ISIS terrorists arrested: ದೆಹಲಿಯಲ್ಲಿ ಆತ್ಮಾಹುತಿ ದಾಳಿ ಸಂಚು? ಇಬ್ಬರು ಶಂಕಿತ ISIS ಭಯೋತ್ಪಾದಕರ ಬಂಧನ
ದೆಹಲಿ ಪೊಲೀಸ್ ವಿಶೇಷ ಘಟಕವು (Delhi Police) ಶುಕ್ರವಾರ ಐಸಿಸ್ ಮಾಡ್ಯೂಲ್ ಅನ್ನು ಭೇದಿಸಿದ್ದು, "ಫಿದಾಯೀನ್" (ಆತ್ಮಹತ್ಯಾ) ದಾಳಿಗೆ ತರಬೇತಿ ಪಡೆಯುತ್ತಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನು ಬಂಧಿಸಿದೆ ಎಂದು ತಿಳಿದು ಬಂದಿದೆ. "ಆರೋಪಿಗಳು ಐಸಿಸ್ ಜೊತೆ ಸಂಬಂಧ ಹೊಂದಿದ್ದಾರೆ ಮತ್ತು ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ದಾಳಿಯನ್ನು ಯೋಜಿಸುತ್ತಿದ್ದಾರೆ ತಿಳಿದುಬಂದಿದೆ.
-
Vishakha Bhat
Oct 24, 2025 12:53 PM
ದೆಹಲಿ: ಪೊಲೀಸ್ ವಿಶೇಷ ಘಟಕವು (Delhi Police) ಶುಕ್ರವಾರ ಐಸಿಸ್ ಮಾಡ್ಯೂಲ್ ಅನ್ನು ಭೇದಿಸಿದ್ದು, "ಫಿದಾಯೀನ್" (ಆತ್ಮಹತ್ಯಾ) ದಾಳಿಗೆ ತರಬೇತಿ ಪಡೆಯುತ್ತಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನು ಬಂಧಿಸಿದೆ ಎಂದು ತಿಳಿದು ಬಂದಿದೆ. ದೆಹಲಿಯ ಸಾದಿಕ್ ನಗರ ಮತ್ತು ಭೋಪಾಲ್‌ನಲ್ಲಿ ನಡೆದ ಸಂಘಟಿತ ಕಾರ್ಯಾಚರಣೆಯ ನಂತರ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಅದ್ನಾನ್ ಎಂಬ ಹೆಸರಿನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
"ಆರೋಪಿಗಳು ಐಸಿಸ್ ಜೊತೆ ಸಂಬಂಧ ಹೊಂದಿದ್ದಾರೆ ಮತ್ತು ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ದಾಳಿಯನ್ನು ಯೋಜಿಸುತ್ತಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅವರಿಂದ ಎಲೆಕ್ಟ್ರಾನಿಕ್ ಸಾಧನಗಳು ಮತ್ತು ಅಪರಾಧ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ" ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಂಧನಗಳು ದೆಹಲಿಯಲ್ಲಿ ಸಂಭವನೀಯ ಭಯೋತ್ಪಾದಕ ದಾಳಿಯನ್ನು ತಪ್ಪಿಸಿವೆ ಎಂದು ಅವರು ಹೇಳಿದರು.
ಕಾರ್ಯಾಚರಣೆಯ ಸಮಯದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸಂಗ್ರಹವನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚುವರಿ ಆಯುಕ್ತ ಪ್ರಮೋದ್ ಕುಶ್ವಾಹ ಮತ್ತು ಎಸಿಪಿ ಲಲಿತ್ ಮೋಹನ್ ನೇಗಿ ನೇತೃತ್ವದ ತಂಡವು ಈ ಕಾರ್ಯಾಚರಣೆಯನ್ನು ನಡೆಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಹಿರಂಗಗೊಂಡ ಮಾಡ್ಯೂಲ್ ಐಸಿಸ್‌ನಿಂದ ಪ್ರೇರಿತವಾಗಿದೆ ಎಂದು ನಂಬಲಾಗಿದೆ ಮತ್ತು ಇಸ್ಲಾಮಿಕ್ ಸ್ಟೇಟ್‌ನ ಸೋಗಿನಲ್ಲಿ ಅಂತಹ ಜಾಲಗಳನ್ನು ನಿರ್ವಹಿಸುವ ಪಾಕಿಸ್ತಾನದ ಐಎಸ್‌ಐ ಜೊತೆ ಸಂಪರ್ಕವನ್ನು ಹೊಂದಿರಬಹುದು ಎಂದು ಊಹಿಸಲಾಗಿದೆ. ಸಂಪೂರ್ಣ ಜಾಲವನ್ನು ಪತ್ತೆಹಚ್ಚಲು ಮತ್ತು ಇತರ ಸಹಚರರನ್ನು ಗುರುತಿಸಲು ಅಧಿಕಾರಿಗಳು ಹೆಚ್ಚಿನ ಶೋಧ ಕಾರ್ಯವನ್ನು ನಡೆಸುತ್ತಿದ್ದಾರೆ. ಇಬ್ಬರು ಶಂಕಿತರ ವಿಚಾರಣೆ ಮುಂದುವರೆದಿದ್ದು, ಏಜೆನ್ಸಿಗಳು ಅವರ ಯೋಜನೆಗಳು ಮತ್ತು ಅಂತರರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಭಾವ್ಯ ಸಂಪರ್ಕಗಳ ಬಗ್ಗೆ ತನಿಖೆ ನಡೆಸುತ್ತಿವೆ.
ಈ ಸುದ್ದಿಯನ್ನೂ ಓದಿ: Central Government: ಜೈಲುಗಳಿಂದ ನಡೆಯುತ್ತಿರುವ ಭಯೋತ್ಪಾದಕ ಕೃತ್ಯಕ್ಕೆ ಬ್ರೇಕ್ ಹಾಕಲು ಕೇಂದ್ರದಿಂದ ಮಾಸ್ಟರ್ ಪ್ಲಾನ್
ಸೆಪ್ಟೆಂಬರ್ ದೆಹಲಿ ಪೊಲೀಸರ ವಿಶೇಷ ಘಟಕವು ಕೇಂದ್ರೀಯ ಗುಪ್ತಚರ ಸಂಸ್ಥೆಗಳು ಮತ್ತು ಜಾರ್ಖಂಡ್ (Jharkhand) ಭಯೋತ್ಪಾದನಾ ನಿಗ್ರಹ ದಳದ (Anti-Terrorism Squad) ಸಹಯೋಗದೊಂದಿಗೆ ದೇಶಾದ್ಯಂತ ಎರಡು ವಿಭಿನ್ನ ಸ್ಥಳಗಳಲ್ಲಿ ಇಬ್ಬರು ISIS ಶಂಕಿತ ಭಯೋತ್ಪಾದಕರನ್ನು ಬಂಧಿಸಿತ್ತು.