ಮಂಡ್ಯ, ಜ.16: ಆಸ್ತಿಗಾಗಿ ಅಣ್ಣ, ಅಣ್ಣನ ಮಕ್ಕಳು ಸೇರಿ ತಮ್ಮನನ್ನು ಭೀಕರವಾಗಿ ಕೊಲೆ (Murder Case) ಮಾಡಿರುವ ಘಟನೆ ಮಂಡ್ಯ (Mandya news) ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಯೋಗೇಶ್ (35) ಎಂದು ಗುರುತಿಸಲಾಗಿದೆ. ಯೋಗೇಶನ ಅಣ್ಣ ಲಿಂಗರಾಜ, ಅಣ್ಣನ ಮಕ್ಕಳಾದ ಭರತ್, ದರ್ಶನ್ ಸೇರಿಕೊಂಡು ಹತ್ಯೆ ಮಾಡಿದ್ದಾರೆ.
ಬುಧವಾರ ಮೃತ ಯೋಗೇಶ್ ಮದುವೆ ಫಿಕ್ಸ್ ಆಗಿತ್ತು. ಇಂದು ಬೆಳಿಗ್ಗೆ ಮನೆಯ ಕೊಟ್ಟಿಗೆಯಲ್ಲೇ ಹರಿತವಾದ ಆಯುಧಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಆಸ್ತಿಗಾಗಿ ಸಹೋದರರ ನಡುವೆ ಆಗಿಂದಾಗ್ಗೆ ಜಗಳ ನಡೆಯುತ್ತಿತ್ತು. ಇಂದು ಜಗಳ ವಿಕೋಪಕ್ಕೆ ತಿರುಗಿ ಹತ್ಯೆಯಲ್ಲಿ ಅಂತ್ಯವಾಗಿದೆ ಎಂದು ತಿಳಿದುಬಂದಿದೆ. ಕೊಲೆ ಬಳಿಕ ಮೂವರು ಆರೋಪಿಗಳು ಪರಾರಿ ಆಗಿದ್ದಾರೆ. ಕೆರಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಚಿರತೆಗೆ ವಿಷವಿಕ್ಕಿ ಕೊಂದವನ ಬಂಧನ
ಚಾಮರಾಜನಗರ : ದನ ಕರುಗಳನ್ನು ಬೇಟೆಯಾಡುತ್ತಿದ್ದ ಚಿರತೆಗೆ ವಿಷ ಹಾಕಿ ಕೊಲೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಚಾಮರಾಜನಗರ ಅರಣ್ಯಾಧಿಕಾರಿಗಳು ಓರ್ವ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಚಾಮರಾಜನಗರ ತಾಲೂಕಿನ ಆಲೂರು ಹೊಮ್ಮ ಗ್ರಾಮದ ದೊರೆಸ್ವಾಮಿ( 60) ಎಂದು ಗುರುತಿಸಲಾಗಿದೆ.
ಹುಬ್ಬಳ್ಳಿ ಯುವತಿಯ ಮರ್ಯಾದಾ ಹತ್ಯೆ ಕೇಸ್ ವಿಚಾರಣೆಗೆ ತ್ವರಿತಗತಿ ನ್ಯಾಯಾಲಯ ರಚನೆ: ಸಿಎಂ
ಎರಡು ದಿನಗಳ ಹಿಂದೆಯಷ್ಟೇ ಜಮೀನು ಸಮೀಪ ಚಿರತೆಯ ಕಳೇಬರ ಪತ್ತೆಯಾಗಿತ್ತು. 5-6 ವರ್ಷ ವಯಸ್ಸಿನ ಗಂಡು ಚಿರತೆ ಇದಾಗಿದ್ದು, ಇದರ ಸಾವಿಗೆ ವಿಷವೇ ಕಾರಣ ಎಂಬುದು ಮರಣೋತ್ತರ ಪರೀಕ್ಷೆಯಲ್ಲಿ ಬೆಳಕಿಗೆ ಬಂದಿತ್ತು. ಅನುಮಾನದ ಹಿನ್ನೆಲೆಯಲ್ಲಿ ದೊರೆಸ್ವಾಮಿಯನ್ನು ವಿಚಾರಿಸಿದಾಗ ಸತ್ಯಾಂಶ ಹೊರಬಂದಿದೆ. ವಿಚಾರಣೆ ವೇಳೆ ಚಿರತೆ ಬೇಟೆಯಾಡಿದ್ದ ಮಾಂಸಕ್ಕೆ ವಿಷ ಬೆರೆಸಿ ಜಾನುವಾರುಗಳ ಸಾವಿಗೆ ಸೇಡು ತೀರಿಸಿಕೊಂಡಿರುವುದಾಗಿ ದೊರೆಸ್ವಾಮಿ ಬಾಯಿ ಬಿಟ್ಟಿದ್ದಾನೆ. ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.