ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Afzalpur News: ಶಾಸಕ ಎಂ.ವೈ.ಪಾಟೀಲರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಮಾನ: ಇಬ್ಬರ ವಿರುದ್ಧ ಎಫ್‌ಐಆರ್

ಶಾಸಕರಿಗೆ ಉದ್ದೇಶಪೂರ್ವಕವಾಗಿ ಅವಮಾನವಾಗುವ ರೀತಿಯಲ್ಲಿ sandipAfz007 ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಅಲ್ಲದೆ, ganeshjalde07 ಎಂಬ ಇನ್‌ಸ್ಟಾಗ್ರಾಮ್ ಖಾತೆ ಯಿಂದ ಶಾಸಕರನ್ನು ಉದ್ದೇಶಿಸಿ ಕೀಳುಮಟ್ಟದ ಹಾಗೂ ಅಶ್ಲೀಲ ಭಾಷೆಯಲ್ಲಿ ಕಾಮೆಂಟ್ ಮಾಡಲಾಗಿದೆ ಎನ್ನಲಾಗಿದೆ.

ಅಫಜಲಪುರ: ಸಾಮಾಜಿಕ ಜಾಲತಾಣದಲ್ಲಿ ಶಾಸಕ ಎಂ.ವೈ. ಪಾಟೀಲ(MLA M Y Patil)ರ ವಿರುದ್ಧ ಅವಹೇಳನಕಾರಿ ವಿಡಿಯೋ ಹಾಗೂ ಅಶ್ಲೀಲ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಇಬ್ಬರು ಇನ್‌ಸ್ಟಾಗ್ರಾಮ್ ಖಾತೆದಾರರ ವಿರುದ್ಧ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರಜಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬಿಸಿಊಟ ಸೇವಿಸಿದ ಬಳಿಕ ವಿದ್ಯಾರ್ಥಿ ಗಳು ಅಸ್ವಸ್ಥಗೊಂಡಿದ್ದ ಘಟನೆ ಹಿನ್ನೆಲೆಯಲ್ಲಿ ಅಫಜಲಪುರ ಸಾರ್ವಜನಿಕ ಆಸ್ಪತ್ರೆಯ ಎದುರು ಪೋಷಕರು ಧರಣಿ ನಡೆಸುತ್ತಿದ್ದರು. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ಎಂ.ವೈ. ಪಾಟೀಲರು, ಘಟನೆಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು.

ಇದನ್ನೂ ಓದಿ: Kalaburagi News: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ: ಬಿಜೆಪಿ ಶಾಸಕರು, ಮುಖಂಡರ ಬಂಧನ

ಈ ಸಂದರ್ಭವನ್ನು ವಿಡಿಯೋ ಮಾಡಿ, ಶಾಸಕರಿಗೆ ಉದ್ದೇಶಪೂರ್ವಕವಾಗಿ ಅವಮಾನವಾಗುವ ರೀತಿಯಲ್ಲಿ sandipAfz007 ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಅಲ್ಲದೆ, ganeshjalde07 ಎಂಬ ಇನ್‌ಸ್ಟಾಗ್ರಾಮ್ ಖಾತೆ ಯಿಂದ ಶಾಸಕರನ್ನು ಉದ್ದೇಶಿಸಿ ಕೀಳುಮಟ್ಟದ ಹಾಗೂ ಅಶ್ಲೀಲ ಭಾಷೆಯಲ್ಲಿ ಕಾಮೆಂಟ್ ಮಾಡಲಾಗಿದೆ ಎನ್ನಲಾಗಿದೆ.

ಈ ಕುರಿತು ಅಫಜಲಪುರ ಪಟ್ಟಣದ ರಾಜೀವ್ ಗಾಂಧಿ ನಗರದ ನಿವಾಸಿ ಹಾಗೂ ರೈತ ಚಂದ್ರಕಾಂತ ಕಲ್ಲಪ್ಪ ಇಬ್ರಾಹಿಂಪುರ ಅವರು ಅಫಜಲಪುರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ದೂರಿನ ಆಧಾರದ ಮೇಲೆ, ಜೆಎಂಎಫ್‌ಸಿ ನ್ಯಾಯಾಲಯದ ಅನುಮತಿ ಪಡೆದು ಪೊಲೀಸರು sandipAfz007 ಹಾಗೂ ganeshjalde07 ಎಂಬ ಇನ್‌ಸ್ಟಾಗ್ರಾಮ್ ಖಾತೆದಾರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.