ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Murder Case: ಆಸ್ತಿ ವಿವಾದ; ತಂದೆಯನ್ನೇ ಮಚ್ಚಿನಿಂದ ಕೊಚ್ಚಿ ಕೊಲೆಗೆತ್ನಿಸಿದ ಪಾಪಿ ಮಗ

ವ್ಯಕ್ತಿಯೊಬ್ಬ ಜಮೀನಿನ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ತನ್ನ ತಂದೆಯನ್ನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ತ್ರಿಶೂಲ್‌ನಲ್ಲಿ ನಡೆದಿದೆ. ಆರೋಪಿಯನ್ನು ವಿಷ್ಣು ಎಂದು ಗುರುತಿಸಲಾಗಿದೆ. ಆರೋಪಿಯು ಮುತ್ರಾತಿಕ್ಕರ ನಿವಾಸಿಯಾಗಿದ್ದು, ಆತನ ತಂದೆ ಶಿವನ್ ಆಟೋ ಚಾಲಕ ಎಂದು ತಿಳಿದು ಬಂದಿದೆ.

ತಿರುವನಂತಪುರಂ: ವ್ಯಕ್ತಿಯೊಬ್ಬ ಜಮೀನಿನ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ತನ್ನ ತಂದೆಯನ್ನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ (Murder Case) ಘಟನೆ ತ್ರಿಶೂಲ್‌ನಲ್ಲಿ ನಡೆದಿದೆ. ಆರೋಪಿಯನ್ನು ವಿಷ್ಣು ಎಂದು ಗುರುತಿಸಲಾಗಿದ್ದು, ಆಸ್ತಿ ವಿಚಾರವಾಗಿ ತಂದೆ-ಮಗನ ನಡುವೆ ಆಗಾಗ ವಾಗ್ವಾದ ನಡೆಯುತ್ತಲೇ ಇತ್ತು ಎಂದು ತಿಳಿದು ಬಂದಿದೆ. ತಂದೆಯ ಕೊಲೆ ಮಾಡಿದ ಬಳಿಕ ಮನೆಯ ಬಾಗಿಲು ಹಾಕಿಕೊಂಡು ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಮೂರು ಗಂಟೆಯ ಬಳಿಕ ಪೊಲೀಸರು ಆತನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯು ಮುತ್ರಾತಿಕ್ಕರ ನಿವಾಸಿಯಾಗಿದ್ದು, ಆತನ ತಂದೆ ಶಿವನ್ ಆಟೋ ಚಾಲಕ ಎಂದು ತಿಳಿದು ಬಂದಿದೆ. ಶನಿವಾರ ಆಸ್ತಿ ಪತ್ರಗಳ ವಿಚಾರದಲ್ಲಿ ತಂದೆ ಮತ್ತು ಮಗನ ನಡುವೆ ವಾಗ್ವಾದ ನಡೆದಿದೆ. ಮಾತು ಉಲ್ಬಣವಾಗುತ್ತಿದ್ದಂತೆ, ಆ ವ್ಯಕ್ತಿ ತನ್ನ ತಂದೆಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಸ್ಥಳೀಯ ವರದಿಗಳ ಪ್ರಕಾರ, ಬಾಡಿಗೆ ಮನೆಯಲ್ಲಿ ಈ ಘಟನೆ 1.30 ರ ಸುಮಾರಿಗೆ ನಡೆದಿದೆ. ವಿಷ್ಣು ತಾನು ಕಾಗದಗಳನ್ನು ಬಾವಿಗೆ ಎಸೆದಿದ್ದೇನೆ ಎಂದು ಹೇಳಿದ್ದರಿಂದ ಈ ಗಲಾಟೆ ಶುರುವಾಗಿತ್ತು. ಈ ಮಾತಿನ ಚಕಮಕಿ ಹಿಂಸಾತ್ಮಕವಾಗಿ ಮಾರ್ಪಟ್ಟಿತು ಮತ್ತು ವಿಷ್ಣು ತನ್ನ ತಂದೆಯ ಮೇಲೆ ಹರಿತವಾದ ವಸ್ತುವಿನಿಂದ ಹಲ್ಲೆ ಮಾಡಿದ್ದಾನೆಂದು ಆರೋಪಿಸಲಾಗಿದೆ.

ವರದಿಯ ಪ್ರಕಾರ, ಆರೋಪಿ ಮೊದಲು ಅಡುಗೆಮನೆಯಲ್ಲಿ ತಂದೆ ಮೇಲೆ ಹಲ್ಲೆ ನಡೆಸಿ, ನಂತರ ಮನೆಯ ಹೊರಗೆ ಓಡಿಸಿ ಮತ್ತೆ ಹಲ್ಲೆ ನಡೆಸಿದ್ದಾನೆ. ತಂದೆಗೆ ಗಂಭೀರ ಗಾಯಗಳಾಗಿದ್ದು, ಪ್ರಸ್ತುತ ಕೋಮಾದಲ್ಲಿದ್ದಾರೆ. ಆರೋಪಿಯ ತಾಯಿ ಹಾಗೂ ಇತರ ಸಂಬಂಧಿಕರು ಅವರನ್ನು ಮಗನಿಂದ ರಕ್ಷಿಸಿ ಪೊಲೀಸರಿಗೆ ವಿಷಯ ತಲುಪಿಸಿದ್ದಾರೆ. ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿದ್ದರು, ಆರೋಪಿ ಮಗ ಮನೆಯ ಮೊದಲ ಮಹಡಿಯಲ್ಲಿ ಬೀಗ ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸುವುದಾಗಿ ಬೆದರಿಕೆ ಹಾಕಿದ್ದ. 5.30 ರ ಸುಮಾರಿಗೆ ಅವನನ್ನು ವಶಕ್ಕೆ ತೆಗೆದುಕೊಳ್ಳಲಾಯಿತು.

ಈ ಸುದ್ದಿಯನ್ನೂ ಓದಿ: Zubeen Garg: ಜುಬೀನ್ ಗಾರ್ಗ್‌ನನ್ನು ಕೊಲೆ ಮಾಡಿದ್ದು ಈತನೇ......... ಹೊಸ ಬಾಂಬ್‌ ಸಿಡಿಸಿದ ಬ್ಯಾಂಡ್‌ಮೇಟ್

ತನ್ನ ಹೆತ್ತವರಿಂದ ದೂರವಾಗಿ ವಾಸಿಸುತ್ತಿದ್ದ ವಿಷ್ಣು ಆಗಾಗ್ಗೆ ಮನೆಯಲ್ಲಿ ಒಬ್ಬಂಟಿಯಾಗಿ ವಿಚಿತ್ರ ಆಚರಣೆಗಳು ಮತ್ತು ಮಾಂತ್ರಿಕ ಆಚರಣೆಗಳನ್ನು ಮಾಡುತ್ತಿದ್ದ ಎಂದು ನೆರೆಹೊರೆಯವರು ಪೊಲೀಸರಿಗೆ ತಿಳಿಸಿದ್ದಾರೆ.

Vishakha Bhat Heggar

View all posts by this author