ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Murder Case: ವಿವಾಹಿತ ಪ್ರಿಯತಮೆಯನ್ನು ಬೆಂಗಳೂರಿನ ಹೋಟೆಲ್‌ನಲ್ಲಿ 17 ಬಾರಿ ಇರಿದು ಕೊಂದ ಪ್ರಿಯಕರ!

Murder Case: ಜೂನ್ 6 ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿ ಟಿವಿ ಕ್ಯಾಮೆರಾ ಆಧರಿಸಿ ಜೋಡಿಯ ವಿವರಗಳನ್ನು ಪತ್ತೆಹಚ್ಚಲಾಗಿದೆ. ಕೊಲೆಗಾರನನ್ನು ಪೊಲೀಸರು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಕಗ್ಗೊಲೆ (Murder Case) ಸಂಭವಿಸಿದೆ. ಪ್ರಿಯಕರನಿಂದಲೇ (Lover) ಪ್ರಿಯತಮೆಯ ಬರ್ಬರ ಹತ್ಯೆಯಾಗಿದೆ. ಬೆಂಗಳೂರಿನ (Bengaluru Crime News) ಪೂರ್ಣಪ್ರಜ್ಞ ಲೇಔಟ್‌ನ ಹೋಟೆಲ್ ರೂಮ್‌ನಲ್ಲಿ ಪ್ರಿಯಕರನೇ ತನ್ನ ಪ್ರಿಯತಮೆಯ ಹತ್ಯೆ ಮಾಡಿದ್ದಾನೆ. ಹರಿಣಿ (36) ಎಂಬಾಕೆಯನ್ನು ಪ್ರಿಯಕರ ಯಶಸ್ ಎಂಬಾತ ಚಾಕುವಿನಿಂದ 17 ಬಾರಿ ಇರಿದು ಹತ್ಯೆ ಮಾಡಿದ್ದಾನೆ.

ಜೂನ್ 6 ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿ ಟಿವಿ ಕ್ಯಾಮೆರಾ ಆಧರಿಸಿ ಜೋಡಿಯ ವಿವರಗಳನ್ನು ಪತ್ತೆಹಚ್ಚಲಾಗಿದೆ.

ಮೃತ ಹರಿಣಿಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಆದರೂ ಯಶಸ್ ಜತೆ ಅನೈತಿಕ ಸಂಬಂಧ ಹೊಂದಿದ್ದಳು. ಸದ್ಯ ಸುಬ್ರಹ್ಮಣ್ಯಪುರ ಠಾಣೆಯ ಪೊಲೀಸರಿಂದ ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆಸಿದ್ದಾರೆ.

ಜಾತ್ರೆಯಲ್ಲಿ ಪರಿಚಯವಾಗಿದ್ದ ಮಹಿಳೆ ಬಳಿ ಯಶಸ್ ಫೋನ್​ ನಂಬರ್​​ ಪಡೆದಿದ್ದ. ಬಳಿಕ ಸ್ನೇಹ ಬೆಳೆದು ಚಾಟಿಂಗ್, ಡೇಟಿಂಗ್, ಸುತ್ತಾಟ ಮಾಡಿದ್ದರು. ಕೆಲವು ಸಲ ಲೈಂಗಿಕ ಸಂಪರ್ಕ ಕೂಡ ಬೆಳೆಸಿದ್ದರು. ಪತಿ ದಾಸೇಗೌಡನಿಗೆ ಪತ್ನಿಯ ಅನೈತಿಕ ಸಂಬಂಧ ಗೊತ್ತಾಗಿತ್ತು. ಇದರಿಂದ ಆಕೆಯನ್ನು ಗಂಡ ಮನೆಯಲ್ಲೇ ಕೂಡಿ ಹಾಕಿದ್ದರು.

ಬಳಿಕ ಕೆಲವು ತಿಂಗಳ ನಂತರ ಮತ್ತೆ ಹೊರ ಬಂದಿದ್ದ ಹರಿಣಿ, ಈ ವೇಳೆ ತನ್ನ ಬಾಯ್​ಫ್ರೆಂಡ್ ಯಶಸ್ ಸಂಪರ್ಕಿಸಿದ್ದಾಳೆ. ಇತ್ತ ಹರಿಣಿ ಸಂಪರ್ಕಕ್ಕೆ ಸಿಗದೇ ಹುಚ್ಚನಂತೆ ಆಗಿದ್ದ ಪ್ರಿಯಕರ ಯಶಸ್​, ಸಿಕ್ಕರೆ ಸಾಯಿಸಲು ನಿರ್ಧರಿಸಿದ್ದ. ಹೀಗಾಗಿ ಹರಿಣಿಯನ್ನು ಕೊಲೆ ಮಾಡಲು ಚಾಕು ಕೂಡ ಖರೀದಿಸಿದ್ದ.

ಜೂನ್ 6ರಂದು ಮಾತುಕತೆ ನಡೆಸಿ ಇಬ್ಬರು ಹೋಟೆಲ್​ಗೆ ಹೋಗಿದ್ದರು. ಲೈಂಗಿಕ ಕ್ರಿಯೆ ನಂತರ ಬಳಿಕ ಚಾಕುವಿನಿಂದ ಇರಿದು ಹರಿಣಿಯನ್ನು ಹತ್ಯೆಗೈದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹರಿಣಿ ತನ್ನನ್ನು ದೂರ ಮಾಡಿದ್ದಕ್ಕೆ​ ಕೊಲೆ ಮಾಡಿದ್ದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.

ಮರ್ಮಾಂಗಕ್ಕೆ ಒದ್ದು ಸ್ನೇಹಿತನ ಕೊಲೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಘೋರ ಕೃತ್ಯವೊಂದು ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ಮರ್ಮಾಂಗಕ್ಕೆ ಒದ್ದು ಸ್ನೇಹಿತನನ್ನು ಕೊಲೆ ಮಾಡಿದ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಸಮೀಪ ಸ್ನೇಹಿತನನ್ನೇ ಕೊಲೆ ಮಾಡಲಾಗಿದೆ. ಅಸ್ಸಾಂ ಮೂಲದ ಕಾರ್ಮಿಕ ಮೋಹನ್ (34) ಎಂಬಾತ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಮೋಹನ್ ರೆಸಾರ್ಟ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ. ನಿನ್ನೆ ರಾತ್ರಿ ಕುಡಿದು ಆರೋಪಿಗಳು ಗಲಾಟೆ ಮಾಡಿಕೊಂಡಿದ್ದರು. ಈ ವೇಳೆ ಮರ್ಮಾಂಗಕ್ಕೆ ಒದ್ದು ಕೊಲೆ ಮಾಡಲಾಗಿದೆ. ನಂದಿ ಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಏರ್‌ಪೋರ್ಟ್‌ ರಸ್ತೆ ಬದಿಯಲ್ಲಿ ಯುವಕನ ಶವ ಪತ್ತೆ

ಬೆಂಗಳೂರು: ಬೆಂಗಳೂರಿನ ಅಂತಾರಾಷ್ಟ್ರೀಯ ಏರ್‌ಪೋರ್ಟ್ ರಸ್ತೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದೆ. ಏರ್‌ಪೋರ್ಟ್ ರಸ್ತೆಯ ಮಾಲ್ ಆಫ್ ಏಷಿಯಾ ಮುಂಭಾಗದ ರಸ್ತೆಯಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿದೆ. ಏರ್‌ಪೋರ್ಟ್‌ ರಸ್ತೆಯ ಫ್ಲೈಓವರ್ ಕೆಳಭಾಗದ ರಸ್ತೆಯಲ್ಲಿ ಮಧ್ಯರಾತ್ರಿ 12.30ರ ಸುಮಾರಿಗೆ ಯುವಕನ ಶವ ಪತ್ತೆಯಾಗಿದೆ. ಅದೇ ಫ್ಲೈಓವರ್ ಕೆಳಗೆ ಒಂದು ಬೈಕ್ ಸಹ ಪತ್ತೆಯಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆ, ಕೊಲೆ ಮತ್ತು ದರೋಡೆ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ.

ಇದನ್ನೂ ಓದಿ: Indore Couple Missing: ಇಂದೋರ್‌ ದಂಪತಿ ಮಿಸ್ಸಿಂಗ್‌ ಕೇಸ್‌ನಲ್ಲಿ ಬಿಗ್‌ ಟ್ವಿಸ್ಟ್‌; ಪತಿಯ ಹತ್ಯೆಗೆ ಪತ್ನಿಯಿಂದಲೇ ಸುಪಾರಿ; ಹಂತಕಿ ಅರೆಸ್ಟ್‌

ಹರೀಶ್‌ ಕೇರ

View all posts by this author