ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Murder case: ಮಾಜಿ ಶಾಸಕನ ಮಗನ ಸಾವಿಗೆ ಬಿಗ್ ಟ್ವಿಸ್ಟ್, ಅಕ್ರಮ ಸಂಬಂಧವೇ ಕೊಲೆಗೆ ಕಾರಣ

ಧಾರವಾಡ ತಾಲೂಕಿನ ರಾಮಾಪುರ ಗ್ರಾಮದ ರೈಲ್ವೆ ಟ್ರ್ಯಾಕ್ ಪಕ್ಕದಲ್ಲಿರುವ ದಟ್ಟ ಅರಣ್ಯ ಪ್ರದೇಶದಲ್ಲಿ ಗುರುತು ಸಿಗದಷ್ಟು ಸ್ಥಿತಿಯಲ್ಲಿ ಸುಟ್ಟು ಕರಕಲಾದ ರಾಜುನ ಶವ ಸಿಕ್ಕಿತ್ತು. ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆಯಿಂದ ಸ್ಫೋಟಕ ಮಾಹಿತಿ ಬಹಿರಂಗವಾಗಿದ್ದು, ಮೃತನಿಗಿದ್ದ ಅನೈತಿಕ ಸಂಬಧದ ಹಿನ್ನೆಲೆ ಕೊಲೆ ನಡೆದಿದೆ ಎನ್ನಲಾಗಿದೆ.

ಮಾಜಿ ಶಾಸಕನ ಮಗನ ಸಾವಿಗೆ ಬಿಗ್ ಟ್ವಿಸ್ಟ್, ಅಕ್ರಮ ಸಂಬಂಧವೇ ಕೊಲೆಗೆ ಕಾರಣ

ಮೃತ ರಾಜು ಬೋಳಶೆಟ್ಟಿ -

ಹರೀಶ್‌ ಕೇರ
ಹರೀಶ್‌ ಕೇರ Mar 26, 2026 10:06 AM

ಧಾರವಾಡ, ಮಾರ್ಚ್​ 25: ಜಿಲ್ಲೆಯಲ್ಲಿ ನಡೆದ ಮಾಜಿ ಶಾಸಕನ ಪುತ್ರನ ಹತ್ಯೆ (murder case) ಪ್ರಕರಣ ಭಾರೀ ತಿರುವು ಪಡೆದಿದ್ದು, ಘಟನೆ ಪೂರ್ವನಿಯೋಜಿತ ಕೊಲೆ ಎಂಬ ಶಂಕೆ ಮತ್ತಷ್ಟು ಗಾಢವಾಗಿದೆ. ಬೆಳಗಾವಿ (Belagavi) ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಅವರ ಶವ ಧಾರವಾಡ (Dharwad) ತಾಲೂಕಿನ ರಾಮಾಪುರ ಅರಣ್ಯ ಪ್ರದೇಶದಲ್ಲಿ ಕಾರಿನೊಳಗೆ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿತ್ತು. ಈ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಧಾರವಾಡ ತಾಲೂಕಿನ ರಾಮಾಪುರ ಗ್ರಾಮದ ರೈಲ್ವೆ ಟ್ರ್ಯಾಕ್ ಪಕ್ಕದಲ್ಲಿರುವ ದಟ್ಟ ಅರಣ್ಯ ಪ್ರದೇಶದಲ್ಲಿ ಗುರುತು ಸಿಗದಷ್ಟು ಸ್ಥಿತಿಯಲ್ಲಿ ಸುಟ್ಟು ಕರಕಲಾದ ರಾಜುನ ಶವ ಸಿಕ್ಕಿತ್ತು. ಈ ಘಟನೆಯು ಜಿಲ್ಲೆಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದು, ಇದು ಪೂರ್ವನಿಯೋಜಿತ ಕೊಲೆ ಎಂಬ ಬಲವಾದ ಶಂಕೆ ವ್ಯಕ್ತವಾಗಿತ್ತು. ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆಯಿಂದ ಸ್ಫೋಟಕ ಮಾಹಿತಿ ಬಹಿರಂಗವಾಗಿದ್ದು, ಮೃತನಿಗಿದ್ದ ಅನೈತಿಕ ಸಂಬಧದ ಹಿನ್ನೆಲೆ ಕೊಲೆ ನಡೆದಿದೆ ಎನ್ನಲಾಗಿದೆ.

ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ರಾಜು ಬೋಳಶೆಟ್ಟಿ, ದೈಹಿಕ ಸಂಪರ್ಕಕ್ಕೆ ಬಂದಾಗ ಆಕೆಗೆ ಹಣ ನೀಡುತ್ತಿದ್ದ. ಸಾಲದ ರೂಪದಲ್ಲಿಯೇ ಮಹಿಳೆಗೆ ಹಣ ನೀಡುತ್ತದ್ದ ರಾಜು, 2 ಲಕ್ಷ ರೂ. ಗೂ ಹೆಚ್ಚು ಹಣ ಕೊಟ್ಟಿದ್ದ. ಇದೇ ವಿಚಾರಕ್ಕೆ ಮಹಿಳೆ ಹಾಗೂ ರಾಜು ನಡುವೆ ಮನಸ್ತಾಪ ಆಗಿತ್ತು. ನಿನ್ನೆಯೂ ಆತ ದೈಹಿಕ ಸಂಪರ್ಕಕ್ಕಾಗಿ ಹೊಲಕ್ಕೆ ಮಹಿಳೆಯನ್ನು ಕರೆದಿದ್ದ. ಇದೇ ವೇಳೆ ಮಹಿಳೆ, ಆಕೆಯ ಮಗ ಹಾಗೂ ಆಕೆಯ ಪ್ರಿಯಕರ ಸೇರಿ ಈ ಕೃತ್ಯವೆಸಗಿದ್ದಾರೆ ಎಂದು ತಿಳಿದುಬಂದಿದೆ.

ಧಾರವಾಡದಲ್ಲಿ ಮಾಜಿ ಶಾಸಕನ ಪುತ್ರ ಅನುಮಾನಾಸ್ಪದ ಸಾವು; ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ!

ಶವವನ್ನು ಕಾರು ಸಮೇತ ಸುಟ್ಟ ಆರೋಪಿಗಳು

ರಾಜು ಬೋಳಶೆಟ್ಟಿಯ ಕಾರಿನಲ್ಲೇ ರಾಮಾಪುರ ಅರಣ್ಯಕ್ಕೆ ಆತನ ಶವವನ್ನು ತಂದ ಈ ಮೂವರು, ಹಿಂದಿನ ಸೀಟಿನಲ್ಲಿ ಶವವಿಟ್ಟು, ತಾವು ತಂದಿದ್ದ 10 ಲೀ. ಪೆಟ್ರೋಲ್ ಸುರಿದು ಕಾರಿಗೆ ಬೆಂಕಿ ಹಚ್ಚಿದ್ದಾರೆ. ಘಟನೆ ಬಳಿಕ ಮೂವರೂ ಆರೋಪಿಗಳು ಪರಾರಿಯಾಗಿದ್ದರು. ಪೊಲೀಸರ ಚುರುಕಿನ ಕಾರ್ಯಾಚರಣೆಯಿಂದ ಕೆಲವೇ ಘಂಟೆಗಳಲ್ಲಿ ಮೂವರನ್ನೂ ಸೆರೆ ಹಿಡಿಯಲಾಗಿದೆ.