Murder Case: ಬೆಂಗಳೂರಿನಲ್ಲಿ ಬರ್ಬರ ಕೃತ್ಯ, ಅತ್ಯಾಚಾರ ಎಸಗಿ ಬಾಲಕಿಯ ಕೊಲೆ
Murder Case: ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ಕೊಪ್ಪಳ ಮೂಲದ ದಂಪತಿ ಗಾರೆ ಕೆಲಸ ಮಾಡಿಕೊಂಡು 15 ವರ್ಷಗಳಿಂದ ವಾಸವಾಗಿದ್ದಾರೆ. ತಂದೆ ತಾಯಿ ಕೆಲಸಕ್ಕೆ ಹೋಗಿದ್ದಾಗ ಬಾಲಕಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.


ಬೆಂಗಳೂರು: ಬೆಂಗಳೂರು (Bengaluru Crime News) ಹೊರವಲಯದ ತಾವರೆಕೆರೆ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಕೃತ್ಯ ನಡೆದಿದೆ. 14 ವರ್ಷದ ಬಾಲಕಿಯನ್ನು ಬರ್ಬರವಾಗಿ ಹತ್ಯೆ (Murder Case) ಮಾಡಲಾಗಿದ್ದು, ಅತ್ಯಾಚಾರ (Physical abuse) ಎಸಗಿರುವ ಶಂಕೆ ವ್ಯಕ್ತವಾಗಿದೆ. ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಹತ್ಯೆಗೀಡಾದ ಬಾಲಕಿ, ಕೊಪ್ಪಳ ಮೂಲದ ದಂಪತಿಯ ಮಗಳಾಗಿದ್ದು, ಪಾಲಕರು ಕೆಲಸಕ್ಕೆ ಹೋದ ಸಂದರ್ಭದಲ್ಲಿ ಮನೆಯಲ್ಲಿ ಬಾಲಕಿ ಒಬ್ಬಳೇ ಇದ್ದಾಗ ಘಟನೆ ನಡೆದಿದೆ.
ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ಕೊಪ್ಪಳ ಮೂಲದ ದಂಪತಿ ಗಾರೆ ಕೆಲಸ ಮಾಡಿಕೊಂಡು 15 ವರ್ಷಗಳಿಂದ ವಾಸವಾಗಿದ್ದಾರೆ. ತಂದೆ ತಾಯಿ ಕೆಲಸಕ್ಕೆ ಹೋಗಿದ್ದಾಗ ಬಾಲಕಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಶಾಲೆಗೆ ಹೋಗದೆ ಮನೆಯಲ್ಲಿ ಇದ್ದ ಬಾಲಕಿಯ ಮೇಲೆ ಹಂತಕರು ಹಲ್ಲೆ ಮಾಡಿದ್ದಾರೆ. ಮಧ್ಯಾಹ್ನ ಮನೆಯಲ್ಲಿ ಬಾಲಕಿ ಶವ ಪತ್ತೆಯಾಗಿರುವುದನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದರು.
ಈ ಭೀಕರ ಕೊಲೆಗೆ ಕಾರಣ ತಿಳಿದು ಬಂದಿಲ್ಲ. ತಾವರೆಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಬಾಲಕಿಯ ದೇಹದ ಮೇಲೆ ಗಾಯದ ಗುರುತುಗಳು ಕಂಡುಬಂದಿವೆ. ದುಷ್ಕರ್ಮಿಗಳು ಅತ್ಯಾಚಾರವೆಸಗಿ ನಂತರ ಕೊಲೆ ಮಾಡಿ ಪರಾರಿಯಾಗಿರುವ ಅನುಮಾನವಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಶೋಧಕಾರ್ಯ ನಡೆಸಿದ್ದಾರೆ.
ಇದನ್ನೂ ಓದಿ: Murder Case: ಕಲಬುರಗಿಯಲ್ಲೂ ರೇಣುಕಾಸ್ವಾಮಿ ರೀತಿಯ ಕೊಲೆ: ಪ್ರೇಯಸಿಗೆ ಕಿರುಕುಳ ನೀಡಿದಾತನ ಗುಪ್ತಾಂಗಕ್ಕೆ ಒದ್ದು ಹತ್ಯೆ