ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮಜಾ ಭಾರತ ರಿಯಾಲಿಟಿ ಶೋ ಕಲಾವಿದ ಸಾವು; ಅರಣ್ಯದಲ್ಲಿ ಪತ್ತೆಯಾಯ್ತು ಶವ

ಮಜಾಭಾರತ ಕಾಮಿಡಿ ರಿಯಾಲಿಟಿ ಶೋನಲ್ಲಿ ಪಾಲ್ಗೊಂಡಿದ್ದ ಕಲಾವಿದ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಣಕುಣಿಯಲ್ಲಿ ನಡೆದಿದೆ. ಹುಮ್ನಾಬಾದ್ ನಗರದ ಟೀಚರ್ಸ್ ಕಾಲೊನಿ‌ಯಲ್ಲಿ ವಾಸವಿದ್ದ ಸಿದ್ದಾರ್ಥ ಪರಶನೂರ ಶವವಾಗಿ ಪತ್ತೆಯಾಗಿದ್ದಾರೆ.

ಮಜಾ ಭಾರತ ಕಲಾವಿದ ಸಾವು

ಬೀದಾರ್‌: ಮಜಾಭಾರತ ಕಾಮಿಡಿ ರಿಯಾಲಿಟಿ ಶೋನಲ್ಲಿ ಪಾಲ್ಗೊಂಡಿದ್ದ ಕಲಾವಿದ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಣಕುಣಿಯಲ್ಲಿ ನಡೆದಿದೆ. ಹುಮ್ನಾಬಾದ್ ನಗರದ ಟೀಚರ್ಸ್ ಕಾಲೊನಿ‌ಯಲ್ಲಿ ವಾಸವಿದ್ದ ಸಿದ್ದಾರ್ಥ ಪರಶನೂರ (36) (Siddartha Parasanur) ಜೂನ್ 13 ರಂದು ಸ್ನೇಹಿತರೊಂದಿಗೆ ಮನೆಯಿಂದ ಹೋಗಿದ್ದು, ಇಂದು ಶವವಾಗಿ ಪತ್ತೆಯಾಗಿದ್ದಾರೆ.

ಜೂನ್ 13ರಂದು ಸ್ನೇಹಿತರೊಂದಿಗೆ ಮನೆಯಿಂದ ಹೊರ ಹೋಗಿದ್ದರು. 3 ದಿನವಾದರೂ ಮನೆಗೆ ಬಾರದ ಹಿನ್ನೆಲೆ ಕುಟುಂಬಸ್ಥರು ಇವತ್ತು ಬೆಳಿಗ್ಗೆ‌ ಹುಮನಾಬಾದ್ ಪೊಲೀಸ್ ಠಾಣೆಗೆ ಮಿಸ್ಸಿಂಗ್‌ ಕೇಸ್ ದಾಖಲಿಸಲು ಹೋಗಿದ್ದರು. ಮೊಬೈಲ್ ಟವರ್ ಲೊಕೇಷನ್ ಆಧರಿಸಿ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ಪಕ್ಕದ ಅರಣ್ಯ ಪ್ರದೇಶದಲ್ಲಿ ಸಿದ್ದಾರ್ಥ ಪರಶನೂರ ಮೃತದೇಹ ಪತ್ತೆಯಾಗಿದೆ.

ಮೊಬೈಲ್ ಟವರ್ ಲೊಕೆಶನ್‌ ಆಧರಿಸಿ ಪೊಲೀಸರು ಮಾಹಿತಿ ಕಲೆ ಹಾಕಿದ್ದು, ಬಳಿಕ ಶವ ಪರೀಕ್ಷೆಗಾಗಿ ಬ್ರಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹ ರವಾನೆ ಮಾಡಿದ್ದಾರೆ. ಸಾವಿಗೆ ನಿಖರ ಕಾರಣ‌ ಇನ್ನೂ ತಿಳಿದುಬಂದಿಲ್ಲ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿದ್ಧಾರ್ಥ್‌ ಅವರು ಧಾರಾವಾಹಿ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಸಣ್ಣಪುಟ್ಟ ಪಾತ್ರಗಳಲ್ಲಿ ನಟಿಸಿದ್ದಾರೆ. ಪೋಷಕ ನಟನಾಗಿ ಗುರುತಿಸಿಕೊಂಡಿದ್ದರು.

Doddaballapur News: ದೊಡ್ಡಬಳ್ಳಾಪುರದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳ ಸಾವು

ಸಿದ್ದಾರ್ಥ ಪರಸನೂರು ಅವರ ಮೃತ ದೇಹವನ್ನು ಗಮನಿಸಿದರೆ ಇದು ಸಹಜ ಸಾವಲ್ಲ ಎಂಬ ಅಭಿಪ್ರಾಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿರಬಹುದು ಎಂದು ಮತ್ತೆ ಕೆಲವರು ಶಂಕಿಸಿದ್ದಾರೆ.

Vishakha Bhat Heggar

View all posts by this author