ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Lawyer body found: ಬೆಂಗಳೂರಿನ ನೈಸ್‌ ರಸ್ತೆಯಲ್ಲಿ ವಕೀಲ ಜಗದೀಶ್‌ ಮೃತದೇಹ ಪತ್ತೆ

ಮೇ 2ರಂದು ಸಂಜೆ 7.30ರಿಂದ 8 ಗಂಟೆ ಸುಮಾರಿಗೆ ಬನ್ನೇರುಘಟ್ಟ-ಕನಕಪುರ ಮಾರ್ಗದ ನೈಸ್​ ರಸ್ತೆಯಲ್ಲಿ ಜಗದೀಶ್​ ರ ಮೃತದೇಹ ಪತ್ತೆಯಾಗಿದ್ದು, ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಮೂಲದ ಜಗದೀಶ್ ಬೆಂಗಳೂರಿನ ಉಲ್ಲಾಳದಲ್ಲಿ ವಾಸವಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನ ನೈಸ್‌ ರಸ್ತೆಯಲ್ಲಿ ವಕೀಲ ಜಗದೀಶ್‌ ಮೃತದೇಹ ಪತ್ತೆ

ಮೃತ ವಕೀಲ ಜಗದೀಶ್‌

ಹರೀಶ್‌ ಕೇರ ಹರೀಶ್‌ ಕೇರ May 4, 2025 7:20 AM

ಬೆಂಗಳೂರು: ಬೆಂಗಳೂರಿನ ನೈಸ್‌ ರಸ್ತೆಯಲ್ಲಿ (‌nice road) ತೀವ್ರ ಗಾಯಗಳೊಂದಿಗೆ ವಕೀಲ ಜಗದೀಶ್ (Lawyer Jagadish) ಎನ್ನುವವರ ಮೃತದೇಹ (body found) ಪತ್ತೆಯಾಗಿದೆ. ಬೆಂಗಳೂರಿನ ಕೆಂಗೇರಿಯ ಸಿವಿ ರಾಮನ್ ಎಸ್ಟೇಟ್ ಬಳಿಯ ನೈಸ್ ರಸ್ತೆಯಲ್ಲಿ ತೀವ್ರ ಗಾಯಗಳಾಗಿರುವ 46 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿದ್ದು, ಮೃತ ವ್ಯಕ್ತಿಯನ್ನು ವಕೀಲ ಜಗದೀಶ್ ಎಂದು ಗುರುತಿಸಲಾಗಿದೆ. ಮೃತ ವಕೀಲ ಜಗದೀಶ ಎಚ್ ಕೆಂಗೇರಿಯ ಎಸ್‌ಎಂವಿ ಲೇಔಟ್ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 2ರಂದು ಸಂಜೆ 7.30ರಿಂದ 8 ಗಂಟೆ ಸುಮಾರಿಗೆ ಬನ್ನೇರುಘಟ್ಟ-ಕನಕಪುರ ಮಾರ್ಗದ ನೈಸ್​ ರಸ್ತೆಯಲ್ಲಿ ಜಗದೀಶ್​ ರ ಮೃತದೇಹ ಪತ್ತೆಯಾಗಿದ್ದು, ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಮೂಲದ ಜಗದೀಶ್ ಬೆಂಗಳೂರಿನ ಉಲ್ಲಾಳದಲ್ಲಿ ವಾಸವಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತವೋ ಕೊಲೆಯೋ?

ಶುಕ್ರವಾರ ಜಗದೀಶ್ ಅವರು ತೆರಳುತ್ತಿದ್ದ ಕಾರಿನಿಂದ 100 ಮೀಟರ್ ದೂರದಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಕಾರಿನ ಒಂದೆರಡು ಕಡೆಗಳಲ್ಲಿ ಸಣ್ಣ ಪ್ರಮಾಣದ ಅಪಘಾತವಾದ ಗುರುತುಗಳಿವೆ. ಅಪಘಾತದ ವಿಚಾರವಾಗಿ ಗಲಾಟೆ ಏನಾದರೂ ಆಗಿತ್ತಾ? ಅಥವಾ ಉದ್ದೇಶಪೂರ್ವಕವಾಗಿ ಹತ್ಯೆಗೈಯ್ಯಲಾಗಿದೆಯಾ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಸ್ತೆ ಪಕ್ಕದಲ್ಲಿ ಮೃತದೇಹ ಪತ್ತೆಯಾದ ಬಗ್ಗೆ ಶುಕ್ರವಾರ ಸಂಜೆ 7:50ರ ಸುಮಾರಿಗೆ ಪೊಲೀಸ್ ನಿಯಂತ್ರಣ ಕೋಣೆಗೆ ಕರೆ ಬಂದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ರಸ್ತೆ ಪಕ್ಕದಲ್ಲಿ ಕಾರು ನಿಂತಿದ್ದು, ಪಾರ್ಕಿಂಗ್ ಲೈಟ್ ಆನ್ ಇತ್ತು. ಕಾರಿನ ಎರಡು ಕಡೆಗಳಲ್ಲಿ ಅಪಘಾತದ ಗುರುತುಗಳಿವೆ. ಕಾರಿನಿಂದ 100 ಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಮೃತರ ತಲೆ, ಎಡಗಾಲು ಮತ್ತು ಹೊಟ್ಟೆಯ ಮೇಲೆ ತೀವ್ರ ಗಾಯದ ಗುರುತುಗಳಿದ್ದವು.

ದೂರುದಾರರು ವಕೀಲರ ಕಾರನ್ನು ಹಾನಿಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅವರನ್ನು ಕೊಲ್ಲುವ ಉದ್ದೇಶದಿಂದ ಕೆಲವು ದುಷ್ಕರ್ಮಿಗಳು ಅವರನ್ನು ಕಾರಿನಿಂದ ಕೆಳಗಿಳಿಸಿ ಆಯುಧದಿಂದ ಹೊಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಮೃತರ ಸಂಬಂಧಿಕರು ನೀಡಿರುವ ದೂರಿನನ್ವಯ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್ ಅವರ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದೆ ಎಂದು ಬೆಂಗಳೂರು ಪಶ್ಚಿಮ ವಲಯದ ಹೆಚುವರಿ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ವಿಕಾಶ್ ತಿಳಿಸಿದ್ದಾರೆ.

ಇದನ್ನೂ ಓದಿ: Road Accident: ಆಟೋಗೆ ಸಾರಿಗೆ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ಸಾವು; ಮೂವರ ಸ್ಥಿತಿ ಗಂಭೀರ