ತಿರುವನಂತಪುರಂ, ಸೆ.3: ಅಪ್ರಾಪ್ತ ಬಾಲಕನ ಮೇಲೆ ನಡೆದ ಲೈಂಗಿಕ ದೌರ್ಜನ್ಯ (Minor Boy Physical Assaulted) ಪ್ರಕರಣದಲ್ಲಿ ಮದರಸಾ ಶಿಕ್ಷಕನೊಬ್ಬನನ್ನು ಬಂಧಿಸಲಾಗಿದೆ. ಕೇರಳಂನ (Keralam) ಕಣ್ಣೂರಿನಲ್ಲಿ ಘಟನೆ ನಡೆದಿದೆ. ಬಾಲಕನ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ ಆರು ವರ್ಷಗಳ ನಂತರ ಕೌನ್ಸಲಿಂಗ್ ಸಮಯದಲ್ಲಿ ಬಹಿರಂಗಗೊಂಡ ನಂತರ ಬೆಳಕಿಗೆ ಬಂದಿದೆ.
ಮಲಪ್ಪುರಂನ ತವನೂರು ಮೂಲದ 45 ವರ್ಷದ ಮೊಹಮ್ಮದ್ ಬಶೀರ್ ಎಂಬ ಆರೋಪಿಯನ್ನು ಚೋಕ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕಣ್ಣೂರು ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಬಾಲಕನ ಮೇಲೆ ದೌರ್ಜನ್ಯ ನಡೆದಾಗ ಸಂತ್ರಸ್ತನಿಗೆ 11 ವರ್ಷ ವಯಸ್ಸಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಬಶೀರ್ ಆಗ ಪಾನೂರು ಬಳಿಯ ಪುಲ್ಲುಕ್ಕರದಲ್ಲಿರುವ ಮದರಸಾದಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ಈ ದೌರ್ಜನ್ಯ 2017 ಮತ್ತು 2020ರ ನಡುವೆ ನಡೆದಿತ್ತು ಎನ್ನಲಾಗಿದೆ.
ಪ್ರಸ್ತುತ ಜಿಮ್ ತರಬೇತುದಾರ ಕೋರ್ಸ್ ಕಲಿಯುತ್ತಿರುವ ಸಂತ್ರಸ್ತನು, ಮಾನಸಿಕ ಆರೋಗ್ಯದ ಸಮಸ್ಯೆಗಳಿಗಾಗಿ ಕೌನ್ಸೆಲಿಂಗ್‌ಗೆ ಒಳಗಾದ ನಂತರ ಈ ಪ್ರಕರಣವು ಇತ್ತೀಚೆಗೆ ಬೆಳಕಿಗೆ ಬಂದಿದೆ. ಕೌನ್ಸೆಲಿಂಗ್ ಅವಧಿಗಳ ನಡುವೆ, ಅವನು ಬಾಲ್ಯದಲ್ಲಿ ತಾನು ಅನುಭವಿಸಿದ್ದ ಲೈಂಗಿಕ ದೌರ್ಜನ್ಯದ ವಿಷಯವನ್ನು ಮುಕ್ತವಾಗಿ ಹಂಚಿಕೊಂಡಿದ್ದಾನೆ.
ಆರೋಪಿ ಬಶೀರ್ ಸುಮಾರು ನಾಲ್ಕು ವರ್ಷಗಳ ಹಿಂದೆ ಮಲಪ್ಪುರಂಗೆ ತೆರಳುವ ಮೊದಲು ಪುಲ್ಲುಕ್ಕರದಲ್ಲಿ ಸುಮಾರು ಎಂಟು ವರ್ಷಗಳ ಕಾಲ ಮದರಸಾ ಶಿಕ್ಷಕನಾಗಿ ಕೆಲಸ ಮಾಡಿದ್ದ. ಈ ವೇಳೆ ಈಗ 20 ವರ್ಷ ವಯಸ್ಸಾಗಿರುವ ಸಂತ್ರಸ್ತನ ಮೇಲೆ ದೌರ್ಜನ್ಯ ಎಸಗಿದ್ದ. ಆಗ ಬಾಲಕನಿಗೆ 11 ವರ್ಷ ವಯಸ್ಸಾಗಿತ್ತು.
ಪ್ರಕರಣ ಸಂಬಂಧ ತಲಶ್ಯೇರಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ನಿರ್ದೇಶನದ ಮೇರೆಗೆ, ತಿರೂರು ಪೊಲೀಸರು ಬಶೀರ್‌ನನ್ನು ವಶಕ್ಕೆ ಪಡೆದು ಚೋಕ್ಲಿ ಪೊಲೀಸರಿಗೆ ಹಸ್ತಾಂತರಿಸಿದರು. ನಂತರ ಆತನನ್ನು ತಲಶ್ಶೇರಿ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ-1 ರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಆತನನ್ನು ಕಣ್ಣೂರು ಕೇಂದ್ರ ಕಾರಾಗೃಹಕ್ಕೆ ಕಳುಹಿಸಿದೆ.
ಕೋಚಿಂಗ್ ಸೆಂಟರ್‌ನಲ್ಲಿ ಬಾಲಕಿಯರ ಮೇಲೆ ಶಿಕ್ಷಕನಿಂದಲೇ ಲೈಂಗಿಕ ದೌರ್ಜನ್ಯ!
ಕೋಚಿಂಗ್ ಸೆಂಟರ್‌ವೊಂದರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಶಿಕ್ಷಕನೇ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿ ನಡೆದಿದೆ. ಶಿಕ್ಷಕನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಬಾಲಕಿಯ ಪೋಷಕರು, ಕೋಚಿಂಗ್ ಸೆಂಟರ್ ಎದುರು ಪ್ರತಿಭಟನೆ ನಡೆಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಗೋಕಾಕ್ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಈ ವೇಳೆ ಸಂತ್ರಸ್ತ ಬಾಲಕಿಯರ ಪೋಷಕರು ಆರೋಪಿ ಶಿಕ್ಷಕನ ಬಂಧಿಸಿ ತಮಗೆ ನ್ಯಾಯ ಕೊಡಿಸುವಂತೆ ಕಣ್ಣೀರಿಟ್ಟಿದ್ದಾರೆ. ತಕ್ಷಣ ಪೊಲೀಸರು ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದು, ವಿಚಾರಣೆ ಆರಂಭಿಸಿದ್ದಾರೆ. ಗೋಕಾಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.