ಚಿಂತಾಮಣಿ; ನಗರದ ಎನ್‌ಎನ್‌ಟಿ ವೃತ್ತದ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವ ಮಹಿಳೆ ಸೇರಿದಂತೆ ಇಬ್ಬರನ್ನು ಚಿಂತಾಮಣಿ ನಗರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ,ಅವರಿಂದ 1 ಕೆಜಿ 180 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಶ್ರೀನಿವಾಸ್ (19 ವರ್ಷ)ಮೂಲತಃ ಬೆಂಗಳೂರು ರೋಜಾ(40 ವರ್ಷ) ಎಂದು ಗುರುತಿಸಲಾಗಿದೆ. ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಾನೂನುಬಾಹಿರ ಚಟುವಟಿಕೆ ಗಳ ತಡೆಗೆ ಗಸ್ತು ತಿರುಗುತ್ತಿದ್ದ ಪೊಲೀಸರಿಗೆ, ಬೆಳಿಗ್ಗೆ ಸುಮಾರು 11:30 ರ ವೇಳೆಗೆ ಬಾತ್ಮೀದಾರರಿಂದ ಖಚಿತ ಮಾಹಿತಿ ದೊರೆತಿತ್ತು.
ಇದನ್ನೂ ಓದಿ: Chinthamani News: ಗ್ರಾಮಗಳ ಅಭಿವೃದ್ಧಿಗಾಗಿ ನಿಲ್ಲದ ಹೋರಾಟ: ಮೂರನೇ ಹಂತದ ಪಾದಯಾತ್ರೆಗೆ ಅನುಮತಿ ಕೋರಿದ ಮಂಜುನಾಥ್
ಎನ್‌ಎನ್‌ಟಿ ರಸ್ತೆಯಲ್ಲಿ ಬ್ಯಾಗ್‌ನಲ್ಲಿ ಗಾಂಜಾ ಇಟ್ಟುಕೊಂಡು ಗ್ರಾಹಕರಿಗೆ ಮಾರಾಟ ಮಾಡಲು ಯತ್ನಿಸುತ್ತಿರುವುದು ತಿಳಿದುಬಂದ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಸ್ಥಳಕ್ಕೆ ತೆರಳಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.ಆರೋಪಿಗಳಿಂದ 1 ಕೆಜಿ 180 ಗ್ರಾಂ ಗಾಂಜಾ ಹಾಗೂ ಬ್ಯಾಗ್ ಅನ್ನು ಜಪ್ತಿ ಮಾಡಲಾಗಿದೆ.
ಪಿಎಸ್‌ಐ ರಮೇಶ್ ಹಾಗೂ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿ,ಪ್ರಕರಣ ದಾಖಲಿಸಿಕೊಂಡ ನಂತರ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಈ ಕುರಿತು ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ