ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Stabbing: ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ಯುವಕನಿಗೆ ಚೂರಿ ಇರಿತ

ಗಾಯಗೊಂಡ ಹಮೀದ್ ಎಂಬವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಚಾಕುವಿನಿಂದ ಇರಿದು (Stabbing) ಪರಾರಿಯಾಗಿದ್ದು, ಒಂದೇ ಕೋಮಿನ ತಂಡದ ನಡುವೆ ಘರ್ಷಣೆಯಿಂದಾಗಿ ಈ ಕೃತ್ಯ ನಡೆದಿರುವ ಶಂಕೆ ಉಂಟಾಗಿದೆ.

ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ಯುವಕನಿಗೆ ಚೂರಿ ಇರಿತ

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ May 17, 2025 9:09 AM

ಮಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ (Mangaluru news) ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ (Suhas Shetty murder) ಹತ್ಯೆಯಿಂದಾಗಿ ದಕ್ಷಿಣ ಕನ್ನಡದಲ್ಲಿ (Dakshina kannada) ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಇಂದು ಬಂಟ್ವಾಳದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಓರ್ವ ಯುವಕನಿಗೆ ಚೂರಿ‌ ಇರಿದು (Stabbing) ಪರಾರಿಯಾಗಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೇ ಸೇತುವೆ ಬಳಿ ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.

ಗಾಯಗೊಂಡ ಹಮೀದ್ ಎಂಬವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದು, ಒಂದೇ ಕೋಮಿನ ತಂಡದ ನಡುವೆ ಘರ್ಷಣೆಯಿಂದಾಗಿ ಈ ಕೃತ್ಯ ನಡೆದಿರುವ ಶಂಕೆ ಉಂಟಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಪೈಂಟರ್ ಕೆಲಸ ಮಾಡುವ ಹಮೀದ್ ಯಾನೆ ಅಮ್ಮಿಗೆ ಎಂಬಾತ ಗಾಯಗೊಂಡಿದ್ದಾರೆ. ಇರಿತದಿಂದ ಹಮೀದ್ ಕೈ ಭಾಗಕ್ಕೆ ಏಟಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಇರಿತಕ್ಕೆ ವೈಯಕ್ತಿಕ ದ್ವೇಷ ಕಾರಣವೇ, ತಂಡಗಳ ನಡುವಿನ ಘರ್ಷಣೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುನೀತ್‌ ಕೆರೆಹಳ್ಳಿಗೆ ಕೊಲೆ ಬೆದರಿಕೆ; ಮೈಸೂರಿನಲ್ಲಿ ಎಫ್‌ಐಆರ್ ದಾಖಲು

ಮೈಸೂರು: ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ಹಿಂದೂ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿಗೆ (Puneeth Kerehalli) ಕೊಲೆ ಬೆದರಿಕೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಇದಕ್ಕೆ ಸಂಬಂಧಿಸಿ ಮೈಸೂರಿನ ಉದಯಗಿರಿ ನಿವಾಸಿ ಅಕ್ರಮ್ ಖಾನ್ ಎಂಬಾತನ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ 'NEXT YOU WILL KILL' ಎಂದು ಬರೆದು ಜೀವ ಬೆದರಿಕೆ ಹಾಕಿದ್ದ ಆರೋಪಿಯು, ವಾಟ್ಸ್‌ ಆ್ಯಪ್‌ ಕಾಲ್ ಹಾಗೂ ವಿಡಿಯೋ ಕಾಲ್ ಮೂಲಕವೂ ನಿರಂತರವಾಗಿ ಬೆದರಿಕೆ ಒಡ್ಡುತ್ತಿದ್ದ ಎಂದು ಆರೋಪಿಸಲಾಗಿದೆ.

ಜೀವ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಕ್ರಮಕ್ಕಾಗಿ ಕಳೆದೆರಡು ದಿನಗಳ ಹಿಂದೆ ದೂರು ದಾಖಲಿಸಲು ಬಸವನಗುಡಿ ಪೊಲೀಸ್ ಠಾಣೆಗೆ ತೆರಳಿದ್ದೆ. ಆದರೆ, ಠಾಣೆಯಲ್ಲಿ ತಕ್ಷಣ ದೂರು ದಾಖಲಿಸಿಕೊಳ್ಳದೇ, 'ಇನ್ಸ್ಪೆಕ್ಟರ್ ಬರುತ್ತಾರೆ, ಕಾಯಿರಿ' ಎಂದು ಎರಡು ಗಂಟೆಗೂ ಹೆಚ್ಚು ಕಾಯಿಸಿದ್ದಾರೆ ಎಂದು ಪೊಲೀಸರ ಕಾರ್ಯವೈಖರಿಯ ಬಗ್ಗೆ ಪುನೀತ್ ಕೆರೆಹಳ್ಳಿ ಅಸಮಾಧಾನ ವ್ಯಕ್ತಪಡಿಸಿದ್ದರು. 'ಹಿಂದೂಗಳಿಗೊಂದು ಕಾನೂನು, ಮುಸ್ಲಿಮರಿಗೊಂದು ಕಾನೂನು ಇದೆಯಾ? ಪೊಲೀಸರಿಗೆ ಯಾಕಿಷ್ಟು ಭಯ? ಯಾರ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ? ಎಂದು ಪುನೀತ್ ಕೆರೆಹಳ್ಳಿ ಪ್ರಶ್ನಿಸಿದ್ದರು. ಇದೀಗ ನ್ಯಾಯಾಲಯದ ಅನುಮತಿಯೊಂದಿಗೆ ಅಕ್ರಮ್ ಖಾನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Murder Case: ಮೂರು ಮಕ್ಕಳ ತಾಯಿಯ ಲವಿ ಡವಿ, ಪ್ರೇಮಿಯಿಂದಲೇ ಕೊಲೆ