ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕೋಲ್ಕತಾ ದುರ್ಗಾ ಪೆಂಡಾಲ್ ಕಾಲ್ತುಳಿತ: 19ಕ್ಕೇರಿದ ಸಾವಿನ ಸಂಖ್ಯೆ

ಕೋಲ್ಕತ್ತಾದಲ್ಲಿ ದುರ್ಗಾ ಪೂಜೆ ವೇಳೆ ಉಂಟಾದ ಕಾಲ್ತುಳಿತದಿಂದ 19 ಮಂದಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಹಲವರನ್ನು ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಪೂಜಾ ಆಯೋಜಕರು, ಸ್ವಯಂಸೇವಕರು ಮತ್ತು ಇತರರು ಸೇರಿದ್ದಾರೆ. ಈ ಕುರಿತು ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಲು ಪಶ್ಚಿಮ ಬಂಗಾಳ ಸರ್ಕಾರ ಮುಂದಾಗಿದೆ.

ಸಂಗ್ರಹ ಚಿತ್ರ

ಕೋಲ್ಕತ್ತಾ: ದುರ್ಗಾ ಪೂಜಾ (durga puja) ಸ್ಥಳದಲ್ಲಿ ಉಂಟಾದ ಕಾಲ್ತುಳಿತದಿಂದ (Chorbagan Durga Puja stampede)19 ಮಂದಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡ ಘಟನೆ ಕೋಲ್ಕತ್ತಾದ (Kolkata stampede) ಚೋರ್‌ಬಗಾನ್ ನಲ್ಲಿ ಸಂಭವಿಸಿದೆ. ಘಟನೆಗೆ ಸಂಬಂಧಿಸಿ ಪೂಜಾ ಆಯೋಜಕರು, ಸ್ವಯಂಸೇವಕರು ಸೇರಿದಂತೆ 12 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದ ಕುರಿತು ಸಂಪೂರ್ಣ ತನಿಖೆಯನ್ನು ವಿಶೇಷ ತನಿಖಾ ತಂಡದಿಂದ (SIT) ನಡೆಸಲು ಪಶ್ಚಿಮ ಬಂಗಾಳ ಸರ್ಕಾರ ಮುಂದಾಗಿದೆ. ಇದರೊಂದಿಗೆ ಸತ್ಯಶೋಧನಾ ಸಮಿತಿಯೊಂದನ್ನು ರಚಿಸುವಂತೆ ಕೋರಿ ಕಲ್ಕತ್ತಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆಯುವುದಾಗಿ ಸರ್ಕಾರ ತಿಳಿಸಿದೆ.

ಗಿರೀಶ್‌ ಪಾರ್ಕ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಶಾರದಾ ಪಾರ್ಕ್‌ನ ಚೋರ್‌ ಬಗಾನ್‌ ದುರ್ಗಾ ಪೆಂಡಾಲ್‌ನಲ್ಲಿ ಶನಿವಾರ ಸಂಜೆ 7.40ರ ಸುಮಾರಿಗೆ ಭಕ್ತರು ಕಿಕ್ಕಿರಿದು ಸೇರಿದ್ದರು. ಈ ವೇಳೆ ಭಾರಿ ಮಳೆ ಸುರಿದು ಇದ್ದಕ್ಕಿದ್ದಂತೆ ಪೆಂಡಾಲ್‌ ಕುಸಿದು ಬಿದ್ದಿದೆ. ಇದರಿಂದ ಹೊರಗೋಡಲು ಜನ ನುಗ್ಗಿದ್ದರಿಂದ ಕಾಲ್ತುಳಿತ ಸಂಭವಿಸಿದೆ ಎನ್ನಲಾಗಿದೆ.

ಸಿಜೆಪಿ ಪ್ರತಿಭಟನೆಯ ಹಿಂದೆ ಎಲಾನ್‌ ಮಸ್ಕ್ ಕೈವಾಡ?: ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸ್ಫೋಟಕ ಹೇಳಿಕೆ

ಕೋಲ್ಕತ್ತಾದ ಚೋರ್‌ಬಗಾನ್ ಸಾರ್ವಜನಿಕ ದುರ್ಗಾ ಪೂಜಾ ಪೆಂಡాల్‌ನಲ್ಲಿ ಶನಿವಾರ ಸಂಭವಿಸಿದ ಕಾಲ್ತುಳಿತದಲ್ಲಿ 17 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಬಳಿಕ ಇಬ್ಬರು ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. 25 ಮಂದಿ ಗಾಯಗೊಂಡಿದ್ದು, ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ.

ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಮತ್ತು ಗಾಯಗೊಂಡಿರುವ ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ನೀಡಲು ರಾಜ್ಯ ಸರ್ಕಾರ ಎಲ್ಲ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದೆ. ಮೃತಪಟ್ಟ ಪ್ರತಿಯೊಬ್ಬರ ಕುಟುಂಬಕ್ಕೂ 25 ಲಕ್ಷ ರೂಪಾಯಿ ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ನೀಡುವುದಾಗಿ ಘೋಷಿಸಲಾಗಿದೆ.

ಗಾಯಗೊಂಡವರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಮತ್ತು ಅವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಘಟನೆಯ ಕುರಿತು ಸಂಪೂರ್ಣ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಲು ಆಡಳಿತ ಮಂಡಳಿ ಪ್ರಸ್ತಾಪಿಸಿದೆ. ಇದರೊಂದಿಗೆ ಸತ್ಯಶೋಧನಾ ಸಮಿತಿಯೊಂದನ್ನು ರಚಿಸುವಂತೆ ಕೋರಿ ಕಲ್ಕತ್ತಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸುವೇಂದು ಅಧಿಕಾರಿ, ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ತಪ್ಪಿತಸ್ಥರು ಯಾರೇ ಆಗಿರಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪೊಲೀಸ್ ಸಿಬ್ಬಂದಿ, ಸ್ವಯಂಸೇವಕರು ಅಥವಾ ಪೂಜಾ ಸಮಿತಿಯ ಸದಸ್ಯರಾಗಿರಲಿಯಾರನ್ನು ಕೂಡ ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಘಟನೆಯ ಕುರಿತು ಮಾಹಿತಿ ತಿಳಿದ ಮೇಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಬೆಳಗ್ಗೆ 11 ಗಂಟೆಗೆ ಗಾಯಾಳುಗಳನ್ನು ಭೇಟಿ ನೀಡಲು ವೈದ್ಯಕೀಯ ಕಾಲೇಜಿಗೆ ತೆರಳಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ನಿಗದಿತ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಸಿಎಂ ಅಧಿಕಾರಿ ತಿಳಿಸಿದ್ದಾರೆ.

ಈ ಘಟನೆಯ ಹಿಂದೆ ಏನಾದರೂ ಷಡ್ಯಂತ್ರವಿದೆಯೇ ಎಂಬ ಬಗ್ಗೆಯೂ ಆಡಳಿತ ಮಂಡಳಿ ಪರಿಶೀಲನೆ ನಡೆಸುತ್ತಿದೆ. ಇದೊಂದು ದುರಂತ ಘಟನೆ. ಸಂತ್ರಸ್ತರಿಗೆ ನೆರವು ನೀಡಲು ಸರ್ಕಾರ ಇಡೀ ರಾತ್ರಿ ಶ್ರಮಿಸಿದೆ. ಸಂತ್ರಸ್ತರ ಸಂಬಂಧಿಕರು ತಮ್ಮನ್ನು ಭೇಟಿಯಾದರು ಮತ್ತು ರಾಜ್ಯ ಸರ್ಕಾರದ ಮೇಲೆ ವಿಶ್ವಾಸ ವ್ಯಕ್ತಪಡಿಸಿದರು ಎಂದು ಅವರು ತಿಳಿಸಿದರು.

ಘಟನೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ವಿವರವಾದ ವರದಿಯನ್ನು ಸಲ್ಲಿಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಮತ್ತು ನೆರವು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಈ ವಿಷಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದು ಸಿಎಂ ಅಧಿಕಾರಿ ಹೇಳಿದರು.

ಹಿಂದಿನ ಆಡಳಿತ ಅವಧಿಯಲ್ಲಿ ನಡೆದ ಘಟನೆಯೊಂದನ್ನು ಉಲ್ಲೇಖಿಸಿದ ಅವರು,ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಡಳಿತದ ಅವಧಿಯಲ್ಲಿ 2025ರ ದುರ್ಗಾ ಪೂಜಾ ವೇಳೆ ವಿದ್ಯುತ್ ಆಘಾತದಿಂದ 13 ಮಂದಿ ಮೃತಪಟ್ಟಿದ್ದರು. ಆಗ ಸಂತ್ರಸ್ತರನ್ನು ಮಮತಾ ಬ್ಯಾನರ್ಜಿ ಅವರು ಭೇಟಿಯಾಗಿರಲಿಲ್ಲ ಎಂದು ಆರೋಪಿಸಿದರು.

ನಾಲ್ವರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸರ್ಕಾರಿ ಶಾಲೆ ಶಿಕ್ಷಕ

ದುರ್ಗಾ ಪೂಜೆ ವೇಳೆ ನೂಕುನುಗ್ಗಲು ಉಂಟಾಗಿರುವ ಹಿನ್ನೆಲೆಯಲ್ಲಿ ಸಿಲಿಗುರಿಯ ದುರ್ಗಾ ಪೂಜೆ ಆಯೋಜಕರು ಜನಸಂದಣಿ ನಿರ್ವಹಣೆ ಮತ್ತು ಸುರಕ್ಷತಾ ಕ್ರಮಗಳನ್ನು ಬಿಗಿಗೊಳಿಸಿದ್ದಾರೆ. ಇದರಲ್ಲಿ ಹೆಚ್ಚುವರಿ ಸ್ವಯಂಸೇವಕರು ಹಾಗೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿರುವುದಾಗಿ ಘೋಷಿಸಿದ್ದಾರೆ.

ವಿದ್ಯಾ ಇರ್ವತ್ತೂರು

View all posts by this author