ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ರಸ್ತೆ ಅಪಘಾತದಲ್ಲಿ ವ್ಯಕ್ತಿ ಸಾವು: ಪಾಟ್ನಾದಲ್ಲಿ ಭುಗಿಲೆದ್ದ ಹಿಂಸಾಚಾರ, ಹೊತ್ತಿ ಉರಿದ ವಾಹನಗಳು

ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದರಿಂದ ಪಾಟ್ನಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಉದ್ರಿಕ್ತ ಜನ ಸಮೂಹ ಮೂರು ಪೊಲೀಸ್ ಜೀಪ್ ಗಳಿಗೆ ಬೆಂಕಿ ಹಚ್ಚಿದ್ದಾರೆ. ಹಲವೆಡೆ ಕಲ್ಲು ತೂರಾಟ ನಡೆದಿದೆ. ಪ್ರತಿಭಟನಾಕಾರರು ರಸ್ತೆಯನ್ನು ನಿರ್ಬಂಧಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಸಂಗ್ರಹ ಚಿತ್ರ

ಪಾಟ್ನಾ: ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಶುಕ್ರವಾರ ಕಾರು ಡಿಕ್ಕಿ (Road accident) ಹೊಡೆದು ಸಾವನ್ನಪ್ಪಿದ್ದರಿಂದ ಬಿಹಾರದ (Bihar) ಪಾಟ್ನಾದಲ್ಲಿ (Patna) ಹಿಂಸಾಚಾರ (patna violence) ಭುಗಿಲೆದ್ದಿದೆ. ಹಲವು ವಾಹನಗಳಿಗೆ ಬೆಂಕಿ (Fire) ಹಚ್ಚಲಾಗಿದ್ದು, ಕಲ್ಲು ತೂರಾಟ (stones pelted) ಕೂಡ ನಡೆದಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ರಸ್ತೆ ಅಪಘಾತ ಬಳಿಕ ಸೇರಿದ ಜನ ಮೃತ ದೇಹವನ್ನು ರಸ್ತೆಯಲ್ಲೇ ಇತ್ತು ರಸ್ತೆಯನ್ನು ನಿರ್ಬಂಧಿಸಿದರು. ಈ ಸಂದರ್ಭದಲ್ಲಿ ಹಿಂಸಾಚಾರ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಾಟ್ನಾದ ಝೀರೋ ಮೈಲ್ ಬಳಿ ಶುಕ್ರವಾರ ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರ ಬಳಿಕ ಹಿಂಸಾಚಾರ ಭುಗಿಲೆದ್ದಿದ್ದು, ಉದ್ರಿಕ್ತ ಜನರು ಮೂರು ಪೊಲೀಸ್ ಜೀಪ್‌ಗಳು ಸೇರಿದಂತೆ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿದರು. ಹಲವೆಡೆ ಕಲ್ಲು ತೂರಾಟವನ್ನು ಕೂಡ ನಡೆಸಿದ್ದಾರೆ.

ಲೈಂಗಿಕ ದೌರ್ಜನ್ಯ ಪ್ರಕರಣ: ತರುಣ್ ತೇಜ್‌ಪಾಲ್‌ಗೆ 10 ವರ್ಷಗಳ ಜೈಲು ಶಿಕ್ಷೆ

ಈ ಕುರಿತು ಮಾಹಿತಿ ನೀಡಿದ ಪಾಟ್ನಾ ನಗರದ ಎಸ್‌ಡಿಎಂ ಸತ್ಯಂ ಸಹಾಯ್, ಮೃತ ದೇಹವನ್ನು ರಸ್ತೆಯಲ್ಲಿ ಇರಿಸಿ ರಸ್ತೆಯನ್ನು ನಿರ್ಬಂಧಿಸದ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ನಡೆಸಿದರು. ಹಿಂಸಾಚಾರದಲ್ಲಿ ಭಾಗಿಯಾದ ವ್ಯಕ್ತಿಗಳನ್ನು ಗುರುತಿಸಲಾಗಿದೆ. ಶವವನ್ನು ರಸ್ತೆಯಿಂದ ತೆಗೆಸಿ ರಸ್ತೆ ಸಂಚಾರವನ್ನು ಸುಗಮಗೊಳಿಸಲಾಗಿದೆ ಎಂದು ತಿಳಿಸಿದರು.

ಎಎಸ್‌ಪಿ ರಾಜ್ ಕಿಶೋರ್ ಸಿಂಗ್ ಅವರು ಮಾಹಿತಿ ನೀಡಿ, ವ್ಯಕ್ತಿಯೊಬ್ಬರು ರಸ್ತೆ ದಾಟುತ್ತಿದ್ದಾಗ ಅವರಿಗೆ ಕಾರು ಡಿಕ್ಕಿ ಹೊಡೆದಿದೆ. ಬಳಿಕ ಹಿಂಸಾಚಾರ ನಡೆದಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಿಸಲಾಗಿದೆ ಎಂದು ತಿಳಿಸಿದರು.

ಆರ್‌ಜೆಡಿ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ತೇಜಸ್ವಿ ಯಾದವ್ ಅವರು ಮಾತನಾಡಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಎನ್‌ಡಿಎ ಸರ್ಕಾರ ಅಪರಾಧಿಗಳನ್ನು ಪೋಷಿಸುತ್ತಿದೆ. ರಾಜ್ಯದಲ್ಲಿ ನಡೆಯುತ್ತಿರುವ ಅಪರಾಧಗಳ ಬಗ್ಗೆ ಸರ್ಕಾರಕ್ಕೆ ಯಾವುದೇ ಕಾಳಜಿ ಇಲ್ಲ ಎಂದು ಆರೋಪಿಸಿದರು.

Bengaluru News: ಸಲಿಂಗ ಪ್ರೀತಿಗೆ ಮನೆಯವರ ವಿರೋಧ; ಮನನೊಂದು ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರು!

ಪಾಟ್ನಾದಲ್ಲಿ ಇತ್ತೀಚೆಗೆ ಅಪಹರಣಕ್ಕೊಳಗಾಗಿ ಕೊಲೆಯಾದ 25 ವರ್ಷದ ಬಂಟಿ ಯಾದವ್ ಅವರ ಪತ್ನಿಗೆ ಸರ್ಕಾರಿ ಉದ್ಯೋಗ ಮತ್ತು ಅವರ ಮಕ್ಕಳ ಪಿಯುಸಿ ಅನಂತರದ ಶಿಕ್ಷಣವನ್ನು ಖಚಿತಪಡಿಸಿಕೊಳ್ಳುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ ಅವರು ಅವರ ಇಬ್ಬರು ಮಕ್ಕಳ 12ನೇ ತರಗತಿಯವರೆಗಿನ ಶಿಕ್ಷಣಕ್ಕಾಗಿ 5 ಲಕ್ಷ ರೂ. ಚೆಕ್ ಅನ್ನು ಈ ಸಂದರ್ಭದಲ್ಲಿ ಹಸ್ತಾಂತರಿಸಿದರು.

ವಿದ್ಯಾ ಇರ್ವತ್ತೂರು

View all posts by this author