ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಪಾಕ್ ಮಹಿಳೆಯನ್ನು ವಿವಾಹವಾಗಿ ಭಾರತದ ವಿರುದ್ಧ ಬೇಹುಗಾರಿಕೆ; ಕೋಲ್ಕತ್ತಾದಲ್ಲಿ ಆರೋಪಿ ಬಂಧನ

Spy case: ಪಾಕಿಸ್ತಾನ ಗುಪ್ತಚರ ಅಧಿಕಾರಿಗಳಿಗೆ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ ವ್ಯಕ್ತಿಯೊಬ್ಬನನ್ನು ಬಂಧಿಸಿದೆ. ಆರೋಪಿಯನ್ನು ಜಾಫರ್ ರಿಯಾಜ್ ಅಲಿಯಾಸ್ ರಿಜ್ವಿ ಎಂದು ಗುರುತಿಸಲಾಗಿದೆ. ಅಧಿಕಾರಿಗಳು ಆತನ ವಿರುದ್ಧ ಲುಕ್-ಔಟ್ ಸುತ್ತೋಲೆ ಹೊರಡಿಸಿದ ನಂತರಯನ್ನು ಬಂಧಿಸಲಾಯಿತು.

ಸಾಂದರ್ಭಿಕ ಚಿತ್ರ

ಕೋಲ್ಕತ್ತಾ, ಮೇ 21: ಪಾಕಿಸ್ತಾನ ಗುಪ್ತಚರ ಅಧಿಕಾರಿಗಳಿಗೆ (PIO) ಬೇಹುಗಾರಿಕೆ ನಡೆಸುತ್ತಿದ್ದ (spying for Pakistan) ಮತ್ತು ಭಾರತ ವಿರೋಧಿ ಭಯೋತ್ಪಾದನಾ ಪಿತೂರಿಯ ಭಾಗವಾಗಿ ಗೌಪ್ಯ ಭದ್ರತೆಗೆ ಸಂಬಂಧಿಸಿದ ಮಾಹಿತಿಯನ್ನು ರವಾನಿಸುತ್ತಿದ್ದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವ್ಯಕ್ತಿಯೊಬ್ಬನನ್ನು ಬಂಧಿಸಿದೆ. ಆರೋಪಿಯನ್ನು ಜಾಫರ್ ರಿಯಾಜ್ ಅಲಿಯಾಸ್ ರಿಜ್ವಿ ಎಂದು ಗುರುತಿಸಲಾಗಿದೆ. ಅಧಿಕಾರಿಗಳು ಆತನ ವಿರುದ್ಧ ಲುಕ್-ಔಟ್ ಸುತ್ತೋಲೆ ಹೊರಡಿಸಿದ ನಂತರಯನ್ನು ಬಂಧಿಸಲಾಯಿತು.

ರಾಷ್ಟ್ರೀಯ ತನಿಖಾ ಸಂಸ್ಥೆ ಜಾಫರ್ ಎಂಬಾತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ, ಅಧಿಕೃತ ರಹಸ್ಯಗಳ ಕಾಯ್ದೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದೆ ಎಂದು ತಿಳಿಸಿದೆ. ಜಾಫರ್ ಪಾಕಿಸ್ತಾನದ ಪ್ರಜೆಯನ್ನು ವಿವಾಹವಾಗಿದ್ದು, ಆತನ ಮಕ್ಕಳು ಕೂಡ ಪಾಕಿಸ್ತಾನದ ನಾಗರಿಕರಾಗಿದ್ದಾರೆ ಎಂದು ತಿಳಿದುಬಂದಿದೆ.

ಜಾಫರ್ ಈ ಹಿಂದೆ ಕೂಡ ಭಾರತೀಯ ದಂಡ ಸಂಹಿತೆ ಮತ್ತು ಅಧಿಕೃತ ರಹಸ್ಯಗಳ ಕಾಯ್ದೆಯಡಿ ದಾಖಲಾಗಿದ್ದ ಬೇಹುಗಾರಿಕೆ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿದ್ದ ಎಂದು ತನಿಖಾಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಅಲ್ಲದೆ, ಆತ 2005 ರಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ಪದೇ ಪದೇ ಪ್ರಯಾಣಿಸುತ್ತಿದ್ದ ಎಂದು ಎನ್‌ಐಎ ತಿಳಿಸಿದೆ.

ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದ ವಾಯುಪಡೆಯ ಸಿಬ್ಬಂದಿ ಅರೆಸ್ಟ್‌

ಪಾಕಿಸ್ತಾನಕ್ಕೆ ಆತ ಭೇಟಿ ನೀಡಿದ್ದಾಗ, ಪಾಕಿಸ್ತಾನದ ಗುಪ್ತಚರ ಅಧಿಕಾರಿಗಳು ಆರ್ಥಿಕ ಪ್ರೋತ್ಸಾಹ ಮತ್ತು ಪಾಕಿಸ್ತಾನಿ ಪೌರತ್ವ ನೀಡುವುದಾಗಿ ಭರವಸೆ ನೀಡಿದ್ದರು. ಇದಕ್ಕಾಗಿ ಅವರು ಭಾರತದಲ್ಲಿ ಬೇಹುಗಾರಿಕೆ ಚಟುವಟಿಕೆಗಳನ್ನು ನಡೆಸುವಂತೆ ಪ್ರೇರೇಪಿಸಿದರು ಎಂದು ಆರೋಪಿಸಲಾಗಿದೆ.

ಜಾಫರ್ ಭಾರತೀಯ ಟೆಲಿಕಾಂ ಮೊಬೈಲ್ ಸಂಖ್ಯೆಗಳಿಗೆ ಬಂದ ಒನ್-ಟೈಮ್ ಪಾಸ್‌ವರ್ಡ್‌ಗಳನ್ನು (OTP) ಪಾಕಿಸ್ತಾನಿ ಗುಪ್ತಚರ ಅಧಿಕಾರಿಗೆ ವಾಟ್ಸಾಪ್ ಖಾತೆಗಳನ್ನು ಸಕ್ರಿಯಗೊಳಿಸಲು ನೀಡಿದ್ದ. ಈ ಪ್ರಕರಣದ ಮತ್ತೊಬ್ಬ ಆರೋಪಿಯಾದ ಮೋತಿರಾಮ್ ಜಾತ್ ಜೊತೆ ರಹಸ್ಯವಾಗಿ ಸಂವಹನ ನಡೆಸಲು ಈ ವಾಟ್ಸಾಪ್ ಖಾತೆಗಳನ್ನು ಬಳಸಿಕೊಂಡಿದ್ದ ಎಂದು ಎನ್ಐಎ ತಿಳಿಸಿದೆ.

ಬೇಹಗಾರಿಕೆ ಜಾಲದೊಂದಿಗೆ ಸಂಪರ್ಕ ಹೊಂದಿರುವ ಇತರ ವ್ಯಕ್ತಿಗಳನ್ನು ಗುರುತಿಸಲು ಹಾಗೂ ಈ ಕಾರ್ಯಾಚರಣೆಯ ಹಿಂದಿರುವ ದೊಡ್ಡ ಪಿತೂರಿಯನ್ನು ಬಯಲಿಗೆಳೆಯಲು ಈ ಪ್ರಕರಣದ ತನಿಖೆಯನ್ನು ಮುಂದುವರಿಸುತ್ತಿರುವುದಾಗಿ ಎನ್ಐಎ ತಿಳಿಸಿದೆ.

ಅಸ್ಸಾಂನಲ್ಲಿ ನಿವೃತ್ತ ವಾಯುಪಡೆ ಅಧಿಕಾರಿಯ ಬಂಧನ

ಪಾಕಿಸ್ತಾನಕ್ಕೆ ಗೂಢಚಾರಿಕೆ ಮಾಡಿರುವ ಆರೋಪದ ಮೇಲೆ ಭಾರತೀಯ ವಾಯುಸೇನಾ ನಿವೃತ್ತ ಅಧಿಕಾರಿಯನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದರು. ಆರೋಪಿಯನ್ನು ತೆಜ್ಪುರದ ಪಾಟಿಯಾ ಪ್ರದೇಶದ ನಿವಾಸಿ ಕುಲೆಂದ್ರ ಶರ್ಮಾ ಎಂದು ಗುರುತಿಸಲಾಗಿದೆ. ಶರ್ಮಾನ ಚಲನವಲನಗಳನ್ನು ನಿರಂತರವಾಗಿ ಪೊಲೀಸರು ಗಮನಿಸುತ್ತಿದ್ದರು. ಪ್ರಾಥಮಿಕ ತನಿಖೆಯ ನಂತರ ಆತನನ್ನು ಬಂಧಿಸಲಾಗಿತ್ತು.