ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Ranya Rao: ರನ್ಯಾ ರಾವ್‌ ಪ್ರಕರಣದಲ್ಲಿ ಮೂರನೇ ಆರೋಪಿ ಬಂಧನ

ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ DRI ಅಧಿಕಾರಿಗಳು ಪ್ರಮುಖ ಆರೋಪಿಯಾಗಿರುವ ನಟಿ ರನ್ಯಾ ರಾವ್ ಹಾಗೂ ಆಕೆಯ ಸ್ನೇಹಿತ ತರುಣ್ ರಾಜುನನ್ನು ಆರೆಸ್ಟ್ ಮಾಡಿದ್ದರು. ಇದೀಗ ಮತ್ತೊಬ್ಬ ಆರೋಪಿಯನ್ನು ಅಧಿಕಾರಿಗಳು ಆರೆಸ್ಟ್ ಮಾಡಿದ್ದಾರೆ.

ರನ್ಯಾ ರಾವ್‌ ಪ್ರಕರಣದಲ್ಲಿ ಮೂರನೇ ಆರೋಪಿ ಬಂಧನ

ರನ್ಯಾ ರಾವ್

ಹರೀಶ್‌ ಕೇರ ಹರೀಶ್‌ ಕೇರ Mar 27, 2025 11:43 AM

ಬೆಂಗಳೂರು: ನಟಿ ರನ್ಯಾ ರಾವ್ (Kannada Actress Ranya Rao) ಚಿನ್ನ ಕಳ್ಳಸಾಗಣೆ (Gold Smuggling) ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಬುಧವಾರ ಮತ್ತೊಬ್ಬ ಆರೋಪಿಯನ್ನು ಬಂಧನಕ್ಕೊಳಪಡಿಸಿದೆ. ಬಂಧಿತನನ್ನು ಬಳ್ಳಾರಿ ಮೂಲದ ಚಿನ್ನದ ವ್ಯಾಪಾರಿ ಸಾಹಿಲ್ ಸಕಾರಿಯಾ ಜೈನ್ ಎಂದು ಗುರ್ತಿಸಲಾಗಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಮೂರನೇ ಆರೋಪಿ ಬಂಧನವಾಗಿದೆ. ಈತ ಭಾರತದಲ್ಲಿ ಕಳ್ಳಸಾಗಣೆ ಮಾಡಿದ ಚಿನ್ನವನ್ನು ಮಾರಾಟ ಮಾಡುವ ಮತ್ತು ಹವಾಲಾ ವಹಿವಾಟುಗಳಿಗೆ ಅನುಕೂಲ ಮಾಡಿಕೊಡುವ ಕೆಲಸದಲ್ಲಿ ಭಾಗಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ DRI ಅಧಿಕಾರಿಗಳು ಪ್ರಮುಖ ಆರೋಪಿಯಾಗಿರುವ ನಟಿ ರನ್ಯಾ ರಾವ್ ಹಾಗೂ ಆಕೆಯ ಸ್ನೇಹಿತ ತರುಣ್ ರಾಜುನನ್ನು ಆರೆಸ್ಟ್ ಮಾಡಿದ್ದರು. ಇದೀಗ ಮತ್ತೊಬ್ಬ ಆರೋಪಿಯನ್ನು ಅಧಿಕಾರಿಗಳು ಆರೆಸ್ಟ್ ಮಾಡಿದ್ದಾರೆ. ಹೀಗಾಗಿ ಬಂಧಿತರ ಸಂಖ್ಯೆ 3ಕ್ಕೆ ಏರಿದೆ. ಸಾಹಿಲ್‌ ಸಕಾರಿಯಾ ಜೈನ್‌, ವಿದೇಶದಿಂದ ಕಳ್ಳ ಸಾಗಣೆ ಮೂಲಕ ಚಿನ್ನ ಮಾರಾಟದಲ್ಲಿ ರನ್ಯಾಗೆ ನೆರವು ನೀಡಿದ್ದ ಎಂದು ಹೇಳಲಾಗುತ್ತಿದ್ದು, ಈ ಸಂಬಂಧ ಡಿಜಿಟಲ್ ದಾಖಲೆಗಳು ಕೂಡ ಪೊಲೀಸರಿಗೆ ಲಭ್ಯವಾಗಿದೆ ಎಂದು ಮೂಲಗಳು ತಿಳಿಸಿವೆ. ರನ್ಯಾ ಮೂಲಕ ಭಾರತಕ್ಕೆ ಬಂದ ಚಿನ್ನವನ್ನು ಮಾರಾಟ ಮಾಡಲು ಹಲವು ಬಾರಿ ಈತ ಸಹಾಯ ಮಾಡಿದ್ದ ಎಂದು ಹೇಳಲಾಗುತ್ತಿದೆ.

ದುಬೈನಿಂದ ಕಳ್ಳಸಾಗಣೆ ಮೂಲಕ ನಗರಕ್ಕೆ ಚಿನ್ನ ತಂದ ವೇಳೆ ರನ್ಯಾ ದುಬೈ ಫೋನ್ ಸಂಖ್ಯೆಯ ಮೂಲಕ ಸಾಹಿಲ್‌ನನ್ನು ಸಂಪರ್ಕಿಸಿದ್ದಾಳೆ. ಈ ಸಂಭಾಷಣೆ ಅಧಿಕಾರಿಗಳಿಗೆ ಸಿಕ್ಕಿದ್ದು, ಹೀಗಾಗಿ ಕಸ್ಟಮ್ಸ್ ಕಾಯ್ದೆ, 1962ರ ಸೆಕ್ಷನ್ 108 ರ ಅಡಿಯಲ್ಲಿ ಈತನನ್ನು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಬಂಧಿಸಿ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನ್ಯಾಯಾಲಯವು ಆರೋಪಿಯನ್ನು ಮಾರ್ಚ್‌ 29ರ ವರೆಗೆ ಡಿಆರ್‌ಐ ಕಸ್ಟಡಿಗೆ ನೀಡಿ ಆದೇಶಿಸಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ದುಬೈನಿಂದ ಬೆಂಗಳೂರಿಗೆ ಬಂದಿದ್ದ ರನ್ಯಾ ತನ್ನ ಸೊಂಟ ಹಾಗೂ ದೇಹದ ಇತರೆ ಭಾಗಗಳಲ್ಲಿ ಕ್ರೇಪ್ ಬ್ಯಾಂಡೇಜ್ ಮತ್ತು ಟಿಶ್ಯೂ ಬಳಸಿ ಚಿನ್ನದ ಬಾರ್ ಗಳನ್ನು ಸುತ್ತಿಕೊಂಡಿದ್ದಳು ಹಾಗೂ ಶೂ ಹಾಗೂ ಮುಂಭಾಗದ ಜೇಲಿನಲ್ಲೂ ಚಿನ್ನದ ಬಾರ್ ಗಳನ್ನು ಬಚ್ಚಿಟ್ಟಿದ್ದಳು ಎಂದು ಡಿಆರ್‌ಐ ಅಧಿಕಾರಿಗಳು ಆರೋಪಿಸಿದ್ದಾರೆ. ‌

ಇದನ್ನೂ ಓದಿ: Basangouda Patil Yatnal: ನಟಿ ರನ್ಯಾ ರಾವ್ ಬಗ್ಗೆ ಅವಾಚ್ಯ ಪದ ಬಳಕೆ ಆರೋಪ: ಶಾಸಕ ಯತ್ನಾಳ್ ವಿರುದ್ಧ ಎಫ್‌ಐಆರ್‌