ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

Udayagiri Violence: ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ : ಮೌಲ್ವಿ ಮುಸ್ತಾಕ್ ಬಂಧನ

ಮೈಸೂರಿನಲ್ಲಿ ಕಳೆದ 11 ದಿನಗಳ ಹಿಂದೆ ಉದಯಗಿರಿ ಠಾಣೆಯ ಮೇಲೆ ಉದ್ರಿಕ್ತರ ಗುಂಪೊಂದು ಕಲ್ಲುತೂರಾಟ ನಡೆಸಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದರು. ಗಲಾಟೆ ನಡೆದು 11 ದಿನಗಳ ಬಳಿಕ ಆರೋಪಿ ಮೌಲ್ವಿ ಮುಸ್ತಾಕ್‌ನನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ : ಮೌಲ್ವಿ ಮುಸ್ತಾಕ್ ಬಂಧನ

ಮೌಲ್ವಿ ಮುಸ್ತಾಕ್

ಹರೀಶ್‌ ಕೇರ ಹರೀಶ್‌ ಕೇರ Feb 20, 2025 11:50 AM

ಮೈಸೂರು : ಕಳೆದ ಕೆಲವು ದಿನಗಳ ಹಿಂದೆ ಮೈಸೂರಿನ (Mysuru violnce) ಉದಯಗಿರಿ ಪೊಲೀಸ್ ಠಾಣೆಯ (Udayagiri violence) ಮೇಲೆ ಸಾವಿರಾರು ಮಂದಿ ಸೇರಿ ಕಲ್ಲುತೂರಾಟ (Stone pelting) ನಡೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಚೋದನಾಕಾರಿ ಭಾಷಣ ಮಾಡಿ ಪರಾರಿಯಾಗಿದ್ದ ಮುಸ್ಲಿಂ ಮುಖಂಡ ಮುಸ್ತಾಕ್‌ನನ್ನು ಕೊನೆಗೂ ಸಿಸಿಬಿ ಪೊಲೀಸರು (CCB police) ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈತ ಪ್ರಕರಣದ ಬಳಿಕ ತಲೆ ಮರೆಸಿಕೊಂಡಿದ್ದ.

ಮೈಸೂರಿನಲ್ಲಿ ಕಳೆದ 11 ದಿನಗಳ ಹಿಂದೆ ಉದಯಗಿರಿ ಠಾಣೆಯ ಮೇಲೆ ಉದ್ರಿಕ್ತರ ಗುಂಪೊಂದು ಕಲ್ಲುತೂರಾಟ ನಡೆಸಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದರು. ಗಲಾಟೆ ನಡೆದು 11 ದಿನಗಳ ಬಳಿಕ ಆರೋಪಿ ಮೌಲ್ವಿ ಮುಸ್ತಾಕ್‌ನನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮುಸ್ತಾಕ್‌ನನ್ನು ಬಂಧಿಸದ ಹಿನ್ನೆಲೆಯಲ್ಲಿ ಸಾರ್ವಜನಿಕರ ಆಕ್ರೋಶ ಹೆಚ್ಚಾಗಿತ್ತು.

ಇದೀಗ ಕೊನೆಗೂ ಮೌಲ್ವಿ ಮುಸ್ತಾಕ್‌ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮುಂಜಾಗ್ರತ ಕ್ರಮವಾಗಿ ಉದಯಗಿರಿ ಠಾಣೆ ಬಳಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಆರೋಪಿ ಮುಸ್ತಾಕ್‌ನನ್ನು ಬಂಧಿಸಿ ಇದೀಗ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಈ ನಡುವೆ, ಉದ್ರಿಕ್ತ ಪರಿಸ್ಥಿತಿಗೆ ಕಾರಣವಾದ ಮೀಮ್‌ ಅನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ಆರೋಪಿ ಸತೀಶ್‌ನನ್ನು ಬಂಧಿಸಲಾಗಿತ್ತು. ಆತನಿಗೆ ಮೈಸೂರು ಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ. 2ನೇ ಅಪರ ಸಿವಿಲ್ ನ್ಯಾಯಾಧೀಶರಾದ ಸರೋಜಾ ಅವರು ಆದೇಶ ಪ್ರಕಟಿಸಿದ್ದಾರೆ. ಆರೋಪಿ ಸತೀಶ್ ಪರ ವಕೀಲ ಹ.ಮಾ ಭಾಸ್ಕರ್ ವಾದ ಮಂಡಿಸಿದ್ದರು.

ಇದೇ ಫೆಬ್ರವರಿ 10ರಂದು ಅವಹೇಳನಕಾರಿ ಪೋಸ್ಟ್ ವಿಚಾರಕ್ಕೆ ಪ್ರಚೋದಿತಗೊಂಡ ಮುಸ್ಲಿಂ ಯುವಕರ ಗುಂಪು ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿತ್ತು. ದಾಳಿಯಲ್ಲಿ ಇನ್‌ಸ್ಪೆಕ್ಟರ್ ಸೇರಿದಂತೆ 14 ಪೊಲೀಸರಿಗೆ ಗಾಯಗಳಾಗಿತ್ತು. 10ಕ್ಕೂ ಹೆಚ್ಚು ಪೊಲೀಸ್ ವಾಹನಗಳು ಜಖಂ ಆಗಿದ್ದವು. ತನಿಖೆ ಆರಂಭಿಸಿದ್ದ ಪೊಲೀಸರು 1000ಕ್ಕೂ ಹೆಚ್ಚು ಮಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು.

ಇದನ್ನೂ ಓದಿ: Police station attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ಕೇಸ್; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು