Murder Case: ಪತ್ನಿಯನ್ನು ಬರ್ಬರವಾಗಿ ಕೊಲೆಗೈದು ಪೊಲೀಸರಿಗೆ ಶರಣಾದ ಕಿಡಿಗೇಡಿ
ಕಿಡಿಗೇಡಿ ಪತಿಯೋರ್ವ ತನ್ನ ಪತ್ನಿಯನ್ನು ಕೊಲೆಗೈದು ಪೊಲೀಸರಿಗೆ ಶರಣಾಗಿದ್ದಾನೆ. ಬೆಂಗಳೂರಿನ ಬಾಣಸವಾಡಿಯ ಜಯಲಕ್ಷ್ಮಿ ಶಾಲೆಯ ಸಮೀಪ ಘಟನೆ ನಡೆದಿದ್ದು, ಕೊಲೆಯಾದ ದುರ್ದೈವಿಯನ್ನು ಕಲೈವಾಣಿ ಎಂದು ಗುರುತಿಸಲಾಗಿದೆ. ಈಕೆಯನ್ನು ಪತಿ ರಮೇಶ್ ಬರ್ಬರವಾಗಿ ಕೊಲೆ ಮಾಡಿದ್ದಾರೆ.


ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭೀಕರ ಕೊಲೆ ಪ್ರಕರಣವೊಂದು(Murder Case) ನಡೆದಿದೆ. ಕಿಡಿಗೇಡಿ ಪತಿಯೋರ್ವ ತನ್ನ ಪತ್ನಿಯನ್ನು ಕೊಲೆಗೈದು ಪೊಲೀಸರಿಗೆ ಶರಣಾಗಿದ್ದಾನೆ. ಬೆಂಗಳೂರಿನ ಬಾಣಸವಾಡಿಯ ಜಯಲಕ್ಷ್ಮಿ ಶಾಲೆಯ ಸಮೀಪ ಘಟನೆ ನಡೆದಿದ್ದು, ಕೊಲೆಯಾದ ದುರ್ದೈವಿಯನ್ನು ಕಲೈವಾಣಿ ಎಂದು ಗುರುತಿಸಲಾಗಿದೆ. ಈಕೆಯನ್ನು ಪತಿ ರಮೇಶ್ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಇನ್ನು ರಮೇಶ್ ಗೆ ಕಲೈವಾಣಿ ಎರಡನೇ ಪತ್ನಿಯಾಗಿದ್ದು, ಮೊದಲ ಪತ್ನಿಯಿಂದ ಬೇರೆಯಾಗಿ ಕಲೈವಾಣಿ ಜೊತೆಗೆ ರಮೇಶ್ ವಾಸವಾಗಿದ್ದ ಎನ್ನಲಾಗಿದೆ.
ಮೊಲದ ಪತ್ನಿ ಮತ್ತು ಮಕ್ಕಳನ್ನು ಭೇಟಿಯಾದ ವಿಚಾರಕ್ಕೆ ರಮೇಶ್ ಮತ್ತು ಪತ್ನಿ ಕಲೈವಾಣಿ ನಡುವೆ ಜಗಳ ನಡೆದಿತ್ತು. ಜಗಳ ತಾರಕಕ್ಕೇರಿ ಸಿಟ್ಟಿನ ಭರದಲ್ಲಿ ರಮೇಶ್ ಕಲೈವಾಣಿಯನ್ನು ಹೊಡೆದು ಕೊಂದಿದ್ದಾನೆ. ಇದಾದ ಬಳಿಕ ಏನು ಮಾಡಬೇಕೆಂದು ತೋಚದ ರಮೇಶ್ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನೂ ಓದಿ: Suhas Shetty Murder: ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಕೊಲೆಗಾರರ ಹೆಡೆಮುರಿ ಕಟ್ಟುತ್ತೇವೆ ಎಂದ ಸಿಎಂ
ಆಸ್ತಿಗಾಗಿ ಅವಳಿ ಕೊಲೆ, ತಾಯಿ- ಮಗನ ಹತ್ಯೆ
ಬಾಗಲಕೋಟೆ (Bagalakote news) ಜಿಲ್ಲೆಯ ಇಳಕಲ್ ತಾಲ್ಲೂಕಿನ ನಂದವಾಡಗಿ ಗ್ರಾಮದಲ್ಲಿ ಆಸ್ತಿ ವಿವಾದಕ್ಕೆ ವ್ಯಕ್ತಿಯೊಬ್ಬ ತಾಯಿ, ಮಗನನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ತಾಯಿ ಸಂಗಮ್ಮ ಗೋನಾಳ (45), ಮಗ ಸೋಮಪ್ಪ (26) ಎಂಬವರನ್ನು ಕೊಡಲಿಯಿಂದ ಕೊಚ್ಚಿ ಸಣ್ಣ ಸೋಮಪ್ಪ ಗೋನಾಳ ಎಂಬಾತ ಹತ್ಯೆ ಮಾಡಿದ್ದಾನೆ. ಸ್ಥಳಕ್ಕೆ ಇಳಕಲ್ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.