MLA Abhay Patil Car Accident: ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಕಾರು ಭೀಕರ ಅಪಘಾತ
ದೆಹಲಿಯ ಐ.ಪಿ ಎಸ್ಟೇಟ್ ರಸ್ತೆಯಲ್ಲಿ ಭಾನುವಾರ ರಾತ್ರಿ 9:30 ಕ್ಕೆ ಇನ್ನೋವಾ ಹಾಗೂ ಸ್ವಿಪ್ಟ್ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಘಟನೆ ವೇಳೆ ಇನ್ನೋವಾ ಕಾರಿನಲ್ಲಿದ್ದ ಕಿರಾರಿ ವಿಧಾನ ಸಭಾ ಕ್ಷೇತ್ರದ ಹಾಲಿ ಶಾಸಕ ಅನಿಲ್ ಝಾ ಮತ್ತು ಕರ್ನಾಟಕದ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಇದ್ದರು.
-
ನವದೆಹಲಿ: ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್(MLA Abhay Patil) ಸಂಚರಿಸುತ್ತಿದ್ದ ಕಾರು ಭೀಕರ ಅಪಘಾತವಾದ ಘಟನೆ ದೆಹಲಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.
ದೆಹಲಿಯ ಐ.ಪಿ ಎಸ್ಟೇಟ್ ರಸ್ತೆಯಲ್ಲಿ ಭಾನುವಾರ ರಾತ್ರಿ 9:30 ಕ್ಕೆ ಇನ್ನೋವಾ ಹಾಗೂ ಸ್ವಿಪ್ಟ್ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಘಟನೆ ವೇಳೆ ಇನ್ನೋವಾ ಕಾರಿನಲ್ಲಿದ್ದ ಕಿರಾರಿ ವಿಧಾನ ಸಭಾ ಕ್ಷೇತ್ರದ ಹಾಲಿ ಶಾಸಕ ಅನಿಲ್ ಝಾ ಮತ್ತು ಕರ್ನಾಟಕದ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಇದ್ದರು.
ಇದನ್ನೂ ಓದಿ: Dharwad Accident: ಧಾರವಾಡದಲ್ಲಿ ದಾರುಣ ಘಟನೆ; ಶಾಲಾ ಬಸ್ ಹರಿದು 2 ವರ್ಷದ ಮಗು ಸಾವು
ಸ್ವಿಫ್ಟ್ ಕಾರು ಲಕ್ಷ್ಮಿ ನಗರದಿಂದ ಐಟಿಒ ಕಡೆಗೆ ತನ್ನ ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ಪ್ರಯಾಣಿಸುತ್ತಿದ್ದ 32 ವರ್ಷದ ಅಶುತೋಷ್ ಪಾಂಡೆ ಚಾಲನೆ ಮಾಡುತ್ತಿದ್ದರು. ಪಿಡಬ್ಲ್ಯೂಡಿ ಕಚೇರಿ ಬಳಿ, ಸ್ವಿಫ್ಟ್ ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದು, ರೇಲಿಂಗ್ ದಾಟಿದ ನಂತರ, ಐಟಿಒದಿಂದ ಲಕ್ಷ್ಮಿ ನಗರ ಕಡೆಗೆ ಬರುತ್ತಿದ್ದ ಇನ್ನೋವಾಗೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಎಲ್‌ಎನ್‌ಜೆಪಿ ಆಸ್ಪತ್ರೆಗೆ ಸ್ಥಳಾಂತರಿಸ ಲಾಗಿದೆ. ಎಲ್ಲರ ಸ್ಥಿತಿ ಸ್ಥಿರವಾಗಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಸುಗಮ ಸಂಚಾರಕ್ಕೆ ಸಹಕಾರ ಮಾಡಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.