ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Self Harming: ಪರೀಕ್ಷೆಯ ಭಯದಿಂದ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಯಶವಂತಪುರದ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ದಂತ ವೈದ್ಯಕೀಯ ಕೋರ್ಸ್ ಓದುತ್ತಿದ್ದ ಸೌಮ್ಯ, ತಮ್ಮ ತಂದೆ, ತಾಯಿ ಮತ್ತು ಸಹೋದರನ ಜತೆ ವಾಸವಾಗಿದ್ದರು. ಸೌಮ್ಯ ತಂದೆ ಗಣೇಶ್ ನಾರಾಯಣ್​ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದಾರೆ. ಮೂಲತಃ ಆಂಧ್ರದವರಾಗಿದ್ದು, ಮಗಳನ್ನು ಓದಿಸುವ ಉದ್ದೇಶಕ್ಕೆ ಕುಟುಂಬ ಸಮೇತ ಬೆಂಗಳೂರಿಗೆ ಬಂದು ನೆಲೆಸಿದ್ದರು.

ಪರೀಕ್ಷೆಯ ಭಯದಿಂದ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಮೃತ ವಿದ್ಯಾರ್ಥಿನಿ ಸೌಮ್ಯ

ಹರೀಶ್‌ ಕೇರ ಹರೀಶ್‌ ಕೇರ Apr 15, 2025 8:48 AM

ಬೆಂಗಳೂರು: ಪರೀಕ್ಷೆಯ (Exam) ಭಯದಿಂದ 21 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು (Medical Student) ಅಪಾರ್ಟ್‌ಮೆಂಟ್​​ನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ (Self harming) ಮಾಡಿಕೊಂಡಿರುವ ದಾರುಣ ಘಟನೆ ಬೆಂಗಳೂರಿನಲ್ಲಿ (Bengaluru crime news) ಭಾನುವಾರ ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಸೌಮ್ಯ ಎಂದು ಗುರುತಿಸಲಾಗಿದೆ. ಮೃತ ಸೌಮ್ಯ ಪರೀಕ್ಷಾ ಸಮಯದಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ. ಆತ್ಮಹತ್ಯೆಗೂ ಮುನ್ನ ಯಾವುದೇ ಡೆತ್​ ನೋಟ್​ ಬರೆದಿಟ್ಟಿಲ್ಲ.

ಈ ಸಂಬಂಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಶವಂತಪುರದ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ದಂತ ವೈದ್ಯಕೀಯ ಕೋರ್ಸ್ ಓದುತ್ತಿದ್ದ ಸೌಮ್ಯ, ತಮ್ಮ ತಂದೆ, ತಾಯಿ ಮತ್ತು ಸಹೋದರನ ಜತೆ ವಾಸವಾಗಿದ್ದರು. ಸೌಮ್ಯ ತಂದೆ ಗಣೇಶ್ ನಾರಾಯಣ್​ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದಾರೆ. ಮೂಲತಃ ಆಂಧ್ರದವರಾಗಿದ್ದು, ಮಗಳನ್ನು ಓದಿಸುವ ಉದ್ದೇಶಕ್ಕೆ ಕುಟುಂಬ ಸಮೇತ ಬೆಂಗಳೂರಿಗೆ ಬಂದು ನೆಲೆಸಿದ್ದರು.

ಅಶ್ಲೀಲ ಫೋಟೋ ಸೃಷ್ಟಿಸಿ ಸಾಫ್ಟ್‌ವೇರ್‌ ಇಂಜಿನಿಯರ್‌ಗೆ ಸೈಬರ್‌ ಕಿರುಕುಳ

ಬೆಂಗಳೂರು: ಮಹಿಳಾ ಸಾಫ್ಟ್‌ವೇರ್‌ ಇಂಜಿನಿಯರ್‌ ಒಬ್ಬರ ಇ-ಮೇಲ್‌ ಹ್ಯಾಕ್‌ ಮಾಡಿರುವ ಸೈಬರ್‌ ದುಷ್ಕರ್ಮಿಗಳು ಅವರ ವೈಯಕ್ತಿಕ ಫೋಟೋ ಮಾರ್ಫ್‌ ಮಾಡಿ ಬ್ಲ್ಯಾಕ್‌ಮೇಲ್‌ ಮಾಡಿದ್ದು, 2.50 ಲಕ್ಷ ರು. ಹಣಕ್ಕೆ ಬೇಡಿಕೆ ಇರಿಸಿದ್ದಾರೆ. ವೈಟ್‌ಫೀಲ್ಡ್‌ ವಿಭಾಗದ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ವೈಟ್‌ಫೀಲ್ಡ್‌ನ ಪಿ.ಜಿ. ನಿವಾಸಿಯಾಗಿರುವ 29 ವರ್ಷದ ಮಹಿಳಾ ಟೆಕಿಗೆ ದುಷ್ಕರ್ಮಿಗಳು ಬ್ಲ್ಯಾಕ್‌ ಮೇಲ್‌ ಮಾಡಿದ್ದಾರೆ.

ಈ ಸಂಬಂಧ ನೀಡಲಾದ ದೂರಿನ ಮೇರೆಗೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿ ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚೆಗೆ ದೂರುದಾರೆಯ ಇ-ಮೇಲ್‌ ಹ್ಯಾಕ್‌ ಮಾಡಿರುವ ದುಷ್ಕರ್ಮಿಗಳು, ಗೂಗಲ್‌ ಲಿಂಕ್‌ ಬಳಸಿಕೊಂಡು ದೂರುದಾರೆಯ ವೈಯಕ್ತಿಕ ಫೋಟೋಗಳನ್ನು ತೆಗೆದುಕೊಂಡು ಅಶ್ಲೀಲವಾಗಿ ಮಾರ್ಫ್‌ ಮಾಡಿ ವಿಡಿಯೋ ಸೃಷ್ಟಿಸಿದ್ದಾರೆ.

ಬಳಿಕ ಆ ವಿಡಿಯೋ ಹಾಗೂ ಫೋಟೊಗಳನ್ನು ದೂರುದಾರೆಯ ಅಕ್ಕನ ಗಂಡನಿಗೆ ಕಳುಹಿಸಿದ್ದಾರೆ. 2.50 ಲಕ್ಷ ರು. ಹಣಕ್ಕೆ ಬೇಡಿಕೆ ಇರಿಸಿದ್ದಾರೆ. ಒಂದು ವೇಳೆ ಹಣ ಕೊಡದಿದ್ದಲ್ಲಿ ಈ ವಿಡಿಯೋ ಹಾಗೂ ಫೋಟೋಗಳನ್ನು ಪೋರ್ನ್‌ ವೆಬ್‌ಸೈಟ್‌ಗೆ ಅಪ್ಲೌಡ್‌ ಮಾಡುವುದಾಗಿ ಸಂದೇಶ ಕಳುಹಿಸಿ ದೂರುದಾರೆಯನ್ನು ಬ್ಲ್ಯಾಕ್‌ ಮೇಲ್‌ ಮಾಡಿದ್ದಾರೆ. ಈ ಸಂಬಂಧ ನೀಡಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Basangouda Patil Yatnal: ಯತ್ನಾಳ್‌ ಇದ್ದ ವೇದಿಕೆ ಮೇಲೆ ಮಚ್ಚು ಹಿಡಿದು ಹೋಗಿದ್ದ ವ್ಯಕ್ತಿ ಬಂಧನ