ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Physical Abuse: ಬೆಂಗಳೂರಿನಲ್ಲಿ ಮತ್ತೆ ಕಾಮುಕರ ಅಟ್ಟಹಾಸ, ಅಣ್ಣನಿಗೆ ಹಲ್ಲೆ ಮಾಡಿ ಯುವತಿಯ ಸಾಮೂಹಿಕ ಅತ್ಯಾಚಾರ

ಬಿಹಾರ ಮೂಲದ ಯುವತಿ ಕೇರಳದ ಎರ್ನಾಕುಲಂನಿಂದ ಬೆಂಗಳೂರಿನ ಕೆ.ಆರ್.ಪುರಂ ರೈಲ್ವೆ ನಿಲ್ದಾಣಕ್ಕೆ ಬಂದಿದ್ದಳು. ಅಲ್ಲಿಂದ ಬೈಕ್‌ನಲ್ಲಿ ಮಹದೇವಪುರ ಕಡೆಗೆ ತನ್ನ ಅಣ್ಣನೊಂದಿಗೆ ತೆರಳುತ್ತಿದ್ದಾಗ ಇಬ್ಬರು ಅಪರಿಚಿತರು ಬೈಕ್​​ ಅಡ್ಡಗಟ್ಟಿ ಯುವತಿಯ ಅಣ್ಣನ ಮೇಲೆ ಹಲ್ಲೆ ನಡೆಸಿ, ಯುವತಿಯನ್ನು ಅಪಹರಿಸಿದ್ದಾರೆ.

ಅಣ್ಣನಿಗೆ ಹಲ್ಲೆ ಮಾಡಿ ಯುವತಿಯ ಸಾಮೂಹಿಕ ಅತ್ಯಾಚಾರ

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Apr 3, 2025 9:55 AM

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ (Bengaluru news) ಅದರಲ್ಲೂ ರಾಜಧಾನಿಯ ಜನನಿಬಿಡ ಪ್ರದೇಶವಾದ ಕೆಆರ್‌ಪುರಂ ರೈಲ್ವೆ ನಿಲ್ದಾಣದ ಬಳಿಯೇ ಮತ್ತೊಂದು ಸಾಮೂಹಿಕ ಅತ್ಯಾಚಾರ (Bengaluru Crime news) ನಡೆದಿದೆ. ಬುಧವಾರ ಮಧ್ಯರಾತ್ರಿ ಕೆಆರ್​ ಪುರಂ ರೈಲ್ವೆ ಸ್ಟೇಷನ್​ನಿಂದ ಅಣ್ಣನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಬಿಹಾರದ ಯುವತಿಯನ್ನು ಅಪಹರಿಸಿದ (girl kidnap) ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ (Physical abuse) ಎಸಗಿದ್ದಾರೆ. ಯುವತಿಯ ಅಣ್ಣನ ಮೇಲೂ ಹಲ್ಲೆ (Assault case) ನಡೆದಿದೆ. ಘಟನೆ ಸಂಬಂಧ ಮಾದೇವಪುರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಬಿಹಾರ ಮೂಲದ ಯುವತಿ ಕೇರಳದ ಎರ್ನಾಕುಲಂನಿಂದ ಬೆಂಗಳೂರಿನ ಕೆ.ಆರ್.ಪುರಂ ರೈಲ್ವೆ ನಿಲ್ದಾಣಕ್ಕೆ ಬಂದಿದ್ದಳು. ಇದಕ್ಕೂ ಮುನ್ನ, ತನ್ನ ದೊಡ್ಡಮ್ಮನ ಮಗನಿಗೆ ಕರೆ ಮಾಡಿ, ಬೆಂಗಳೂರಿಗೆ ಬರುತ್ತಿದ್ದೇನೆ ಎಂದು ಮಾಹಿತಿ ನೀಡಿದ್ದಳು. ಅಣ್ಣನ ಸೂಚನೆಯಂತೆ ಕೆ.ಆರ್.ಪುರಂ ರೈಲ್ವೆ ನಿಲ್ದಾಣದಲ್ಲಿ ಇಳಿದಿದ್ದಳು. ಬಳಿಕ, ಊಟಕ್ಕಾಗಿ ಮಹದೇವಪುರ ಕಡೆಗೆ ತನ್ನ ಅಣ್ಣನೊಂದಿಗೆ ತೆರಳುತ್ತಿದ್ದಾಗ ಇಬ್ಬರು ಅಪರಿಚಿತರು ಬೈಕ್​​ ಅಡ್ಡಗಟ್ಟಿದ್ದಾರೆ. ಅಪರಿಚಿತರು ಯುವತಿಯ ಅಣ್ಣನ ಮೇಲೆ ಹಲ್ಲೆ ನಡೆಸಿ, ಯುವತಿಯನ್ನು ಅಪಹರಿಸಿದ್ದಾರೆ. ನಂತರ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ.

ದುಷ್ಕೃತ್ಯದ ವೇಳೆ ಯುವತಿಯ ಕಿರುಚಾಟ ಕೇಳಿದ ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿದ್ದು, ಒಬ್ಬ ಆರೋಪಿಯನ್ನು ಹಿಡಿದು ಪೋಲೀಸರಿಗೆ ಒಪ್ಪಿಸಿದ್ದಾರೆ. ಘಟನೆಯ ಸಂಬಂಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆಶಿಫ್ ಎಂಬಾತ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಈ ಘಟನೆಯು ಬೆಂಗಳೂರು ನಗರದಲ್ಲಿ ಮಹಿಳಾ ಸುರಕ್ಷತೆಯ ಬಗ್ಗೆ ಮತ್ತೆ ಚರ್ಚೆ ಹುಟ್ಟುಹಾಕುವಂತೆ ಮಾಡಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.