ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ವರಮಹಾಲಕ್ಷ್ಮೀ ಹಬ್ಬಕ್ಕೆ ಹೂ ತರಲು ಹೊರಟ ವ್ಯಕ್ತಿ ಹೆಂಡತಿಯ ಕಣ್ಣೆದುರೇ ದುರಂತ ಅಂತ್ಯ

ವೆಂಕಟೇಶ್ (58) ಮೃತ ದುರ್ದೈವಿ. ಪೆರೇಸಂದ್ರದಿಂದ ಚಿಕ್ಕಬಳ್ಳಾಪುರದ ಕಡೆಗೆ ಪತ್ನಿಯೊಂದಿಗೆ ಎಪೆ ಆಟೋದಲ್ಲಿ ಬರುತ್ತಿದ್ದ ವೇಳೆ ವೇಗವಾಗಿ ಬಂದ ಟಿಪ್ಪರ್ ಲಾರಿ ಆಟೋಗೆ ಡಿಕ್ಕಿ ಹೊಡೆದಿದೆ. ಅಪಘಾತ ದ ತೀವ್ರತೆಗೆ ವೆಂಕಟೇಶ್ ಗಂಭೀರವಾಗಿ ಗಾಯಗೊಂಡಿದ್ದು, ಪತ್ನಿಯ ಕಣ್ಣೆದುರೇ ನೋವಿನಿಂದ ನರಳಾಡುತ್ತಿದ್ದರು ಎನ್ನಲಾಗಿದೆ.

ಚಿಕ್ಕಬಳ್ಳಾಪುರ: ವರಮಹಾಲಕ್ಷ್ಮೀ ಹಬ್ಬದ ಸಂಭ್ರಮಕ್ಕಾಗಿ ಹೂ ತರಲು ಪತ್ನಿಯೊಂದಿಗೆ ಹೊರಟಿದ್ದ ವ್ಯಕ್ತಿಯೊಬ್ಬರು ಟಿಪ್ಪರ್ ಲಾರಿಯ ಅಜಾಗರೂಕ ಚಾಲನೆಗೆ ಬಲಿಯಾಗಿರುವ ಹೃದಯವಿದ್ರಾವಕ ಘಟನೆ ತಾಲ್ಲೂಕಿನ ಪೈಲಗುರ್ಕಿ ಬಳಿ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಶುಕ್ರವಾರ ಸಂಭವಿಸಿದೆ.

ವೆಂಕಟೇಶ್ (58) ಮೃತ ದುರ್ದೈವಿ. ಪೆರೇಸಂದ್ರದಿಂದ ಚಿಕ್ಕಬಳ್ಳಾಪುರದ ಕಡೆಗೆ ಪತ್ನಿಯೊಂದಿಗೆ ಎಪೆ ಆಟೋದಲ್ಲಿ ಬರುತ್ತಿದ್ದ ವೇಳೆ ವೇಗವಾಗಿ ಬಂದ ಟಿಪ್ಪರ್ ಲಾರಿ ಆಟೋಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ವೆಂಕಟೇಶ್ ಗಂಭೀರವಾಗಿ ಗಾಯಗೊಂಡಿದ್ದು, ಪತ್ನಿಯ ಕಣ್ಣೆದುರೇ ನೋವಿನಿಂದ ನರಳಾಡುತ್ತಿದ್ದರು ಎನ್ನಲಾಗಿದೆ.

ಅಪಘಾತ ಸಂಭವಿಸಿ ಸುಮಾರು ಒಂದು ಗಂಟೆ ಕಳೆದರೂ ಆಂಬುಲೆನ್ಸ್ ಸ್ಥಳಕ್ಕೆ ಬಾರದ ಕಾರಣ ಗಾಯಾಳುವಿಗೆ ತಕ್ಷಣದ ಚಿಕಿತ್ಸೆ ದೊರೆಯದೆ ಪರದಾಡುವಂತಾಯಿತು ಎಂಬ ಆರೋಪ ಕೇಳಿ ಬಂದಿದೆ. ಕೊನೆಗೆ ವೆಂಕಟೇಶ್ ಮೃತಪಟ್ಟಿದ್ದು, ಹಬ್ಬದ ಸಡಗರಕ್ಕಾಗಿ ಹೊರಟಿದ್ದ ಕುಟುಂಬದಲ್ಲಿ ಸೂತಕದ ಛಾಯೆ ಆವರಿಸಿದೆ.

ಇದನ್ನೂ ಓದಿ: Chitradurga Bus Accident: ಚಿತ್ರದುರ್ಗದ ಬಳಿ ಭೀಕರ ಅಪಘಾತ; ಪ್ರವಾಸಿ ಬಸ್‌ ಪಲ್ಟಿಯಾಗಿ ಇಬ್ಬರ ಸಾವು, 26 ಮಂದಿಗೆ ಗಾಯ

ಒಂದೇ ವಾರದಲ್ಲಿ ಎರಡನೇ ದುರಂತ

ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಟಿಪ್ಪರ್ ಲಾರಿಗಳ ಅಜಾಗರೂಕ ಹಾಗೂ ವೇಗದ ಚಾಲನೆಯಿಂದ ಅಪಘಾತಗಳು ಹೆಚ್ಚಾಗುತ್ತಿದ್ದು, ಒಂದೇ ವಾರದ ಅವಧಿಯಲ್ಲಿ ಇದು ಎರಡನೇ ಘಟನೆ ಎನ್ನಲಾ ಗಿದೆ. ದೆಹಲಿ ಕ್ರಷರ್ ಹಾಗೂ ಗ್ರಾನೈಟ್ ಉತ್ಪನ್ನಗಳನ್ನು ಸಾಗಿಸುವ ಭಾರೀ ಟಿಪ್ಪರ್‌ಗಳ ಸಂಚಾರ ದಿಂದ ಹೆದ್ದಾರಿಯಲ್ಲಿ ವಾಹನ ಸವಾರರು ಆತಂಕದಲ್ಲಿದ್ದಾರೆ.

ನಿಯಮ ಉಲ್ಲಂಘಿಸಿ ಅತಿವೇಗದಲ್ಲಿ ಸಂಚರಿಸುವ ಟಿಪ್ಪರ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳ ಬೇಕು. ಅಪಘಾತ ಸಂಭವಿಸಿದ ಕೂಡಲೇ ಗಾಯಾಳುಗಳಿಗೆ ತುರ್ತು ಚಿಕಿತ್ಸೆ ದೊರೆಯುವಂತೆ ಆಂಬುಲೆನ್ಸ್ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಹೆದ್ದಾರಿ ಸುರಕ್ಷತೆ, ವಾಹನಗಳ ವೇಗ ನಿಯಂತ್ರಣ ಹಾಗೂ ಭಾರೀ ವಾಹನಗಳ ಸಂಚಾರದ ಮೇಲೆ ನಿಗಾ ವಹಿಸಬೇಕಾದ ಸಂಬಂಧಪಟ್ಟ ಪ್ರಾಧಿಕಾರ, ಸಾರಿಗೆ ಇಲಾಖೆ ಮತ್ತು ಪೊಲೀಸ್ ಇಲಾಖೆ ಪರಿಣಾಮಕಾರಿ ಕ್ರಮ ಕೈಗೊಳ್ಳದೆ ಮೌನ ವಹಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣ ವಾಗಿದೆ.

ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.