ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Betting Case: ಗೃಹ ಸಚಿವ ಪರಮೇಶ್ವರ್‌ಗೆ ʼಬೆಟ್ಟಿಂಗ್‌ʼ ಸಂಕಷ್ಟ; FIR ದಾಖಲಿಸಿ ತನಿಖೆಗೆ ಕೋರ್ಟ್ ಆದೇಶ

ತುಮಕೂರಿನಲ್ಲಿ ನಡೆದಿದ್ದ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ವೇಳೆ ಬೆಟ್ಟಿಂಗ್‌ ಕಟ್ಟುವ ಹೇಳಿಕೆ ನೀಡಿದ್ದರಿಂದ ಗೃಹ ಸಚಿವ ಜಿ.ಪರಮೇಶ್ವರ್‌ ಅವರಿಗೆ ಸಂಕಷ್ಟ ಎದುರಾಗಿದೆ. ಈ ಕುರಿತು ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸಲು ಬೆಂಗಳೂರಿನ ಕೋರ್ಟ್‌ ಆದೇಶ ಹೊರಡಿಸಿದೆ.

ಗೃಹ ಸಚಿವ ಜಿ.ಪರಮೇಶ್ವರ್‌.

ತುಮಕೂರು: ಕಬಡ್ಡಿ ಪಂದ್ಯಾವಳಿ ವೇಳೆ 500 ರೂಪಾಯಿ ಬೆಟ್ಟಿಂಗ್ (Betting Case) ಕಟ್ಟುವುದಾಗಿ ಹೇಳಿಕೆ ನೀಡಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ್ (G Parameshwar) ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ನಗರದ 42ನೇ ಎಸಿಜೆಎಂ ನ್ಯಾಯಾಲಯ ಆದೇಶ ನೀಡಿದೆ.

ಏನಿದು ಪ್ರಕರಣ?

ತುಮಕೂರಿನಲ್ಲಿ 2025ರ ಅಕ್ಟೋಬರ್‌ನಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ವೀಕ್ಷಿಸಲು ಗೃಹ ಸಚಿವ ಜಿ.ಪರಮೇಶ್ವರ್‌ ತೆರಳಿದ್ದರು. ಈ ವೇಳೆ ವಿಜಯಪುರ ತಂಡ ಗೆಲ್ಲುತ್ತದೆ, 500 ರೂಪಾಯಿ ಬೆಟ್ಟಿಂಗ್‌ ಕಟ್ಟೋಣ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರಿಗೆ ಹೇಳಿದ್ದರು. ಅಂತಿಮ ಪಂದ್ಯದಲ್ಲಿ ದಕ್ಷಿಣ ಕನ್ನಡ ತಂಡವು 36-26 ಅಂಕಗಳಿಂದ ವಿಜಯಪುರ ತಂಡವನ್ನು ಸೋಲಿಸಿತ್ತು. ಇದರಿಂದಾಗಿ ಬಾಜಿ ಹಣವನ್ನು ಕಳೆದುಕೊಂಡ ಸಚಿವ ಪರಮೇಶ್ವರ್, ವಿಜೇತ ತಂಡಕ್ಕೆ ಪ್ರಶಸ್ತಿ ವಿತರಿಸುವಾಗ ಬೆಟ್ಟಿಂಗ್ ವಿಷಯವನ್ನು ಬಹಿರಂಗಪಡಿಸಿದ್ದರು.

ವಿಜೇತ ತಂಡಕ್ಕೆ ಬಹುಮಾನ ವಿತರಿಸಿ ಮಾತನಾಡಿದ್ದ ನಂತರ ಪರಮೇಶ್ವರ್ ಅವರು, ನಾನು 500 ಕಳೆದುಕೊಂಡು ಬಿಟ್ಟೆ. ವಿಜಯಪುರ ತಂಡ ಗೆಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಜತೆ ಬೆಟ್ಟಿಂಗ್ ಕಟ್ಟಿದ್ದೆ. ಆದರೆ ಸೋತೆ ಎಂದು ತಾವೇ ಹೇಳಿಕೊಂಡಿದ್ದರು. ಇದದಿಂಧ ಭಾರಿ ಟೀಕೆಗೆ ಗುರಿಯಾಗಿದ್ದರು.

ಗೃಹ ಸಚಿವರು ತಮಾಷೆಗಾಗಿ ಬೆಟ್ಟಿಂಗ್ ಹೇಳಿಕೆ ಅವರಿಗೆ ಸಂಕಷ್ಟ ತಂದಿದೆ. ಸಾರ್ವಜನಿಕವಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಯೇ ಬೆಟ್ಟಿಂಗ್ ಪ್ರೋತ್ಸಾಹಿಸುವುದು ಅಥವಾ ಅದರಲ್ಲಿ ಭಾಗಿಯಾಗುವುದು ಅಪರಾಧ ಎಂದು ಆಕ್ಷೇಪ ವ್ಯಕ್ತಪಡಿಸಿ ಎಚ್.ಆರ್. ನಾಗಭೂಷಣ್ ಎಂಬುವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಇಡಿ ದಾಳಿ: ಕೇಂದ್ರ ಸರ್ಕಾರ ಕಾಂಗ್ರೆಸ್‌ನವರನ್ನು ಟಾರ್ಗೆಟ್‌ ಮಾಡಿದೆ ಎಂದ ಸಿಎಂ

ಈ ದೂರನ್ನು ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಮೂರ್ತಿ ಕೆ.ಎನ್. ಶಿವಕುಮಾರ್ ಅವರು, ಗೃಹ ಸಚಿವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಆದೇಶಿಸಿದ್ದಾರೆ. ಈ ಕುರಿತು ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ತುಮಕೂರಿನ ಕೂಡಿಗೇಹಳ್ಳಿ ಪೊಲೀಸ್ ಠಾಣೆಗೆ ನ್ಯಾಯಾಲಯ ಸೂಚನೆ ನೀಡಿದೆ.