ಲಖನೌ, ಏ.11: ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ವಕೀಲರ ಮೇಲೆ ಗುಂಡು ಹಾರಿಸಿ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಪ್ರದೇಶದ (Uttar Pradesh) ಮಿರ್ಜಾಪುರದಲ್ಲಿ ನಡೆದಿದೆ. ಇದರಿಂದ ಆ ಪ್ರದೇಶದಲ್ಲಿ ಮಾತ್ರವಲ್ಲ, ದಾಳಿಕೋರರಿಗೂ ಭೀತಿ ಉಂಟಾಗಿತ್ತು. ದಾಳಿ ಮಾಡಿದ ನಂತರ ಬೈಕ್‌ನಲ್ಲಿ ಪರಾರಿಯಾಗಲು ಯತ್ನಿಸಿದರು ಸಾಧ್ಯವಾಗಲಿಲ್ಲ (crime news). ಶನಿವಾರ (ಏ.11) ಬೆಳಗ್ಗೆ ನಡೆದ ಘಟನೆಯ ಸಿಸಿಟಿವಿ ವಿಡಿಯೊದಲ್ಲಿ, ಬೆಳಗ್ಗಿನ ನಡಿಗೆಗೆ ಹೊರಟಿದ್ದ 45 ವರ್ಷದ ಹಿರಿಯ ವಕೀಲ ರಾಜೀವ್ ಸಿಂಗ್ ಅವರ ಬಳಿಗೆ ಇಬ್ಬರು ವ್ಯಕ್ತಿಗಳು ಬರುತ್ತಿರುವುದು ಕಂಡುಬರುತ್ತದೆ. ಅವರಲ್ಲಿ ಒಬ್ಬ ವ್ಯಕ್ತಿ ವಾಹನದಿಂದ ಇಳಿದು ಪಿಸ್ತೂಲಿನಿಂದ ಅವರ ಮೇಲೆ ಗುಂಡು ಹಾರಿಸಿದ ಪರಿಣಾಮ ಸಿಂಗ್ ಸ್ಥಳದಲ್ಲೇ ಮೃತಪಟ್ಟರು. ಅವನು ಹಿಂದಕ್ಕೆ ಓಡಿ ಬೈಕ್ ಮೇಲೆ ಕುಳಿತುಕೊಳ್ಳುತ್ತಿದ್ದಂತೆ, ಬೈಕ್ ಸ್ಟಾರ್ಟ್ ಆಗಿಲ್ಲ.
ಒಬ್ಬ ಬೈಕ್ ಸ್ಟಾರ್ಟ್ ಮಾಡಲು ಪ್ರಯತ್ನಿಸುತ್ತಿದ್ದಂತೆ, ಕೆಲವರು ಆರೋಪಿಗಳ ಬಳಿಗೆ ಬಂದರು. ದಾಳಿಕೋರ ಪಿಸ್ತೂಲ್ ಅನ್ನು ತೋರಿಸಿದ್ದಾನೆ. ಈ ವೇಳೆ ಎಲ್ಲರೂ ಸ್ಥಳದಿಂದ ಓಡಿಹೋದರು. ಕೊನೆಗೆ ಬೈಕ್ ಸ್ಟಾರ್ಟ್ ಆಗಿ, ಇಬ್ಬರು ಅಲ್ಲಿಂದ ಓಡಿ ಹೋಗಿದ್ದಾರೆ. ನಂತರ, ನೂರಾರು ಜನರು ಸ್ಥಳದಲ್ಲಿ ಜಮಾಯಿಸಿದರು.
ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್ ಥೈಲ್ಯಾಂಡ್‌ನಿಂದ ಭಾರತಕ್ಕೆ ಗಡೀಪಾರು
ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ಬಂಧಿಸಲು ಐದು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಂಗ್ ಈ ಹಿಂದೆ ಅರ್ಜಿ ಸಲ್ಲಿಸಿ, ತನ್ನ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತಪಡಿಸಿದ್ದರು. ಗ್ರಾಮದ ಮಾಜಿ ಮುಖ್ಯಸ್ಥ ಹಾಗೂ ವಕೀಲರ ಮೇಲೆ ಈ ಹಿಂದೆ ಎರಡು ಬಾರಿ ಹಲ್ಲೆ ನಡೆದಿತ್ತು.
ಬೆಂಗಳೂರಿನಲ್ಲಿ ಆಟವಾಡುವಾಗ 3ನೇ ಮಹಡಿಯಿಂದ ಕೆಳಗೆ ಬಿದ್ದ ಮಗು
ಒಂದೂವರೆ ವರ್ಷದ ಮಗು ಆಟವಾಡುತ್ತಾ 3ನೇ ಮಹಡಿಯಿಂದ ಕೆಳಕ್ಕೆ ಬಿದ್ದು, ಗಂಭೀರವಾಗಿ ಗಾಯಗೊಂಡಿರುವುದು ನಗರದ ನಾಯಂಡಹಳ್ಳಿಯಲ್ಲಿ ನಡೆದಿದೆ. ಈ ಆಘಾತಕಾರಿ ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನವೀನ್ ಮತ್ತು ಜಯಶ್ರೀ ದಂಪತಿಯ ಒಂದೂವರೆ ವರ್ಷದ ಪುತ್ರಿ ಸಹನಾ, ಆಟವಾಡುತ್ತಾ ಮನೆಯ ಮುಖ್ಯ ಬಾಗಿಲಿನಿಂದ ಹೊರಬಂದು ಮಹಡಿಯಿಂದ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದಿದ್ದಾಳೆ. ಏಪ್ರಿಲ್ 6 ರಂದು ಈ ಘಟನೆ ನಡೆದಿದೆ. ಮಗು ಕೆಳಕ್ಕೆ ಬಿದ್ದ ರಭಸಕ್ಕೆ ತಲೆಗೆ ಗಂಭೀರ ಗಾಯಗಳಾಗಿದ್ದು, ಪೋಷಕರು ಕಂಗಾಲಾಗಿದ್ದಾರೆ. ಮಗು ಬಿದ್ದಿದ್ದನ್ನು ಕಂಡ ತಾಯಿ ರಸ್ತೆಯಲ್ಲೇ ಪ್ರಜ್ಞೆ ತಪ್ಪಿ ಬಿದ್ದದ್ದು ಸಿಸಿಟಿವಿ ದೃಶ್ಯದಲ್ಲಿ ದಾಖಲಾಗಿದೆ.