ವಿದೇಶ ಫ್ಯಾಷನ್‌ ಲೋಕ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್‌ ಹೌಸ್‌ ಸಂಪಾದಕೀಯ

Self Harming: ಸಾಲಿಗರ ಕಿರುಕುಳಕ್ಕೆ ಮತ್ತೊಂದು ಬಲಿ, ವಿಷ ಸೇವಿಸಿ ಆತ್ಮಹತ್ಯೆ

ನಿನ್ನೆ ರಾತ್ರಿ ಯಂಕಪ್ಪ ಬಂಗಿ ವಿಷ ಸೇವಿಸಿದ್ದು, ಕೂಡಲೇ ಅವರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ. ಯಂಕಪ್ಪ ವಿವಿಧೆಡೆ 20 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದ. ಹನುಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಾಲಿಗರ ಕಿರುಕುಳಕ್ಕೆ ಮತ್ತೊಂದು ಬಲಿ, ವಿಷ ಸೇವಿಸಿ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Feb 25, 2025 10:17 AM

ಕೊಪ್ಪಳ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ (Micro finance) ಸೇರಿದಂತೆ ಸಾಲ (Loan) ನೀಡಿದವರ ಕಿರುಕುಳಕ್ಕೆ (Harassment) ಮತ್ತೊಂದು ಬಲಿಯಾಗಿದ್ದು, ಕೊಪ್ಪಳ (Koppala News) ಜಿಲ್ಲೆಯಲ್ಲಿ ವಿಷ ಸೇವಿಸಿ ಪಡಿತರ ವಿತರಕ ಆತ್ಮಹತ್ಯೆಗೆ (Self Harming) ಶರಣಾಗಿರುವ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬೆನಕನಹಾಳ ಗ್ರಾಮದಲ್ಲಿ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಯಂಕಪ್ಪ ಬಂಗಿ (38) ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ನಿನ್ನೆ ರಾತ್ರಿ ಯಂಕಪ್ಪ ಬಂಗಿ ವಿಷ ಸೇವಿಸಿದ್ದು, ಕೂಡಲೇ ಅವರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ. ಯಂಕಪ್ಪ ವಿವಿಧೆಡೆ 20 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದ. ಹನುಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿನ್ನೆ ಸಾಲದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ ಘಟನೆ ಮಂಡ್ಯದಲ್ಲಿ ನಡೆದಿತ್ತು. ಆತ್ಮಹತ್ಯೆ ಮಾಡಿಕೊಂಡವರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಿವಾಸಿಗಳು. ಮಾಸ್ತಪ್ಪ (65) ಪತ್ನಿ ರತ್ನಮ್ಮ (45) ಮಗಳು ಲಕ್ಷ್ಮಿ (14) ಎಂಬವರು ಮಂಡ್ಯ ತಾಲೂಕಿನ ವಿ ಸಿ ನಾಲಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದರು. ಮಾಸ್ತಪ್ಪ ವಿವಿಧಡೆ ಒಟ್ಟು 12 ಲಕ್ಷ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಮೈಕ್ರೋ ಫೈನಾನ್ಸ್‌ ಕಿರುಕುಳ ತಡೆಯಲು ಸುಗ್ರೀವಾಜ್ಞೆ ತಂದರೂ ಆತ್ಮಹತ್ಯೆಗಳು ನಿಂತಿಲ್ಲ.

ಇಂದು ಕೋರ್ಟ್ ಮುಂದೆ ದರ್ಶನ್, ಪವಿತ್ರಾ ಸೇರಿ 17 ಆರೋಪಿಗಳು

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ (Renuka Swamy Murder Case) ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಜಾಮೀನು (Bail) ಪಡೆದು ಬಿಡುಗಡೆಯಾಗಿರುವ ನಟ ದರ್ಶನ್ (Actor Darshan) ಹಾಗೂ ಕೊಲೆ ಪ್ರಕರಣದ A1 ಆರೋಪಿ ಪವಿತ್ರಾ ಗೌಡ (Pavithra Gowda) ಸೇರಿದಂತೆ ಎಲ್ಲ ಆರೋಪಿಗಳು ಇಂದು ಕೋರ್ಟ್‌ಗೆ ಹಾಜರಾಗಲಿದ್ದಾರೆ.

ಕೊಲೆ ಪ್ರಕರಣಕ್ಕೆ ಸಂಬಂಧಸಿದಂತೆ ಇಂದು ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್‌ಗೆ ನಟ ದರ್ಶನ್ ಹಾಜರಾಗಲಿದ್ದಾರೆ. ಅಲ್ಲದೇ A1 ಆರೋಪಿ ಪವಿತ್ರ ಗೌಡ ಹಾಗೂ A2 ದರ್ಶನ್ ಮುಖಾಮುಖಿ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಎಲ್ಲಾ ಆರೋಪಿಗಳನ್ನು ಕೂಡ ಪೊಲೀಸರು ಇಂದು ಕೋರ್ಟಿಗೆ ಹಾಜರುಪಡಿಸಲಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ವಿಚಾರಣೆ ಫೆ.25 ಕ್ಕೆ ಮುಂದೂಡಿ ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ಆದೇಶ ಹೊರಡಿಸಿತ್ತು. ಒಂದು ವೇಳೆ ಕೋರ್ಟಿಗೆ ಹಾಜರಾಗದಿದ್ದಲ್ಲಿ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಬೇಕು. ಇಂದು ಅಕಸ್ಮಾತ್ ಕೋರ್ಟ್‌ಗೆ ದರ್ಶನ್ ಹಾಜರಾದರೆ, ನಟ ದರ್ಶನ್ ಹಾಗೂ ಪವಿತ್ರ ಗೌಡ ಮುಖಾಮುಖಿ ವಿಚಾರಣೆ ಎದುರಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ದರ್ಶನ್‌ ಮತ್ತಿತರರಿಗೆ ಹೈಕೋರ್ಟ್‌ ಜಾಮೀನು ನೀಡಿದೆ. ಈ ಜಾಮೀನು ಪ್ರಶ್ನಿಸಿ ಕರ್ನಾಟಕ ಪೊಲೀಸರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ತಮ್ಮ ಪರ ವಾದಿಸಲು ಕಾಂಗ್ರೆಸ್‌ ನಾಯಕ ಕಪಿಲ್‌ ಸಿಬಲ್‌ ಅವರನ್ನು ದರ್ಶನ್‌ ಕಡೆಯವರು ಒಪ್ಪಿಸಿದ್ದಾರೆ ಎನ್ನಲಾಗಿದೆ. ದರ್ಶನ್ ಅವರು ‘ಡೆವಿಲ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಬೇಕಿದೆ. ಸದ್ಯ ಅವರು ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ ಶೀಘ್ರವೇ ಆರಂಭ ಆಗಬೇಕಿದೆ. ಈ ಚಿತ್ರದ ಬಳಿಕ ಪ್ರೇಮ್ ಜೊತೆಯೂ ದರ್ಶನ್ ಸಿನಿಮಾ ಮಾಡುತ್ತಿದ್ದಾರೆ. ಅತ್ತ ಪವಿತ್ರಾ ಗೌಡ ಕೂಡ ಹೊಸ ಸ್ಟುಡಿಯೋವನ್ನು ಇತ್ತೀಚೆಗೆ ಓಪನ್‌ ಮಾಡುವ ಮೂಲಕ ಹೊಸ ಬದುಕಿಗೆ ನಾಂದಿ ಹಾಡುತ್ತಿದ್ದಾರೆ.

ಇದನ್ನೂ ಓದಿ: Micro Finance harassment: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೆ ಮೂವರ ಬಲಿ, ನಾಲೆಗೆ ಹಾರಿ ಆತ್ಮಹತ್ಯೆ