ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Car Accident: ಇನೋವಾ ಕಾರು ಡಿಕ್ಕಿ ಬೈಕ್ ಹಿಂಬದಿ ಕುಳಿತಿದ್ದ ವ್ಯಕ್ತಿ ಮೃತ

ವೇಗವಾಗಿ ಬಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಗೊಂಡಿದ್ದ ಇಬ್ಬರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದರು. ಪರೀಕ್ಷಿಸಿದ ವೈದ್ಯರು ನಾರಾಯಣಸ್ವಾಮಿ ಮೃತಪಟ್ಟಿದ್ದಾನೆ ಎಂದು ತಿಳಿಸಿ ಗಾಯಾಳು ಮಧುವನ್ನು ದಾಖಲಿಸಿ ಕೊಂಡು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರಕ್ಕೆ ರವಾನಿಸಲಾಗಿದೆ.

ಚಿಂತಾಮಣಿ: ಶಿಡ್ಲಘಟ್ಟ ರಸ್ತೆಯ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿ ARTO ಮುಂಭಾಗದಲ್ಲಿ ರಾತ್ರಿ ಬೈಕ್ ಗೆ ಇನೋವಾ ಕಾರು ಡಿಕ್ಕಿಯಾಗಿ ಬೈಕ್ ನ ಹಿಂಬದಿ ಕುಳಿತಿದ್ದ ವ್ಯಕ್ತಿ ಮೃತಪಟ್ಟಿದ್ದು ಸವಾರನಿಗೆ ಕಾಲು ಮುರಿದು ಗಾಯಗೊಂಡಿದ್ದಾನೆ.

ಶಿಡ್ಲಘಟ್ಟ ತಾಲ್ಲೂಕಿನ ದೊಡ್ಡದಾಸೇನಹಳ್ಳಿಯ ನಾರಾಯಣಸ್ವಾಮಿ(68) ಮೃತಪಟ್ಟಿರುವ ವ್ಯಕ್ತಿ.ಬೈಕ್ ಚಾಲನೆ ಮಾಡುತ್ತಿದ್ದ ಮಧುಗೆ ಕಾಲು ಮುರಿದಿದೆ.

ಇದನ್ನೂ ಓದಿ: IPL Celebration: ನಾಳೆ ಬಿಸಿಸಿಐ ಅಪೆಕ್ಸ್‌ ಕೌನ್ಸಿಲ್‌ ಸಭೆ; ಐಪಿಎಲ್‌ ಸಂಭ್ರಮಾಚರಣೆಗೆ ಹೊಸ ನಿಯಮ ಜಾರಿ ಸಾಧ್ಯತೆ!

ರಾತ್ರಿ ಬೈಕ್ ನಲ್ಲಿ ಶಿಡ್ಲಘಟ್ಟ ಕಡೆಯಿಂದ ಚಿಂತಾಮಣಿಗೆ ಬರುತ್ತಿದ್ದರು.ಬೆಂಗಳೂರಿನ ರಾಜಾಜಿ ನಗರದ ಇನೋವಾ ಕಾರು ಚಿಂತಾಮಣಿಯ ಮದುವೆಯೊಂದರಲ್ಲಿ ಭಾಗವಹಿಸಲು ಆಗಮಿಸಿದ್ದು, ಮುಗಿಸಿಕೊಂಡು ವಾಪಸ್ ಹೋಗುವಾಗ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದವರ ವಿವರ ಇನ್ನೂ ದೊರೆತಿಲ್ಲ.

ವೇಗವಾಗಿ ಬಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಗೊಂಡಿದ್ದ ಇಬ್ಬರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದರು. ಪರೀಕ್ಷಿಸಿದ ವೈದ್ಯರು ನಾರಾಯಣಸ್ವಾಮಿ ಮೃತಪಟ್ಟಿದ್ದಾನೆ ಎಂದು ತಿಳಿಸಿ ಗಾಯಾಳು ಮಧು ವನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರಕ್ಕೆ ರವಾನಿಸಲಾಗಿದೆ.

ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.