ಪತ್ನಿಯನ್ನು ಕೊಂದು ದೇಹವನ್ನು ಸೂಟ್‌ಕೇಸ್‌ನಲ್ಲಿ ತುಂಬಿಟ್ಟ ಪತಿ; ಬೆಂಗಳೂರಿನಲ್ಲೊಂದು ಶ್ರದ್ಧಾ ವಾಕರ್ ಪ್ರಕರಣ ಮಾದರಿಯ ಕ್ರೈಂ
Bengaluru Horror: ಪಾಪಿ ಪತಿಯೊಬ್ಬ ತನ್ನ ಪತ್ನಿಯನ್ನು ಕೊಂದು ಬಳಿಕ ಆಕೆ ದೇಹವನ್ನು ತುಂಡರಿಸಿ ಸೂಟ್ ಕೇಸ್‌ಗೆೆ ತುಂಬಿರುವ ಭಯಾನಕ ಘಟನೆ ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡಕನ್ನಹಳ್ಳಿಯ ಮನೆಯೊಂದರಲ್ಲಿ ನಡೆದಿದೆ. ಆರೋಪಿಯನ್ನು ಮಹಾರಅಷ್ಟ್ರ ಮೂಲದ ರಾಕೇಶ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

ರಾಕೇಶ್-ಗೌರಿ ಅನಿಲ್ ಸಾಂಬೆಕರ್ ದಂಪತಿ.

ಬೆಂಗಳೂರು: 2022ರಲ್ಲಿ ದಿಲ್ಲಿಯಲ್ಲಿ ಶ್ರದ್ಧಾ ವಾಕರ್ ಎನ್ನುವ ಯುವತಿಯನ್ನು ಆಕೆಯ ಲಿವ್-ಇನ್ ಸಂಗಾತಿ ಅಫ್ತಾಬ್ ಪೂನಾವಾಲಾ ಬರ್ಬರವಾಗಿ ಕೊಲೆ ಮಾಡಿ ದೇಹವನ್ನು ತುಂಡುಗಳಾಗಿ ಕತ್ತರಿಸಿ ವಾರಗಳ ಕಾಲ ಮನೆಯ ಫ್ರಿಡ್ಜ್ನಲ್ಲಿ ಇರಿಸಿದ್ದ ಪ್ರಕರಣ ಬೆಳಕಿಗೆ ಬಂದು ಇಡೀ ದೇಶವೇ ಬೆಚ್ಚಿಬಿದ್ದಿತ್ತು. ಇದೀಗ ಅದೇ ಮಾದರಿಯ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ (Bengaluru Horror). ಪಾಪಿ ಪತಿಯೊಬ್ಬ ತನ್ನ ಪತ್ನಿಯನ್ನು ಕೊಂದು ಬಳಿಕ ಆಕೆ ದೇಹವನ್ನು ತುಂಡರಿಸಿ ಸೂಟ್ ಕೇಸ್‌ಗೆೆ ತುಂಬಿರುವ ಭಯಾನಕ ಘಟನೆ (Crime News) ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡಕನ್ನಹಳ್ಳಿಯ ಮನೆಯೊಂದರಲ್ಲಿ ನಡೆದಿದೆ.
ಮಹಾರಾಷ್ಟ್ರ ಮೂಲದ ರಾಕೇಶ್ ತನ್ನ ಪತ್ನಿ ಗೌರಿ ಅನಿಲ್ ಸಾಂಬೆಕರ್ (32) ಅವರನ್ನು ಕೊಂದು ಬಳಿಕ ಮೃತದೇಹವನ್ನು ತುಂಡರಿಸಿ ಸೂಟ್ ಕೇಸ್ನಲ್ಲಿ ತುಂಬಿಟ್ಟಿದ್ದಾನೆ. ಬಳಿಕ ಈ ವಿಚಾರವನ್ನು ಆಕೆಯ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದಾನೆ. ಮಹಾರಾಷ್ಟ್ರ ಪೊಲೀಸರ ಮಾಹಿತಿ ಆಧರಿಸಿ ಬೆಂಗಳೂರಿನ ಹುಳಿಮಾವು ಪೊಲೀಸರು ಮನೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
Murder most foul in Bengaluru
— Gautam (@gautyou) March 27, 2025
Man kills Wife, Dismembers Body and Packs Her in a Suitcase!
Accused Rakesh killed wife Gauri Anil Sambekar & informed her parents in Maha
Couple employed in a private company were in WFH mode pic.twitter.com/RnAm68eYho
ರಾಕೇಶ್ ಮತ್ತು ಗೌರಿ ಅನಿಲ್ ಸಾಂಬೆಕರ್ ದಂಪತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಕೆಲವು ವರ್ಷಗಳಿಂದ ದೊಡ್ಡಕಮ್ಮನಹಳ್ಳಿ ವಾಸವಾಗಿದ್ದರು. ಡಿಸಿಪಿ ಸಾರಾ ಫಾತಿಮಾ ಸ್ಥಳಕ್ಕೆ ಭೇಟಿ ನೀಡಿ ಪರಶೀಲನೆ ನಡೆದಿದ್ದಾರೆ.
ಯಾಕಾಗಿ ರಾಕೇಶ್ ಕೊಲೆ ಮಾಡಿ ಈ ಕೃತ್ಯ ಎಸಗಿದ್ದಾನೆ ಎನ್ನುವುದರ ಬಗ್ಗೆ ಅಧಿಕೃತ ಮಾಹಿತಿ ತಿಳಿದು ಬಂದಿಲ್ಲ. ʼʼಮಹಾರಾಷ್ಟ್ರ ಮೂಲದ ರಾಕೇಶ್ ಹಾಗೂ ಗೌರಿ ಅನಿಲ್ ಸಾಂಬೆಕರ್ ದಂಪತಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದರು. ವರ್ಕ್ ಫ್ರಂ ಹೋಂ ಹಿನ್ನೆಲೆಯಲ್ಲಿ ಮನೆಯಿಂದಲೇ ಕೆಲಸ ಮಾಡುತ್ತಿದ್ದರುʼʼ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ತನಿಖೆ ಪ್ರಗತಿಯಲ್ಲಿದೆ.
ಈ ಸುದ್ದಿಯನ್ನೂ ಓದಿ: Apsara Murder Case: ಕಿರುತೆರೆ ನಟಿ ಹತ್ಯೆ ಪ್ರಕರಣ; ದೇವಸ್ಥಾನದ ಅರ್ಚಕನಿಗೆ ಜೀವಾವಧಿ ಶಿಕ್ಷೆ
4 ವರ್ಷದ ಮಗನನ್ನೇ ಕೊಂದ ಕಿರಾತಕ
ತುಮಕೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ ಎನ್ನುವ ಕಾರಣಕ್ಕೆ 4 ವರ್ಷದ ಮಗನನ್ನೇ ಮಲ ತಂದೆ ಕೊಲೆ ಮಾಡಿರುವ ಘಟನೆ ತಾಲೂಕಿನ ಊರ್ಡಿಗೆರೆ ಹೋಬಳಿಯ ಸಿದ್ಧಲಿಂಗಯ್ಯನಪಾಳ್ಯದಲ್ಲಿ ಇತ್ತೀಚೆಗೆ ನಡೆದಿತ್ತು. ಮಿಥುನ್ ಗೌಡ (4) ಕೊಲೆಯಾದ ಬಾಲಕ. ಚಂದ್ರಶೇಖರ್(24) ಮಗುವನ್ನು ಕೊಂದ ಆರೋಪಿ. ಈತನನ್ನು ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಮಗು ಹಾವು ಕಚ್ಚಿ ಮೃತಪಟ್ಟಿದೆ ಎಂದು ಆರೋಪಿ ಬಿಂಬಿಸಿದ್ದ. ಆದರೆ ಅಂತ್ಯಕ್ರಿಯೆಗೂ ಮುನ್ನ ಗ್ರಾಮಸ್ಥರೊಬ್ಬರು ತೆಗೆದಿದ್ದ ಫೋಟೋದಿಂದ ಅನುಮಾನ ವ್ಯಕ್ತವಾಗಿದ್ದರಿಂದ ಚಂದ್ರಶೇಖರ್ ವಿರುದ್ಧ ದೂರು ನೀಡಲಾಗಿತ್ತು. ಹೀಗಾಗಿ ಮಲ ತಂದೆಯೇ ಮಗನ ಮೇಲೆ ಹಲ್ಲೆ ಮಾಡಿ ಕೊಲೆಗೈದಿರುವ ವಿಚಾರ ತನಿಖೆಯಲ್ಲಿ ಪೊಲೀಸರ ತಿಳಿದುಬಂದಿದೆ. ಬಂಧಿತ ಆರೋಪಿ ಚಂದ್ರಶೇಖರ್ ಚಾಮರಾಜನಗರದವನಾಗಿದ್ದು, ಕ್ರಷರ್ನಲ್ಲಿ ಲಾರಿ ಚಾಲಕನಾಗಿದ್ದ.
ಮಾರ್ಚ್ 20ರಂದು ಚಂದ್ರಶೇಖರ್ ಮಗುವಿಗೆ (ಮಿಥುನ್ ಗೌಡ) ಹಲ್ಲೆ ನಡೆಸಿದ್ದ. ಇದರಿಂದ, ತೀವ್ರ ಗಾಯಗೊಂಡ ಮಿಥುನ್ ಪ್ರಜ್ಞೆ ತಪ್ಪಿಬಿದ್ದಿದ್ದ. ಇದನ್ನು ಮುಚ್ಚಿಹಾಕಲು, ಮಗುವಿಗೆ ಹಾವು ಕಚ್ಚಿದೆ ಎಂದು ಸುಳ್ಳು ಹೇಳಿ ಸ್ಥಳೀಯರನ್ನು ನಂಬಿಸಲು ಪ್ರಯತ್ನಿಸಿದ್ದ. ತಕ್ಷಣವೇ ಗ್ರಾಮಸ್ಥರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಿಥುನ್ನನ್ನು ಊರ್ಡಿಗೆರೆ ಕ್ಲಿನಿಕ್‌ಗೆ ಕರೆದೊಯ್ದಿದ್ದರು. ಆದರೆ ವೈದ್ಯರು ಪರೀಕ್ಷೆ ನಡೆಸಿದಾಗ ಮಿಥುನ್ ಮೃತಪಟ್ಟಿರುವುದು ದೃಢಪಟ್ಟಿತ್ತು.