ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಗೋಡೆ ಮೇಲೆ ಮೂತ್ರ ವಿಸರ್ಜನೆ ಪ್ರಶ್ನಿಸಿದ ವಕೀಲನ ಮೇಲೆ ಹಲ್ಲೆ; ಪೊಲೀಸ್‌ ಕಾನ್ಸ್‌ಟೇಬಲ್ ವಶಕ್ಕೆ

ಗೋಡೆ ಮೇಲೆ ಮೂತ್ರ ವಿಸರ್ಜಿಸಿದ್ದನ್ನು ಪ್ರಶ್ನಿಸಿದ ಕಾರಣಕ್ಕೆ ವಕೀಲರೊಬ್ಬರ ಮೇಲೆ ಹಲ್ಲೆಗೈದು, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಡಿ ಹೆಡ್‌ ಕಾನ್‌ಸ್ಟೇಬಲ್‌ವೊಬ್ಬನನ್ನು ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಸಂಗ್ರಹ ಚಿತ್ರ

ಬೆಂಗಳೂರು: ಗೋಡೆ ಮೇಲೆ ಮೂತ್ರ ವಿಸರ್ಜಿಸಿದ್ದನ್ನು ಪ್ರಶ್ನಿಸಿದ ಕಾರಣಕ್ಕೆ ವಕೀಲರೊಬ್ಬರ ಮೇಲೆ ಹಲ್ಲೆಗೈದು, ಅವಾಚ್ಯ ಶಬ್ದಗಳಿಂದ (Assault Case) ನಿಂದಿಸಿದ ಆರೋಪದಡಿ ಹೆಡ್‌ ಕಾನ್‌ಸ್ಟೇಬಲ್‌ವೊಬ್ಬನನ್ನು ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಲ್ಲೆಗೊಳಗಾಗಿದ್ದ ಶಿವಾಜಿನಗರ ಇನ್ಫೆಂಟ್ರಿ ರಸ್ತೆ ನಿವಾಸಿ ಹಾಗೂ ವಕೀಲ ಆದರ್ಶ್‌ ಗಂಗಲ್‌ (50) ಎಂಬುವರು ನೀಡಿದ ದೂರಿನನ್ವಯ ತನಿಖೆ ಕೈಗೊಂಡು ಸತೀಶ್‌ನನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೋರಮಂಗಲ ಠಾಣೆಯ ಹೆಡ್‌ ಕಾನ್‌ಸ್ಟೇಬಲ್‌ ಸತೀಶ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಮತ್ತಿಬ್ಬರು ಆರೋಪಿಗಳಿಗಾಗಿ ಶೋಧ ನಡೆಸಲಾಗಿದೆ. ಆದರ್ಶ್‌ ಗಂಗಲ್‌ ಚರ್ಚ್‌ ಸ್ಟ್ರೀಟ್‌ನ ಕಲ್ಪಕ್‌ ಆರ್ಕೇಡ್‌ನ 4ನೇ ಮಹಡಿಯಲ್ಲಿ ಕಚೇರಿ ಹೊಂದಿದ್ದು, ಫೆ.6ರಂದು ರಾತ್ರಿ ಸುಮಾರು 9 ಗಂಟೆಗೆ ಕೆಲಸ ಮುಗಿಸಿ ಮನೆಗೆ ಹೋಗಲು ಮೈನ್‌ ಗೇಟ್‌ ಬಳಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ವ್ಯಕ್ತಿಯೊಬ್ಬ ಕಟ್ಟಡದ ಹಿಂಭಾಗದ ಗೋಡೆ ಮೇಲೆ ಮೂತ್ರ ವಿಸರ್ಜಿಸುತ್ತಿರುವುದು ಕಂಡು ಬಂದಿತ್ತು. ಈ ವೇಳೆ ಅವರು ಅದು ಮೂತ್ರ ವಿಸರ್ಜಿಸುವ ಸ್ಥಳವಲ್ಲ. ಶೌಚಾಲಯದಲ್ಲಿ ಮೂತ್ರ ವಿಸರ್ಜಿಸಿ ಎಂದು ಹೇಳಿದ್ದರು. ಇದೇ ವೇಳೆ ಮೂತ್ರ ವಿಸರ್ಜಿಸುತ್ತಿದ್ದ ವ್ಯಕ್ತಿಯ ಪಕ್ಕದಲ್ಲಿ ಇಬ್ಬರು ವ್ಯಕ್ತಿಗಳು ಮದ್ಯ ಸೇವಿಸುತ್ತಿದ್ದರು.

ಈ ವೇಳೆ ಅವರು ಪೊಲೀಸರಿಗೆ ಕರೆ ಮಾಡಲು ಮುಂದಾದ್ದಾಗ, ಮೊಬೈಲ್ ಕಸಿದುಕೊಳ್ಳಲು ಪ್ರಯತ್ನಿಸಿದ್ದರು. ಪಾನಮತ್ತ ಇಬ್ಬರು ವ್ಯಕ್ತಿಗಳು ಆದರ್ಶ್‌ ಮುಂದೆ ಹೋಗದಂತೆ ಹಿಡಿದುಕೊಂಡಿದ್ದರು. ಒಬ್ಬ ಇವರ ಮುಖಕ್ಕೆ ಹೊಡೆದು ಕನ್ನಡಕ ಮುರಿದು ಹಾಕಿದ್ದ. ಈ ವೇಳೆ ಅವರು ತಕ್ಷಣ ಮೊಬೈಲ್‌ನಲ್ಲಿ ಆತನ ಫೋಟೋ ತೆಗೆದಿದ್ದು ಆಗ ಮೂವರು ಸೇರಿ ಅವರನ್ನು ಬಲವಂತವಾಗಿ ಹಿಡಿದು ಅವರ ಮೊಬೈಲ್‌ ಕಿತ್ತುಕೊಂಡು ಫೋಟೋ ಡಿಲೀಟ್‌ ಮಾಡಿದ್ದರು. ಇವರ ಕೂಗಾಟ ಕೇಳಿಸಿಕೊಂಡು ಕಟ್ಟಡದ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಬಂದು ಗಲಾಟೆ ಬಿಡಿಸಿದ್ದರು. ನಂತರ ಮೂವರ ವಿರುದ್ಧ ಠಾಣೆ ಆದರ್ಶ್‌ ದೂರು ನೀಡಿದ್ದರು.

ಬಾಲಾಪರಾಧಿ ಗೃಹದಿಂದ ಇಬ್ಬರು ಪಾಕಿಸ್ತಾನಿ ಬಾಲಕರು ಸೇರಿ ಮೂವರು ಪರಾರಿ

ಜಮ್ಮು ಮತ್ತು ಕಾಶ್ಮೀರದ ಬಾಲಾಪರಾಧಿ ಗೃಹದಲ್ಲಿದ್ದ ಇಬ್ಬರು ಪಾಕಿಸ್ತಾನಿ ಪ್ರಜೆಗಳು ಸೇರಿದಂತೆ ಮೂವರು ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಂಡಿರುವ ಘಟನೆ ನಡೆದಿದೆ. ''ಸೋಮವಾರ (ಫೆಬ್ರವರಿ 16) ಸಂಜೆ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಮೂವರು ಅಪರಾಧಿಗಳು ಪರಾರಿಯಾಗಿದ್ದಾರೆʼʼ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಮೂಲಗಳ ಪ್ರಕಾರ, ಸಂಜೆ 5.05ರ ಸುಮಾರಿಗೆ ಜಮ್ಮುವಿನ ಆರ್‌.ಎಸ್. ಪುರದಲ್ಲಿರುವ ಜೈಲಿನಲ್ಲಿ ನಿಯೋಜಿಸಲಾದ ಕಾವಲುಗಾರರ ಮೇಲೆ ಕೈದಿಗಳು ದಾಳಿ ಮಾಡಿ ಕಸ್ಟಡಿಯಿಂದ ಪರಾರಿಯಾಗಿದ್ದಾರೆ.

Vishakha Bhat Heggar

View all posts by this author