ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಹಸುವಿನ ಮೇಲೆ ಅತ್ಯಾಚಾರವೆಸಗಿದ ಮುಸ್ಲಿಂ ವ್ಯಕ್ತಿ! ಹಿಂದೂಗಳಿಂದ ಭಾರಿ ಆಕ್ರೋಶ

ಹಸುವಿನ ಮೇಲೆ ಅತ್ಯಾಚಾರ ನಡೆದಿದೆ ಎನ್ನಲಾದ ಆರೋಪದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ತೀವ್ರ ಉದ್ವಿಗ್ನತೆ ಉಂಟಾಗಿದೆ. ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು, ಅಂಗಡಿಗಳು ಹಾಗೂ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸ್‌ ಪಡೆಗಳನ್ನು ನಿಯೋಜಿಸಲಾಗಿದೆ. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.

ಹಸುವಿನ ಮೇಲೆ ಅತ್ಯಾಚಾರವೆಸಗಿದ ಮುಸ್ಲಿಂ ವ್ಯಕ್ತಿ

ಸಾಂದರ್ಭಿಕ ಚಿತ್ರ -

Priyanka P
Priyanka P Feb 2, 2026 1:52 PM

ಇಂದೋರ್: ಹಸುವಿನ ಮೇಲೆ ಕಿಡಿಗೇಡಿಯೊಬ್ಬ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ (Madhya Pradesh) ಬೇತುಲ್ ಜಿಲ್ಲೆಯಲ್ಲಿ ನಡೆದಿದೆ. ಇದರ ವಿಡಿಯೊ ವೈರಲ್ ಆಗುತ್ತಿದ್ದಂತೆ ಉದ್ವಿಗ್ನತೆ ಉಂಟಾಗಿದೆ. ಹಸುವಿನ ಮೇಲಿನ ಅತ್ಯಾಚಾರದಿಂದ (sexual assault) ಕೋಪಗೊಂಡ ಸ್ಥಳೀಯರು ಅಂಗಡಿಗಳು, ವಾಹನಗಳು ಮತ್ತು ಮನೆಗಳನ್ನು ಧ್ವಂಸ ಮಾಡಿ ಬೆಂಕಿ ಹಚ್ಚಿದ್ದಾರೆ.

ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಿ, ವಶಕ್ಕೆ ತೆಗೆದುಕೊಂಡು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ವೈರಲ್ ಆದ ವಿಡಿಯೊದ ಬಗ್ಗೆ ಹಿಂದೂ ಸಂಘಟನೆಗಳು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ನಂತರ ದಾಮ್ಜಿಪುರದಲ್ಲಿ ಉದ್ವಿಗ್ನತೆ ಆರಂಭವಾಯಿತು.

ಇಲ್ಲಿದೆ ಪೊಲೀಸ್ ಅಧಿಕಾರಿ ಮಾತನಾಡಿರುವ ವಿಡಿಯೊ:



ಅತ್ಯಾಚಾರಕ್ಕೊಳಗಾದ ಹಸುವು ಆರೋಪಿ ಅಬು ಖಾನ್‌ಗೆ ಸೇರಿದ್ದು, ವಿಚಾರ ತಿಳಿಯುತ್ತಿದ್ದಂತೆ ಉದ್ವಿಗ್ನತೆ ಉಂಟಾಗಿ ಹಿಂಸಾಚಾರಕ್ಕೆ ಕಾರಣವಾಯಿತು. ಸ್ಥಳೀಯರು ಆರೋಪಿಗೆ ಸಂಬಂಧಪಟ್ಟ ಪಂಕ್ಚರ್ ರಿಪೇರಿ ಅಂಗಡಿಗೆ ಬೆಂಕಿ ಹಚ್ಚಿದರು. ಸಿಟ್ಟಿಗೆದ್ದ ಸ್ಥಳೀಯರು ಏಳು ಅಂಗಡಿಗಳು, ನಾಲ್ಕು ಕಾರುಗಳು, ನಾಲ್ಕು ಬೈಕ್‌ಗಳು ಮತ್ತು ಒಂದು ಮನೆಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಘಟನೆಯಲ್ಲಿ ಯಾರಿಗೂ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ. ಇನ್ನು ಪರಿಸ್ಥಿತಿಯನ್ನು ನಿಯಂತ್ರಿಸಲು ಹತ್ತಿರದ ಜಿಲ್ಲೆಗಳಿಂದ ಪೊಲೀಸ್ ಪಡೆಗಳನ್ನು ಕರೆಸಲಾಯಿತು. ಘಟನೆಯ ಬಗ್ಗೆ ತಿಳಿದ ನಂತರ ಪೊಲೀಸರು ತ್ವರಿತವಾಗಿ ಕಾರ್ಯನಿರ್ವಹಿಸಿದರು. ಹಿಂಸಾಚಾರ ಹೆಚ್ಚಾಗಲು ವದಂತಿಗಳೇ ಕಾರಣ ಎಂದು ಬೇತುಲ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ವೀರೇಂದ್ರ ಜೈನ್ ಹೇಳಿದ್ದಾರೆ.

Bagalakote Crime News: ದಾರುಣ ಘಟನೆ, ಮೂವರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ವಿಧ್ವಂಸಕ ಕೃತ್ಯ ಮತ್ತು ಹಿಂಸಾಚಾರದಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಗುರುತಿಸಲಾಗುತ್ತಿದೆ. ದೂರುಗಳು ಮತ್ತು ಸಾಕ್ಷ್ಯಗಳ ಆಧಾರದ ಮೇಲೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಹಸುವು ಆರೋಪಿಗೆ ಸೇರಿದ್ದು, ಈ ಪ್ರದೇಶದಲ್ಲಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿದ್ದವು ಎಂದು ಸ್ಥಳೀಯ ಹಿಂದೂ ಸಂಘಟನೆಗಳು ಆರೋಪಿಸಿವೆ. ಮತ್ತೊಂದೆಡೆ, ದೊಡ್ಡ ಜನಸಮೂಹ ಆಗಮಿಸಿ ಆಸ್ತಿಪಾಸ್ತಿಗಳಿಗೆ ಹಾನಿಯನ್ನುಂಟುಮಾಡಿದ್ದಾರೆ ಎಂದು ಸಂತ್ರಸ್ತರು ಹೇಳಿದ್ದಾರೆ.

ಜಾರ್ಖಂಡ್‌ನಲ್ಲಿ ಒಂದೇ ಕುಟುಂಬದ ಮೂವರ ಭೀಕರ ಹತ್ಯೆ,

ಜಾರ್ಖಂಡ್‌ನಲ್ಲಿ ಒಂದೇ ಕುಟುಂಬದ ಮೂವರನ್ನು ಭೀಕರ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮಾಟಮಂತ್ರದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಗಂಡ, ಹೆಂಡತಿ ಮತ್ತು ಅವರ 18 ವರ್ಷದ ಮಗನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪೊಲೀಸರ ಪ್ರಕಾರ, ಈ ಘಟನೆ ಪಂಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಭಾನುವಾರ, ಪೊಲೀಸರು ಮನೆಯಿಂದ ಮೂರು ಶವಗಳನ್ನು ವಶಪಡಿಸಿಕೊಂಡರು. ದಾಳಿಯಲ್ಲಿ ಕುಟುಂಬದ ಅಪ್ರಾಪ್ತ ಮಗಳು ಗಂಭೀರವಾಗಿ ಗಾಯಗೊಂಡಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಆಕೆ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ.

ಲೆಸ್ಲಿಗಂಜ್ ಉಪ-ವಿಭಾಗೀಯ ಪೊಲೀಸ್ ಅಧಿಕಾರಿ ಮನೋಜ್ ಕುಮಾರ್ ಝಾ ಮಾತನಾಡಿ, ಪ್ರಾಥಮಿಕ ತನಿಖೆಗಳು ಈ ಪ್ರಕರಣವು ವಾಮಾಚಾರದ ಅನುಮಾನಗಳಿಗೆ ಸಂಬಂಧಿಸಿದೆ ಎಂದು ಸೂಚಿಸುತ್ತವೆ. ಪೊಲೀಸರು ಪ್ರತಿಯೊಂದು ಕೋನದಿಂದ ತನಿಖೆ ನಡೆಸುತ್ತಿದ್ದಾರೆ ಮತ್ತು ಅಪರಾಧಿಗಳನ್ನು ಬಂಧಿಸಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಮೂರೂ ಶವಗಳ ಮರಣೋತ್ತರ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.