾಳೆ ಮನೆಗೂ ಸಿಐಡಿ ಅಧಿಕಾರಿಗಳು ಭೇಟಿ ನೀಡಿ ಶೋಧ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.