ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru Murder Case: ಯುವತಿಯನ್ನು ಸ್ನೇಹಿತೆಯ ರೂಮ್‌ಗೆ ಕರೆದೊಯ್ದು ಭೀಕರವಾಗಿ ಕೊಲೆಗೈದ ಯುವಕ

Bengaluru News: ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ಯುವತಿಯ ಭೀಕರ ಹತ್ಯೆ ನಡೆದಿದೆ. ಆಂಧ್ರ ಮೂಲದ ಯುವತಿಯ ಕೊಲೆ ನಡೆದಿದ್ದು, ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಕೊಲೆಯಾದ ಯುವತಿ ದೇವಿಶ್ರೀ ಮತ್ತು ಆರೋಪಿ ಪ್ರೇಮ್‌ವರ್ಧನ್‌

ಬೆಂಗಳೂರು, ನ.24: ರಾಜಧಾನಿಯಲ್ಲಿ ಯುವತಿಯೊಬ್ಬಳ ಭೀಕರ ಹತ್ಯೆ ನಡೆದಿದೆ. ಯುವಕನೊಬ್ಬ ಸ್ನೇಹಿತೆಯ ರೂಮ್‌ಗೆ ಕರೆದೊಯ್ದು ಯುವತಿಯನ್ನು ಕೊಲೆ ಮಾಡಿರುವ ಘಟನೆ (Bengaluru Murder Case) ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ನಡೆದಿದೆ. ಆಂಧ್ರದ ಮೂಲದ ದೇವಿಶ್ರೀ (21) ಕೊಲೆಯಾದ ಯುವತಿ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮೂಲತಃ ಆಂಧ್ರದ ಅನ್ನಮಯ್ಯ ಜಿಲ್ಲೆಯ ಬಿಕ್ಕಿಂವರೀಪಲ್ಲಿ ಗ್ರಾಮದ ನಿವಾಸಿಯಾದ ದೇವಿಶ್ರೀ, ಕಳೆದ ಮೂರು ವರ್ಷಗಳಿಂದ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಪ್ರತಿಷ್ಠಿತ ಕಾಲೇಜಿನಲ್ಲಿ ಬಿಬಿಎಂ ವ್ಯಾಸಂಗ ಮಾಡುತ್ತಿದ್ದ ದೇವಿಶ್ರೀ, ಭಾನುವಾರ ಬೆಳಗ್ಗೆ ಪ್ರೇಮ್ ವರ್ಧನ್ ಎಂಬಾತನ ಜತೆ ಸ್ನೇಹಿತೆ ರೂಮ್‌ಗೆ ತೆರಳಿದ್ದಳು. ಅಲ್ಲಿ ಆಕೆಯನ್ನು ಕೊಲೆ ಮಾಡಿ ಯುವಕ ಒಬ್ಬನೇ ವಾಪಸ್ ಆಗಿದ್ದಾನೆ.

ಸೋಮವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಮೃತ ದೇವಿಶ್ರೀ, ರೆಡ್ಡಪ್ಪ ಮತ್ತು ಜಗದಂಬಾ ದಂಪತಿಯ ಕೊನೆಯ ಮಗಳು. ಚೆನ್ನಾಗಿ ಓದಲಿ ಅಂತ ಪೋಷಕರು ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿಗೆ ಸೇರಿಸಿದ್ದರು. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ತಲೆಮರೆಸಿಕೊಂಡಿರುವ ಪ್ರೇಮ್ ವರ್ಧನ್‌ಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಕೊಲೆ ಯತ್ನ ಆರೋಪಿಗೆ ಆಶ್ರಯ ನೀಡಿದ್ದ ಕಾಂಗ್ರೆಸ್‌ ನಾಯಕಿ ಬಂಧನ

ವಂದೇ ಭಾರತ್‌ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್‌ ವಿದ್ಯಾರ್ಥಿಗಳ ಸಾವು

ಬೆಂಗಳೂರು: ವಂದೇ ಭಾರತ್ ರೈಲಿಗೆ (Vande Bharat train) ಸಿಲುಕಿ ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು (Nursing students) ಮೃತಪಟ್ಟಿರುವ ಘಟನೆ ನಗರ ಹೊರವಲಯದ ಚಿಕ್ಕಬಾಣಾವರ ರೈಲ್ವೆ ನಿಲ್ದಾಣದಲ್ಲಿ ಭಾನುವಾರ ನಡೆದಿದೆ. ಕೇರಳ ಮೂಲದ ಸ್ಟೇರ್ಲಿನ್ ಎಲ್ಲಾ ಶಾಜಿ (19) ಹಾಗೂ ಜಸ್ಟಿನ್ ಜೋಸೆಫ್ (20) ಮೃತ ದುರ್ದೈವಿಗಳು.

ಈ ಇಬ್ಬರು ರೈಲ್ವೆ ನಿಲ್ದಾಣಕ್ಕೆ ಮಧ್ಯಾಹ್ನ 2.30 ರ ವೇಳೆಗೆ ಬಂದಿದ್ದರು. ಅದೇ ವೇಳೆ ಬೆಂಗಳೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿಗೆ ಸಿಲುಕಿ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೈಕ್‌ಗಳ ನಡುವೆ ಭೀಕರ ಡಿಕ್ಕಿ; ಇಬ್ಬರು ಸ್ಥಳದಲ್ಲಿಯೇ ಸಾವು

ಹೆಸರಘಟ್ಟ ರಸ್ತೆಯ ಸಪ್ತಗಿರಿ ನರ್ಸಿಂಗ್ ಕಾಲೇಜಿನಲ್ಲಿ ಮೊದಲ ವರ್ಷದ ಬಿಎಸ್ಸಿ ವಿಭಾಗದಲ್ಲಿ ಇಬ್ಬರು ವ್ಯಾಸಂಗ ಮಾಡುತ್ತಿದ್ದು, ಕಾಲೇಜು ಸಮೀಪದಲ್ಲೇ ಇಬ್ಬರು ವಾಸವಾಗಿದ್ದರು. ಈ ಘಟನೆಗೆ ನಿಖರವಾದ ಕಾರಣ ಗೊತ್ತಾಗಿಲ್ಲ. ರೈಲಿಗೆ ಆಕಸ್ಮಿಕವಾಗಿ ಸಿಲುಕಿ ಮೃತಪಟ್ಟಿದ್ದಾರೆಯೇ ಅಥವಾ ಆತ್ಮಹತ್ಯೆಯೇ ಎಂಬುದರ ಬಗ್ಗೆ ತನಿಖೆ ನಡೆದಿದೆ. ರೈಲ್ವೆ ನಿಲ್ದಾಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.