ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Accident News: ಬೆಂಗಳೂರಿನಲ್ಲಿ ವಿದ್ಯುತ್ ಕಂಬ ಮುರಿದುಬಿದ್ದು ಇಬ್ಬರು ಮಹಿಳೆಯರು ಸಾವು

ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ವಿದ್ಯುತ್ ಕಂಬಕ್ಕೆ ಜೆಸಿಬಿ ಡಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಬಿದ್ದಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುಮತಿ (35) ಮತ್ತು ಸೋನಿ (36) ಎಂಬುವವರು ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ವಿದ್ಯುತ್ ಕಂಬ ಮುರಿದುಬಿದ್ದು ಇಬ್ಬರು ಮಹಿಳೆಯರು ಸಾವು

ವಿದ್ಯುತ್‌ ಕಂಬ ಬಿದ್ದು ಮಹಿಳೆಯರ ಸಾವು

ಹರೀಶ್‌ ಕೇರ ಹರೀಶ್‌ ಕೇರ Mar 18, 2025 8:51 AM

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ (Bengaluru News) ಮತ್ತೊಂದು ಘೋರ ದುರಂತ ಸಂಭವಿಸಿದೆ. ಜೆಸಿಬಿ ಡಿಕ್ಕಿಯಾಗಿ (Accident News) ವಿದ್ಯುತ್ ಕಂಬ ಮುರಿದುಬಿದ್ದ ಪರಿಣಾಮ ಇಬ್ಬರು ಮಹಿಳೆಯರು (Women death) ಮೃತಪಟ್ಟಿದ್ದಾರೆ. ಬೆಂಗಳೂರಿನ ಸದ್ದುಗುಂಟೆ ಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ವಿದ್ಯುತ್ ಕಂಬಕ್ಕೆ ಜೆಸಿಬಿ ಡಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಬಿದ್ದಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುಮತಿ (35) ಮತ್ತು ಸೋನಿ (36) ಎಂಬುವವರು ಮೃತಪಟ್ಟಿದ್ದಾರೆ.

ಮೃತ ಸೋನಿ ಕುಮಾರಿ ಬಿಹಾರ ಮೂಲದವರಾಗಿದ್ದು ಬೆಂಗಳೂರಿನಲ್ಲಿ ನೆಲೆಸಿದ್ದರು. ಮೃತ ಸುಮತಿ ತಮಿಳುನಾಡು ಮೂಲದವರಾಗಿದ್ದು, ಪತಿ ಹಾಗೂ ಇಬ್ಬರು ಮಕ್ಕಳ ಜೊತೆ ಸುದ್ದಗುಂಟೆಪಾಳ್ಯದಲ್ಲಿ ನೆಲೆಸಿದ್ದರು. ಇಬ್ಬರು ತಮ್ಮ ಮಕ್ಕಳನ್ನು ಟ್ಯೂಷನ್‌ನಿಂದ ಮನೆಗೆ ಕರೆದುಕೊಂಡು ಬರುವಾಗ ಈ ಘಟನೆ ನಡೆದಿದೆ. ಘಟನೆಯಲ್ಲಿ ಮಕ್ಕಳಿಗೂ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೋಳಿ ಹಬ್ಬದ ಪಾರ್ಟಿಯಲ್ಲಿ ವಿಷಾಹಾರ; ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಮಂಡ್ಯ: ಹೋಳಿ ಹಬ್ಬದ (Holi Festival) ಪಾರ್ಟಿಯಲ್ಲಿ ಕಲುಷಿತ ಆಹಾರ (food poison) ಸೇವಿಸಿದ ಪ್ರಕರಣದಲ್ಲಿ ಗಂಭೀರವಾಗಿ ಅಸ್ವಸ್ಥನಾಗಿದ್ದ ಮತ್ತೊಬ್ಬ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವಿಗೆ (Student death) ಈಡಾಗಿದ್ದಾನೆ. ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿ ನಮೀಬ್ ಮೃತಪಟ್ಟಿರುವುದಾಗಿ ವರದಿಯಾಗಿದ್ದು, ಇದಕ್ಕೂ ಮುಂಚೆ 6ನೇ ತರಗತಿ ವಿದ್ಯಾರ್ಥಿ ಕೇರ್ಲಾಂಗ್ (13) ಸಾವನ್ನಪ್ಪಿದ್ದ. ಈ ಮೂಲಕ ಫುಡ್ ಪಾಯಿಸನ್‌ನಿಂದ ಮೃತಪಟ್ಟವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.

ಮಂಡ್ಯ (Mandya news) ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದಲ್ಲಿ ಘಟನೆ ನಡೆದಿತ್ತು. ಮಳವಳ್ಳಿಯಲ್ಲಿ ಉದ್ಯಮಿಯೊಬ್ಬರು ಹೋಳಿ ಹಬ್ಬ ಆಚರಿಸಿದ್ದರು. ಈ ವೇಳೆ ಉಳಿದ ಊಟವನ್ನು ಅನಾಥಾಶ್ರಮಕ್ಕೆ ನೀಡಿದ್ದರು. ಈ ಊಟ ಸೇವಿಸಿ ಫುಡ್ ಪಾಯ್ಸನ್ ಆಗಿ ಮಕ್ಕಳು ಅಸ್ವಸ್ಥರಾಗಿದ್ದಾರೆ. ಊಟ ಸೇವಿಸಿದ್ದ ಹಲವರು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥರಾದ ವಿದ್ಯಾರ್ಥಿಗಳಿಗೆ ಮಂಡ್ಯ ಮಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಘಟನೆಯ ಸಂಬಂಧ ಶಿಕ್ಷಣ ಸಂಸ್ಥೆಯ ಆರು ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈ ಕುರಿತು ಬಿಇಓ ಉಮಾ ನೀಡಿದ ದೂರಿನ ಆಧಾರದ ಮೇಲೆ ಕೇಸ್ ದಾಖಲಾಗಿದೆ. ಬಿಇಓ ನೀಡಿದ ದೂರಿನ ಹಿನ್ನಲೆಯಲ್ಲಿ, ಹೋಳಿ ಹಬ್ಬ ಆಯೋಜಿಸಿದ್ದ ಪುಷ್ಪೇಂದ್ರ ಕುಮಾರ್, ಹೋಟೆಲ್ ಮಾಲೀಕ ಸಿದ್ದರಾಜು, ಕಲ್ಯಾಣ ಮಂಟಪದ ನೌಕರ ಕೃಷ್ಣ, ಗೋಕುಲ ವಿದ್ಯಾ ಸಂಸ್ಥೆಯ ಮುಖ್ಯಸ್ಥ ಲಂಕೇಶ್ ಸೇರಿದಂತೆ 6 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಇದನ್ನೂ ಓದಿ: Davanagere News: ಬಟ್ಟೆ ತೊಳೆಯುವ ವೇಳೆ ಕೆರೆಯಲ್ಲಿ ಮುಳುಗಿ ಮೂವರು ಮಹಿಳೆಯರ ಸಾವು