ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Road Accident: ಕಾಲೇಜು ಬಸ್‌ ಡಿಕ್ಕಿ ಹೊಡೆದು ಶಾಲೆಗೆ ಹೋಗುತ್ತಿದ್ದ ತಾಯಿ -ಮಗ ಸಾವು; ಚಾಲಕ ಎಸ್ಕೇಪ್‌

ಕಾಲೇಜು ಬಸ್ ಡಿಕ್ಕಿ ಹೊಡೆದ ಪರಿಣಾಮ ಶಾಲೆ ಕಡೆಗೆ ಹೋಗ್ತಿದ್ದ ತಾಯಿ-ಮಗ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ವಿವೇಕನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಮಗನನ್ನ ಶಾಲೆಗೆ ಕರೆದುಕೊಂಡು ಹೋಗ್ತಿದ್ದ ವೇಳೆ ಬಸ್​ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

ಸಂಗ್ರಹ ಚಿತ್ರ

ಬೆಂಗಳೂರು: ಕಾಲೇಜು ಬಸ್ ಡಿಕ್ಕಿ ಹೊಡೆದ ಪರಿಣಾಮ ಶಾಲೆ ಕಡೆಗೆ (Road Accident) ಹೋಗ್ತಿದ್ದ ತಾಯಿ-ಮಗ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ವಿವೇಕನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಮಗನನ್ನ ಶಾಲೆಗೆ ಕರೆದುಕೊಂಡು ಹೋಗ್ತಿದ್ದ ವೇಳೆ ಬಸ್​ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಇಬ್ಬರು ವಿವೇಕನಗರ ಜಂಕ್ಷನ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಖಾಸಗಿ ಕಾಲೇಜು ಬಸ್​​ ಮಹಿಳೆ ಮತ್ತು ಮಗನಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮಹಿಳೆ ಹಾಗೂ ಬಾಲಕ ಸಾವನ್ನಪ್ಪಿದ್ದು, ಅಶೋಕ್​ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಮಹಿಳೆ ಸಂಗೀತಾ ಆರ್ಮಿ ಪಬ್ಲಿಕ್ ಶಾಲೆಯಲ್ಲಿ ಸಹಾಯಕಿಯಾಗಿ ಕೆಲಸ ಮಾಡ್ತಿದ್ದರು. ಇವರು ಮೂಲತಃ ಆಂಧ್ರ ಪ್ರದೇಶ ಮೂಲದವರಾಗಿದ್ದಾರೆ. ಸಂಗೀತಾ ಪತಿ ಪ್ರಸಾದ್ ಎಂಬುವವರು ಕೂಡ ಚಾಲಕನಾಗಿ ಕೆಲಸ ಮಾಡ್ತಿದ್ದಾರೆ.ತಾನು ಕೆಲಸ ಮಾಡ್ತಿದ್ದ ಶಾಲೆಗೆ ಮಗನನ್ನ ಸೇರಿಸಿದ್ದ ಸಂಗೀತಾ. 8 ವರ್ಷದ ಮಗನೊಂದಿಗೆ ಬೆಳಗ್ಗೆ 6.30ರ ಸುಮಾರಿಗೆ ಶಾಲೆಗೆ ಕೆಲಸಕ್ಕೆಂದು ಹೋಗುತ್ತಿದ್ದರು ಎನ್ನಲಾಗಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಅಶೋಕ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬೋರಿಂಗ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಪಘಾತ ಎಸಗಿದ ಬಸ್ ಚಾಲಕ ಸುನೀಲ್, ಘಟನೆಯ ನಂತರ ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರು ತಲೆ ಮರೆಸಿಕೊಂಡಿರುವ ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ.

ಟೋಲ್ ನಲ್ಲಿ ನಿಂತಿದ್ದ ಕಾರಿಗೆ ಅಪಘಾತ

ಟೋಲ್ ಪ್ಲಾಜಾದಲ್ಲಿ ಟೋಲ್ ಕಟ್ಟಲು ನಿಂತಿದ್ದ ಕಾರಿಗೆ ಹಿಂದಿನಿಂದ ಬಂದ ಟ್ರಕ್ ಡಿಕ್ಕಿಯಾಗಿದ್ದು, ಅಲ್ಲಿನ ಟೋಲ್ ಸಿಬ್ಬಂದಿಯನ್ನು ಬರೊಬ್ಬರಿ 50 ಮೀಟರ್ ಎಳೆದೊಯ್ದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಝಾನ್ಸಿಯ ಕಾನ್ಪುರ ಹೆದ್ದಾರಿಯಲ್ಲಿರುವ ಸೆಮ್ರಿ ಟೋಲ್ ಪ್ಲಾಜಾದಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್ ಚಾಲಕ ಟೋಲ್ ಸಿಬ್ಬಂದಿಯನ್ನು ಬರೊಬ್ಬರಿ 50 ಮೀಟರ್ ಎಳೆದೊಯ್ದ ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಗಾಯಾಳುವನ್ನು ಹೆದ್ದಾರಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಶನಿವಾರ ಮಧ್ಯಾಹ್ನ 2:00 ಗಂಟೆ ಸುಮಾರಿಗೆ ಮಾತ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾನ್ಪುರ ಹೆದ್ದಾರಿಯಲ್ಲಿರುವ ಸೆಮ್ರಿ ಟೋಲ್ ಪ್ಲಾಜಾದಲ್ಲಿ ನಿಂತಿದ್ದ 2 ಕಾರುಗಳಿಗೆ ಹಿಂದಿನಿಂದ ಬಂದ ಟ್ರಕ್ ಡಿಕ್ಕಿಯಾಗಿದೆ.