ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Murder case: ಲಿವ್‌ ಇನ್‌ ಗೆಳತಿಯ ಮೇಲೆ ಪೆಟ್ರೋಲ್‌ ಸುರಿದು ಸುಟ್ಟು ಕೊಂದ ಸಂಶಯಪಿಶಾಚಿ!

Bengaluru Crime: ವಿಟ್ಠಲ ಕ್ಯಾಬ್‌ ಚಾಲಕನಾಗಿದ್ದ. ಮಳೆನಲ್ಲಸಂದ್ರದಲ್ಲಿ ಕಳೆದ ಮೂರು ವರ್ಷಗಳಿಂದ ಇಬ್ಬರು ಲಿವಿಂಗ್ ಟುಗೆದರ್‌ನಲ್ಲಿದ್ದರು. ಆದರೆ ಇತ್ತೀಚೆಗೆ ಮೃತ ವನಜಾಕ್ಷಿ ಬೇರೊಬ್ಬ ವ್ಯಕ್ತಿಯ ಜೊತೆಗೆ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿ ವಿಠ್ಠಲನಿಗೆ ಅನುಮಾನ ಮೂಡಿತ್ತು. ಇದರಿಂದಾಗಿ ವಿಠ್ಠಲ ಆಕೆಯನ್ನು ಫಾಲೋ ಮಾಡಲು ಶುರು ಮಾಡಿದ್ದ.

ಲಿವ್‌ ಇನ್‌ ಗೆಳತಿಯ ಮೇಲೆ ಪೆಟ್ರೋಲ್‌ ಸುರಿದು ಸುಟ್ಟು ಕೊಂದ ಸಂಶಯಪಿಶಾಚಿ!

ಆರೋಪಿ ವಿಟ್ಠಲ, ಮೃತ ವನಜಾಕ್ಷಿ -

ಹರೀಶ್‌ ಕೇರ ಹರೀಶ್‌ ಕೇರ Sep 1, 2025 1:48 PM

ಬೆಂಗಳೂರು: ಅನೈತಿಕ ಸಂಬಂಧದ (illcit relationship) ಶಂಕೆಯಿಂದ ವ್ಯಕ್ತಿಯೋರ್ವ ತನ್ನ ಲಿವ್ ಇನ್ ಗೆಳತಿಯನ್ನು ಅಟ್ಟಿಸಿಕೊಂಡು ಹೋಗಿ ಪೆಟ್ರೋಲ್ ಸುರಿದು ಸುಟ್ಟುಹಾಕಿರುವ (Murder case) ಘೋರ ಘಟನೆ ಬೆಂಗಳೂರು (Bengaluru Crime nws) ನಗರದ ಹೊರವಲಯದ ಹುಳಿಮಾವು (Hulimavu) ಬಳಿ ನಡೆದಿದೆ. ಮೃತ ದುರ್ದೈವಿ ಮಹಿಳೆಯನ್ನು ವನಜಾಕ್ಷಿ (26) ಎಂದು ಗುರುತಿಸಲಾಗಿದ್ದು, ಸಂಶಯಪಿಶಾಚಿ ಆರೋಪಿ ವಿಠ್ಠಲ (52) ಎಂದು ತಿಳಿದುಬಂದಿದೆ.

ವಿಟ್ಠಲ ಕ್ಯಾಬ್‌ ಚಾಲಕನಾಗಿದ್ದ. ಮಳೆನಲ್ಲಸಂದ್ರದಲ್ಲಿ ಕಳೆದ ಮೂರು ವರ್ಷಗಳಿಂದ ಇಬ್ಬರು ಲಿವಿಂಗ್ ಟುಗೆದರ್‌ನಲ್ಲಿದ್ದರು. ಆದರೆ ಇತ್ತೀಚೆಗೆ ಮೃತ ವನಜಾಕ್ಷಿ ಬೇರೊಬ್ಬ ವ್ಯಕ್ತಿಯ ಜೊತೆಗೆ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿ ವಿಠ್ಠಲನಿಗೆ ಅನುಮಾನ ಮೂಡಿತ್ತು. ಇದರಿಂದಾಗಿ ವಿಠ್ಠಲ ಆಕೆಯನ್ನು ಫಾಲೋ ಮಾಡಲು ಶುರು ಮಾಡಿದ್ದ. ಇದೇ ಸಮಯದಲ್ಲಿ ವನಜಾಕ್ಷಿ ಬೇರೊಬ್ಬ ವ್ಯಕ್ತಿಯ ಜೊತೆಗೆ ಕಾರಿನಲ್ಲಿ ಹೋಗುತ್ತಿರುವುದನ್ನು ಕಂಡು ಕೋಪಗೊಂಡಿದ್ದ.

ಆಕೆಯ ಕಾರನ್ನು ಹಿಂಬಾಲಿಸಿಕೊಂಡು ಹೋಗಿ ಅಡ್ಡಗಟ್ಟಿದ್ದ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ಶುರುವಾಗಿ ಆರೋಪಿ ತನ್ನ ಕಾರಿನಲ್ಲಿದ್ದ 5 ಲೀಟರ್ ಪೆಟ್ರೋಲ್ ತೆಗೆದು ವನಜಾಕ್ಷಿ ಮೇಲೆ ಸುರಿಯಲು ಮುಂದಾದ. ಇದರಿಂದ ಭಯಭೀತಳಾದ ವನಜಾಕ್ಷಿ ಕಾರಿನಿಂದ ಇಳಿದು ಅಲ್ಲಿಂದ ಓಡಿಹೋಗಿದ್ದಾಳೆ. ಆದರೆ ಆಕೆಯನ್ನು ಬಿಡದ ಆರೋಪಿ ಅಟ್ಟಿಸಿಕೊಂಡು ಹೋಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ.

ತೀವ್ರವಾಗಿ ಸುಟ್ಟು ಗಾಯಗಳಾಗಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು (ಸೆ.1) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಈ ಸಂಬಂಧ ಹುಳಿಮಾವು ಪೊಲೀಸರು ಆರೋಪಿ ವಿಠ್ಠಲನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Murder Case: ತಲ್ವಾರ್‌ನಿಂದ ಕೊಚ್ಚಿ ಬರ್ಬರವಾಗಿ ವೃದ್ಧನ ಕೊಲೆ