ಚಾಮರಾಜನಗರ: ಆಭರಣ ತಯಾರಕರೊಬ್ಬರ ಕಾರನ್ನು ಅಡ್ಡಗಟ್ಟಿ ಕೆಜಿಗಟ್ಟಲೆ ಚಿನ್ನ ದೋಚಿದ ಪ್ರಕರಣ ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಮೂಲೆಹೊಳೆ ಚೆಕ್ ಪೋಸ್ಟ್ (Robbery Case) ಬಳಿ ನಡೆದಿದೆ. ನವೆಂಬರ್ 20ರ ರಾತ್ರಿ ಆಭರಣ ತಯಾರಕ ಕೇರಳ ರಾಜ್ಯದ ಕ್ಯಾಲಿಕೇಟ್ ನಿವಾಸಿ ವಿನು ಪೊಲೀಸರಿಗೆ ದೂರು ನೀಡಿದ್ದು, ಮಂಡ್ಯದ ರಾಜೇಶ್ ಜ್ಯುವೆಲರ್ಸ್ ಎಂಬಾತನಿಂದ ಆಭರಣ ತಯಾರಿಕೆಗಾಗಿ 800 ಗ್ರಾಂ 24 ಕ್ಯಾರೆಟ್ ಚಿನ್ನದ ಗಟ್ಟಿ ಹಾಗೂ 518 ಗ್ರಾಂ 22 ಕ್ಯಾರೆಟ್ ಚಿನ್ನವನ್ನು ಖರೀದಿಸಿ ಬಂಡೀಪುರದ ಮೂಲೆಹೊಳೆ ಮೂಲಕ ತೆರಳುತ್ತಿದ್ದರು. ಇದೇ ಸಮಯದಲ್ಲಿ ಎರಡು ಇನ್ನೋವಾ ಹಾಗೂ ಒಂದು ಇಟಿಯೋಸ್ ವಾಹನದಲ್ಲಿ ಬಂದ ದರೋಡೆಕೋರರು, ಮೊಬೈಲ್ ನೆಟ್ವರ್ಕ್ ಸಿಗದ ಸ್ಥಳದಲ್ಲಿ ಕಾರನ್ನು ಅಡ್ಡಗಟ್ಟಿ ಕಾರು ಸಮೇತ ಚಿನ್ನವನ್ನು ಅಪಹರಿಸಿದ್ದಾರೆ ಎಂದು ತಿಳಿದು ಬಂದಿದೆ.
ಗುಂಡ್ಲುಪೇಟೆ ಠಾಣೆಯಲ್ಲಿ ದರೋಡೆಯ ಸಂಪೂರ್ಣ ಮಾಹಿತಿ ಪಡೆದ ಪೊಲೀಸರು ತನಿಖೆ ನಡೆಸುತ್ತಿದ್ದು, ಆಭರಣ ತಯಾರಕ ವಿನು ಸಲ್ಲಿಸಿದ ಚಿನ್ನದ ಕೆಲವು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಚಿನ್ನ ಪಡೆಯುವ ಹಾಗೂ ಚಿನ್ನ ಸಾಗಾಟದ ಎಲ್ಲಾ ಮಾರ್ಗದ ಮಾಹಿತಿಯನ್ನು ಪಡೆದು ಪೂರ್ವನಿಯೋಜಿತವಾಗಿ ಸಂಚು ರೂಪಿಸಿ ಕೃತ್ಯ ಎಸಗಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಈ ಹಿಂದಿನ ದರೋಡೆ ಪ್ರಕರಣ ಗಮನಿಸಿದರೆ ಕೇರಳದ ದರೋಡೆ ಗ್ಯಾಂಗ್ ಕೃತ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ಡಾ.ಬಿ.ಟಿ.ಕವಿತಾ ತಿಳಿಸಿದ್ದಾರೆ.
Tirupati Theft: ತಿರುಪತಿ ದೇವಸ್ಥಾನದಿಂದ 100 ಕೋಟಿ ರೂ. ಕಳ್ಳತನ ಆಗಿತ್ತಾ?
ಮನೆ ಕಳ್ಳತನ ಮಾಡುತ್ತಿದ್ದವರ ಬಂಧನ
ಬೆಂಗಳೂರಿನಲ್ಲಿ ಮನೆಗಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದ್ದು, ಆರೋಪಿಗಳಿಂದ ಪೊಲೀಸರು ಸುಮಾರು 72 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ವಿಶ್ವಪ್ರಿಯ ಲೇಔಟ್ ನಿವಾಸಿಯೊಬ್ಬರು ಬೇಗೂರು ಪೊಲೀಸ್ ಠಾಣೆಯಲ್ಲಿ ದಾಖಲಿಸಿದ ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಿದ ಪೊಲೀಸರು, ಇಬ್ಬರನ್ನು ಬಂಧಿಸಿದ್ದಾರೆ.
ಕದ್ದ ಚಿನ್ನವನ್ನು ಕೋಲಾರ ಗೋಲ್ಡ್ ಫೀಲ್ಡ್ಸ್(ಕೆಜಿಎಫ್) ನಲ್ಲಿರುವ ಮೂರು ಗಿರವಿ ಅಂಗಡಿಗಳಲ್ಲಿ ಒತ್ತೆ ಇಟ್ಟಿರುವುದನ್ನು ಆರೋಪಿಗಳು ಬಹಿರಂಗಪಡಿಸಿದ್ದಾರೆ. ವಾರಗಳ ಕಾಲ ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಿ ಮತ್ತು ಗಿರವಿ ವಹಿವಾಟುಗಳನ್ನು ಪತ್ತೆಹಚ್ಚಿದ ನಂತರ, ಮಾಹಿತಿದಾರರ ಮಾಹಿತಿಯ ಆಧಾರದ ಮೇಲೆ ಆಗಸ್ಟ್ 6 ರಂದು ಬೇಗೂರು ಸರೋವರದ ಕೋಲಿಯ ಬಳಿ ಪೊಲೀಸರು ಶಂಕಿತನನ್ನು ಬಂಧಿಸಿದ್ದರು.