ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Jacqueline Fernandez: ಹಣ ವರ್ಗಾವಣೆ ಪ್ರಕರಣ- ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜಾಕ್ವೆಲಿನ್ ಫರ್ನಾಂಡಿಸ್

Money laundering case: ತನ್ನ ವಿರುದ್ಧ ದಾಖಲಾಗಿರುವ ಹಣ ವರ್ಗಾವಣೆ ಪ್ರಕರಣವನ್ನು ರದ್ದುಗೊಳಿಸದಿರುವ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಇದರ ವಿಚಾರಣೆ ಸೆಪ್ಟೆಂಬರ್ 22 ರಂದು ಅಂದರೆ ನಾಳೆ ನಡೆಯಲಿದೆ.

ನವದೆಹಲಿ: ವಂಚನೆ ಪ್ರಕರಣದಲ್ಲಿ (Money laundering case) ಸುಕೇಶ್ ಚಂದ್ರಶೇಖರ್ (Sukesh Chandrashekhar) ವಿರುದ್ಧ ದಾಖಲಾಗಿರುವ 215 ಕೋಟಿ ರೂ. ಹಣ ವರ್ಗಾವಣೆ ಪ್ರಕರಣದಿಂದ ತನ್ನನ್ನು ಮುಕ್ತಗೊಳಿಸುವಂತೆ ಕೋರಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Bollywood actor Jacqueline Fernandez) ಅವರು ಸುಪ್ರೀಂ ಕೋರ್ಟ್ (Supreme Court) ಮೊರೆ ಹೋಗಿದ್ದಾರೆ. ಹಣ ವರ್ಗಾವಣೆ ಪ್ರಕರಣ ರದ್ದುಗೊಳಿಸದಿರುವ ಕುರಿತು ದೆಹಲಿ ಹೈಕೋರ್ಟ್ (Delhi high court) ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ನಟಿಯ ಅರ್ಜಿ ವಿಚಾರಣೆಯನ್ನು ನ್ಯಾಯಾಧೀಶರಾದ ದೀಪಂಕರ್ ದತ್ತಾ ಮತ್ತು ಆಗಸ್ಟೀನ್ ಜಾರ್ಜ್ ಮಾಸಿಹ್ ಅವರ ಪೀಠವು ಸೋಮವಾರ ನಡೆಸಲಿದೆ.

ವಂಚನೆ ಪ್ರಕರಣದಲ್ಲಿ ಸುಕೇಶ್ ಚಂದ್ರಶೇಖರ್ ವಿರುದ್ಧ ದಾಖಲಾಗಿರುವ 215 ಕೋಟಿ ರೂ. ಹಣ ವರ್ಗಾವಣೆ ಪ್ರಕರಣವನ್ನು ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿತ್ತು. ಇದರಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಹೆಸರು ಕೂಡ ಆರೋಪ ಪಟ್ಟಿಯಲ್ಲಿ ದಾಖಲಾಗಿತ್ತು. ಈ ಕುರಿತು ವಿಚಾರಣೆ ಎದುರಿಸುತ್ತಿರುವ ನಟಿ ತನ್ನ ವಿರುದ್ಧ ದಾಖಲಾಗಿರುವ ಹಣ ವರ್ಗಾವಣೆ ಪ್ರಕರಣವನ್ನು ರದ್ದುಗೊಳಿಸದಿರುವ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ದಾವೆ ಹೂಡಿದ್ದಾರೆ. ನ್ಯಾಯಾಧೀಶರಾದ ದೀಪಂಕರ್ ದತ್ತಾ ಮತ್ತು ಆಗಸ್ಟೀನ್ ಜಾರ್ಜ್ ಮಾಸಿಹ್ ಅವರ ಪೀಠವು ಸೋಮವಾರ ಇವರ ಅರ್ಜಿಯ ವಿಚಾರಣೆ ನಡೆಸಲಿದೆ.

2022ರ ಆಗಸ್ಟ್ 17ರಂದು ದಾಖಲಾಗಿರುವ ವಂಚನೆ ಪ್ರಕರಣದ ಚಾರ್ಜ್ ಶೀಟ್ ನಲ್ಲಿ ಫರ್ನಾಂಡಿಸ್ ಅವರನ್ನು ಸಹ-ಆರೋಪಿ ಎಂದು ಇಡಿ ಹೆಸರಿಸಿದೆ. ಚಂದ್ರಶೇಖರ್ ಅವರ ಅಪರಾಧ ಚಟುವಟಿಕೆಗಳ ಬಗ್ಗೆ ತಿಳಿದಿದ್ದರೂ ಸಹ ಫರ್ನಾಂಡಿಸ್ ಅವರಿಂದ ದುಬಾರಿ ಉಡುಗೊರೆಗಳನ್ನು ಸ್ವೀಕರಿಸಿದ್ದಾರೆ ಎಂದು ಇಡಿ ಆರೋಪಿಸಿದೆ.

ಅಪರಾಧ ವಿಚಾರಣೆಯ ರಸೀದಿಗಳು ಮತ್ತು ಸಾಕ್ಷ್ಯಗಳನ್ನು ಮರೆಮಾಡಲು ಅವರು ತಮ್ಮ ಫೋನ್‌ನಿಂದ ಅಳಿಸಿಹಾಕಿದ ಡೇಟಾವನ್ನು ಇಡಿ ಸ್ವಾಧೀನ ಪಡಿಸಿಕೊಂಡು ದೆಹಲಿ ಹೈಕೋರ್ಟ್ ಗೆ ಸಲ್ಲಿಸಿದೆ. ಇದನ್ನು ಫರ್ನಾಂಡೀಸ್ ಕೂಡ ಒಪ್ಪಿಕೊಂಡಿದ್ದರು ಎಂದು ಇಡಿ ತಿಳಿಸಿದೆ. ಆದರೆ ಇದನ್ನು ತಿರಸ್ಕರಿಸಿರುವ ಜಾಕ್ವೆಲಿನ್ ಫರ್ನಾಂಡೀಸ್ ಅವರು ಸುಕೇಶ್ ಚಂದ್ರಶೇಖರ್ ಅವರ ಅಪರಾಧದ ಬಗ್ಗೆ ತನಗೆ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Donald Trump: ಭಾರತ- ಪಾಕ್‌ ಯುದ್ಧ ನಿಲ್ಲಿಸಿದ್ದಕ್ಕೆ ನನಗೆ ನೊಬೆಲ್‌ ಪ್ರಶಸ್ತಿ ಕೊಡಲೇ ಬೇಕು; ಟ್ರಂಪ್‌

ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಇಡಿ ಮತ್ತು ನಂತರ ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (ಇಒಡಬ್ಲ್ಯೂ) ಹಲವಾರು ಬಾರಿ ವಿಚಾರಣೆ ನಡೆಸಿದೆ. ವಂಚನೆಯಿಂದ ಬಂದಿರುವ ಆದಾಯದಲ್ಲಿ ಸುಕೇಶ್ ಅವರು ಜಾಕ್ವೆಲಿನ್ ಫರ್ನಾಂಡಿಸ್ ಗೆ ಸುಮಾರು 5.71 ಕೋಟಿ ರೂ. ಮೌಲ್ಯದ ವಿವಿಧ ಉಡುಗೊರೆಗಳನ್ನು ನೀಡಿದ್ದಾರೆ ಎಂದು ಸಹ-ಆರೋಪಿಯಾಗಿದ್ದ ಪಿಂಕಿ ಇರಾನಿ ಅವರು ಇಡಿಗೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

ವಿದ್ಯಾ ಇರ್ವತ್ತೂರು

View all posts by this author