ದಾವಣಗೆರೆ, ಫೆ.04 : ರಾಜ್ಯದಲ್ಲಿ ಮತ್ತೊಂದು ಕೊಲೆ ಹಾಗೂ ದರೋಡೆ ಪ್ರಕರಣ (Murder and Robbery Case) ಬೆಳಕಿಗೆ ಬಂದಿದ್ದು, ದಾವಣಗೆರೆ (Davanagere news) ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿಯಲ್ಲಿ ದುಷ್ಕರ್ಮಿಗಳು ವೃದ್ದೆಯನ್ನು ಕೊಲೆಗೈದು 73 ಗ್ರಾಂ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಮನೆಯಲ್ಲಿ ಒಂಟಿಯಾಗಿದ್ದ ಕಮಲಮ್ಮ (64) ಎಂಬ ವೃದ್ಧೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಅವರ ಬಳಿಯಿದ್ದ ಸುಮಾರು 73 ಗ್ರಾಂ ಚಿನ್ನಾಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.
ಘಟನೆಯ ಹಿನ್ನೆಲೆ
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿಯ ವೃದ್ದೆ ಕೊಲ್ಲಾರಿ ಕಮಲಮ್ಮ (64) ಅವರು ಒಂಟಿಯಾಗಿ ವಾಸವಾಗಿದ್ದರು. ರಾತ್ರಿ ವೃದ್ಧೆ ಮಲಗಿದ್ದ ಸಮಯದಲ್ಲಿ ಮನೆಗೆ ನುಗ್ಗಿದ ದುಷ್ಕರ್ಮಿಗಳು, ಅವರು ಕೂಗಾಡದಂತೆ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ. ಬಳಿಕ ವೃದ್ಧೆಯ ಮೈಮೇಲಿದ್ದ ಚಿನ್ನದ ಸರ ಸೇರಿದಂತೆ ಒಟ್ಟು 73 ಗ್ರಾಂ ತೂಕದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.
ಘಟನೆ ನಡೆದ ನ್ಯಾಮತಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಬೆಂಗಳೂರಿನಲ್ಲಿ ಹಾಡಹಗಲೇ ದರೋಡೆ: ಖಾಸಗಿ ಕಂಪನಿ ಉದ್ಯೋಗಿಯ ಮೇಲೆ ಹಲ್ಲೆ ನಡೆಸಿ 31 ಲಕ್ಷ ರುಪಾಯಿ ದೋಚಿದ ಡಕಾಯಿತರು
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ, ಶಿಕ್ಷಕನ ಬಂಧನ
ಚಿತ್ರದುರ್ಗ : ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಖಾಸಗಿ ಶಾಲಾ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಖಾಸಗಿ ಶಾಲೆಯ ಶಿಕ್ಷಕ ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.
ಶಾಲೆಯ 6 ವಿದ್ಯಾರ್ಥಿನಿಯರನ್ನು ಕೋಣೆಗೆ ಕಿರುಕುಳ ನೀಡಿದ್ದಾನೆ ಎನ್ನುವ ಆರೋಪ ಬಂದಿದೆ. ಶಾಲಾ ಆಡಳಿತ ಸಮಿತಿಯಿಂದ ಈ ಕುರಿತು ಭರ್ಮಸಾಗರ ಠಾಣೆಗೆ ದೂರು ನೀಡಲಾಗಿದ್ದು, ಆರೋಪಿ ಶಿಕ್ಷಕ ರಂಗಣ್ಣನನ್ನು ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ.
ಎಸ್‌ಬಿಐ ಎಟಿಎಂ ಹೊರಗೆ ಉದ್ಯಮಿ ಮೇಲೆ ಗುಂಡು ಹಾರಿಸಿ 6 ಲಕ್ಷ ರೂ. ದರೋಡೆ!