Mass Murder Case: ಗುಂಡು ಹಾರಿಸಿ ಅತ್ತೆ, ನಾದಿನಿ, ಮಗಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ
ಮೂವರನ್ನು ಹತ್ಯೆ ಮಾಡಿದ ಬಳಿಕ ರತ್ನಾಕರ್ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ರತ್ನಾಕರ ಮನೆಯ ಹಿಂಭಾಗದ ನಿರ್ಜನ ಪ್ರದೇಶದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ದುರ್ಘಟನೆಯ ಹಿಂದಿರುವ ಕಾರಣಗಳನ್ನು ಪೊಲೀಸರು ಶೋಧಿಸುತ್ತಿದ್ದಾರೆ.

ಕೊಲೆಗಾರ ರತ್ನಾಕರ

ಚಿಕ್ಕಮಗಳೂರು: ಚಿಕ್ಕಮಗಳೂರು (Chikkamagaluru) ಜಿಲ್ಲೆಯಲ್ಲಿ ಘೋರವಾದ ಅಪರಾಧ ಕೃತ್ಯ (Crime news) ಸಂಭವಿಸಿದೆ. ವ್ಯಕ್ತಿಯೊಬ್ಬ ನಾಡ ಬಂದೂಕಿನಿಂದ ಗುಂಡು ಹಾರಿಸಿ ಅತ್ತೆ, ನಾದಿನಿ ಹಾಗು ಮಗಳನ್ನು ಭೀಕರವಾಗಿ ಹತ್ಯೆ (Mass Murder Case) ಮಾಡಿ, ಬಳಿಕ ತಾನು ಸಹ ಆತ್ಮಹತ್ಯೆ (Self harming) ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನ ಮಾಗಲು ಗ್ರಾಮದಲ್ಲಿ ನಡೆದಿದೆ. ಅತ್ತೆ ಜ್ಯೋತಿ (50) ನಾದಿನಿ ಸಿಂಧು (26) ಹಾಗು ಮಗಳು ಮೌಲ್ಯ (7) ಎನ್ನುವವರನ್ನು ರತ್ನಾಕರ್ ಎನ್ನುವ ವ್ಯಕ್ತಿ ಭೀಕರವಾಗಿ ಕೊಲೆ ಮಾಡಿದ್ದಾನೆ.
ಮೂವರನ್ನು ಹತ್ಯೆ ಮಾಡಿದ ಬಳಿಕ ರತ್ನಾಕರ್ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ರತ್ನಾಕರ ಮನೆಯ ಹಿಂಭಾಗದ ನಿರ್ಜನ ಪ್ರದೇಶದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ದುರ್ಘಟನೆಯ ಹಿಂದಿರುವ ಕಾರಣಗಳನ್ನು ಪೊಲೀಸರು ಶೋಧಿಸುತ್ತಿದ್ದಾರೆ.
ಇತ್ತೀಚಿಗಷ್ಟೇ ಕೊಡಗು ಜಿಲ್ಲೆಯಲ್ಲಿ ಹೆಂಡತಿಗೆ ಅಕ್ರಮ ಸಂಬಂಧ ಇದೆ ಎಂದು ಶಂಕಿಸಿ ನಾಲ್ವರನ್ನು ಕೊಚ್ಚಿ ಕೊಂದು ಪತಿಯೊಬ್ಬ ಪರಾರಿಯಾಗಿದ್ದ ಘಟನೆ ನಡೆದಿತ್ತು. ಬಳಿಕ ಪೊಲೀಸರು ಶೀಘ್ರ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಚಿಕ್ಕಮಗಳೂರಲ್ಲಿ ಸಹ ಅಳಿಯನೊಬ್ಬ ಅತ್ತೆ ನಾದಿನಿ ಹಾಗು ಮಗಳನ್ನು ಭೀಕರವಾಗಿ ಕೊಂದು ತಾನು ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ದುಷ್ಕರ್ಮಿಗಳಿಂದ ಯುವಕನ ಕೊಚ್ಚಿ ಕೊಲೆ
ಬೆಂಗಳೂರು: ಬೆಂಗಳೂರಿನಲ್ಲಿ (Bengaluru news) ಮತ್ತೊಂದು ಭೀಕರವಾದ ಮರ್ಡರ್ (Crime news) ಆಗಿದ್ದು ಯುವಕನನ್ನು ಐದಾರು ಜನ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ (Murder Case) ಮಾಡಿರುವ ಘಟನೆ ಬೆಂಗಳೂರಿನ ಬನಶಂಕರಿ 2ನೇ ಹಂತದ ಎಕೆ ಕಾಲೋನಿಯಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ನಿಖಿಲ್ ಎಂದು ಗುರುತಿಸಲಾಗಿದೆ. ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೈಕ್‌ನಲ್ಲಿ ಬಂದಿದ್ದ ಐದಾರು ದುಷ್ಕರ್ಮಿಗಳು ನಿಖಿಲ್‌ನನ್ನು ಹತ್ಯೆ ಮಾಡಿದ್ದಾರೆ. ನಿನ್ನೆ ರಾತ್ರಿ 8 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ಕೊಲೆಯಾದ ನಿಖಿಲ್ ಮೃತದೇಹವನ್ನು ಸದ್ಯ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದುಷ್ಕೃತ್ಯದ ಹಿಂದೆ ಪ್ರೇಮ ಪ್ರಕರಣ, ಹಳೆ ದ್ವೇಷದ ಹಿನ್ನೆಲೆಗಳನ್ನು ಪರಿಶೀಲಿಸಲಾಗುತ್ತಿದೆ. ಸ್ಥಳದಲ್ಲಿರುವ ಸಿಸಿಟಿವಿ ಪೂಟೇಜ್‌ಗಳನ್ನು ವಶಕ್ಕೆ ಪಡೆಯಲಾಗಿದೆ.
ಇತ್ತೀಚೆಗೆ ಆನೆಕಲ್‌ನಲ್ಲಿ ರೌಡಿ ಶೀಟರ್ ಒಬ್ಬನನ್ನು ಇದೇ ರೀತಿ ಮಚ್ಚಿನಿಂದ ಕೊಚ್ಚಿ ಕೊಲ್ಲಲಾಗಿತ್ತು. ನೇಪಾಳಿ ಮಂಜ ಎಂಬ ರೌಡಿಯನ್ನು ಸ್ನೇಹಿತರೇ ಕರೆ ಮಾಡಿ ಕರೆಸಿಕೊಂಡಿದ್ದರು. ಎಣ್ಣೆ ಪಾರ್ಟಿಯ ಸಂದರ್ಭದಲ್ಲಿ ಅಲ್ಲಿಗೆ ದಾಳಿ ಮಾಡಿದ ದುಷ್ಕರ್ಮಿಗಳು ನೇಪಾಳಿ ಮಂಜನನ್ನು ಕೊಚ್ಚಿ ಕೊಂದಿದ್ದರು.
ಇದನ್ನೂ ಓದಿ: Bengaluru Murder: ಪತ್ನಿಯ ಕೊಂದು ಸೂಟ್‌ಕೇಸ್‌ನಲ್ಲಿ ತುಂಬಿದ್ದ ಕೇಸ್; ಕೊಲೆಗೆ ಕಾರಣ ಬಿಚ್ಚಿಟ್ಟ ಆರೋಪಿಯ ತಂದೆ!