ಕರ್ನಾಟಕ ಬಜೆಟ್​ ವಿದೇಶ ಮಹಿಳಾ ದಿನಾಚರಣೆ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Drowned: ಕೃಷಿಹೊಂಡಕ್ಕೆ ಬಿದ್ದು ತಾಯಿ, ಇಬ್ಬರು ಮಕ್ಕಳು ಸಾವು

ಮುಳುಗುತ್ತಿರುವ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿಯೂ ಸಾವಿಗೀಡಾಗಿದ್ದಾಳೆ. ನೀಲಾಭಾಯಿ (32), ರಾಜೇಶ್ವರಿ (11), ಡುಮ್ಮಿ (6) ಮೃತಪಟ್ಟ ದುರ್ದೈವಿಗಳು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಡಿಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೃಷಿಹೊಂಡಕ್ಕೆ ಬಿದ್ದು ತಾಯಿ, ಇಬ್ಬರು ಮಕ್ಕಳು ಸಾವು

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Mar 12, 2025 6:33 AM

ಯಾದಗಿರಿ : ಯಾದಗಿರಿ (Yadagiri news) ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಕೃಷಿ ಹೊಂಡದಲ್ಲಿ ಬಿದ್ದು ಮುಳುಗಿ (Drowned) ತಾಯಿ, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ವಡಿಗೇರಾ ತಾಲೂಕಿನ ಕಂಠಿ ತಾಂಡಾದ ಬಳಿ ಕಟ್ಟಿಗೆ ತರಲು ಹೋಗಿದ್ದ ವೇಳೆ ಕೃಷಿ ಹೊಂಡಕ್ಕೆ (Agriculture pond) ಜಾರಿ ಬಿದ್ದು, ತಾಯಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಮುಳುಗುತ್ತಿರುವ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿಯೂ ಸಾವಿಗೀಡಾಗಿದ್ದಾಳೆ. ನೀಲಾಭಾಯಿ (32), ರಾಜೇಶ್ವರಿ (11), ಡುಮ್ಮಿ (6) ಮೃತಪಟ್ಟ ದುರ್ದೈವಿಗಳು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಡಿಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೈಕ್‌ಗೆ ಬಸ್‌ ಡಿಕ್ಕಿ, ಸವಾರ ಸಾವು

ಬಾಗೇಪಲ್ಲಿ: ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬಾಗೇಪಲ್ಲಿ ತಾಲ್ಲೂಕು ಮಿಟ್ಟೇಮರಿ ಬಳಿ ಮಂಗಳ ವಾರ ನಡೆದಿದೆ. ಬಾಗೇಪಲ್ಲಿ ಕಡೆಯಿಂದ ಚಿಂತಾಮಣಿಗೆ ತೇರುಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಮಿಟ್ಟೇಮರಿ ಸಮೀಪ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಬಳಿ ಅಪಘಾತ ನಡೆದಿದೆ.ಅಪಘಾದ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದೆ. ಬಸ್ಸಿಗೆ ಅಂಟಿಕೊಂಡಿದೆ.

ಈ ಘಟನೆಯಲ್ಲಿ ಮಿಟ್ಟೇಮರಿಯ ವೆಂಕಟಾಚಲಪತಿಯವರ ಮಗ ರಂಜಿತ ಕುಮಾರ್ (28) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದು, ಘಟನಾ ಸ್ಥಳಕ್ಕೆ ಬಾಗೇಪಲ್ಲಿ ಪಟ್ಟಣದ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಪ್ರಶಾಂತ್ ವರ್ಣಿ ಮತ್ತಿತರರು ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ದೇಹವನ್ನು ಬಾಗೇಪಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಇದರಿಂದಾಗಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Weight Loss: ಯೂಟ್ಯೂಬ್‌ ವಿಡಿಯೋ ನೋಡಿ ಡಯಟ್ ಮಾಡಿದ್ದ ಕೇರಳದ ಯುವತಿ ಸಾವು !