ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Murder Case: ಅನೈತಿಕ ಸಂಬಂಧದಿಂದ ಕೊಲೆ, ಕಾಂಗ್ರೆಸ್‌ ಶಾಸಕರ ಚಾಲಕನ ಬಂಧನ

Chitradurga news: ಕೊಲೆ ಪ್ರಕರಣದ ಪ್ರಮುಖ ಆರೋಪಿ ಯಶವಂತ್‌, ಚಿತ್ರದುರ್ಗ ಶಾಸಕ ಬಿಜಿ ಗೋವಿಂದಪ್ಪ ಅವರ ಕಾರು ಚಾಲಕನಾಗಿದ್ದಾನೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಲಿಂಗದಳ್ಳಿ ಮತ್ತು ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹತ್ಯೆ ಪ್ರಕರಣ ನಡೆದಿದೆ.

ಅನೈತಿಕ ಸಂಬಂಧದಿಂದ ಕೊಲೆ, ಕಾಂಗ್ರೆಸ್‌ ಶಾಸಕರ ಚಾಲಕನ ಬಂಧನ

ಶಾಸಕ ಬಿಜಿ ಗೋವಿಂದಪ್ಪ

ಹರೀಶ್‌ ಕೇರ ಹರೀಶ್‌ ಕೇರ Jul 23, 2025 1:04 PM

ಚಿತ್ರದುರ್ಗ: ಅನೈತಿಕ ಸಂಬಂಧದಿಂದ (Illicit relationship) ನಡೆದಿದೆ ಎನ್ನಲಾದ ಕೊಲೆ (Murder Case) ಪ್ರಕರಣವೊಂದರಲ್ಲಿ ಕಾಂಗ್ರೆಸ್ ಶಾಸಕ ಗೋವಿಂದಪ್ಪ ಅವರ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿಜಿ ಗೋವಿಂದಪ್ಪ ಚಿತ್ರದುರ್ಗ (Chitradurga news) ಜಿಲ್ಲೆಯ ಹೊಸದುರ್ಗದ ಕಾಂಗ್ರೆಸ್ ಶಾಸಕರಾಗಿದ್ದು, ಕೊಲೆ ಪ್ರಕರಣದಲ್ಲಿ ಶಾಸಕರ ಚಾಲಕ ಯಶವಂತ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಮಾರ್ಚ್ 17ರಂದು ಜಾನಕಲ್ ಗ್ರಾಮದ ಪ್ರಸನ್ನ (45) ಎನ್ನುವ ವ್ಯಕ್ತಿ ನಾಪತ್ತೆಯಾಗಿದ್ದರು. ಮಾರ್ಚ್ 21ರಂದು ಈ ಕುರಿತು ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಚಿಕ್ಕಮಗಳೂರು ಜಿಲ್ಲೆಯ ಲಿಂಗದಳ್ಳಿ ಬಳಿ ಪ್ರಸನ್ನ ಅವರ ಶವ ಪತ್ತೆಯಾಗಿತ್ತು. ಕೊಲೆ ಮಾಡಿ ಲಿಂಗದಳ್ಳಿ ಬಳಿಯ ಅರಣ್ಯದಲ್ಲಿ ಪ್ರಸನ್ನರ ಶವವನ್ನು ಎಸೆಯಲಾಗಿತ್ತು.

ಪ್ರಕರಣದ ಹಿಂದೆ ಬಿದ್ದ ಪೊಲೀಸರಿಗೆ ಪ್ರಸನ್ನರ ಪತ್ನಿ ಗಾಯತ್ರಿ ಎಂಬಾಕೆಯ ಅಕ್ರಮ ಸಂಬಂಧದ ವಾಸನೆ ಬಡಿದಿದೆ. ಈ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಸಿದ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಸನ್ನರ ಪತ್ನಿ ಗಾಯತ್ರಿ, ಶಾಸಕ ಗೋವಿಂದಪ್ಪ ಕಾರು ಚಾಲಕ ಯಶವಂತ್, ಲೋಹಿತ್ ಹಾಗೂ ವೀರೇಶ ಎಂಬವರನ್ನು ಹೊಸದುರ್ಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಲಿಂಗದಳ್ಳಿ ಮತ್ತು ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಕೋರ್ಟ್‌ ಆವರಣದಲ್ಲೇ ಪತ್ನಿ, ಅತ್ತೆಯ ಕೊಲೆ ಯತ್ನ

ಬೆಳಗಾವಿ: ಬೆಳಗಾವಿಯಲ್ಲಿ (Belagavi crime news) ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಕೋರ್ಟ್ ಆವರಣದಲ್ಲಿಯೇ ಪತಿಯೊಬ್ಬ ತನ್ನ ಪತ್ನಿ ಮತ್ತು ಅತ್ತೆಯ ಮೇಲೆ ಮಚ್ಚಿನಿಂದ ಭೀಕರವಾಗಿ ಹಲ್ಲೆ (Assault case) ನಡೆಸಿ ಕೊಲೆಗೆ ಯತ್ನಿಸಿದ್ದಾನೆ. ಬೆಳಗಾವಿ ಜಿಲ್ಲೆಯ ಸವದತ್ತಿ ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದೆ.

ಮಚ್ಚಿನಿಂದ ಪತ್ನಿ ಐಶ್ವರ್ಯ ಹಾಗೂ ಅತ್ತೆ ಅನಸೂಯ ಮೇಲೆ ಮುತ್ತಪ್ಪ ಗಣಾಚಾರಿ ಹಲ್ಲೆ ಮಾಡಿ ಕೊಲ್ಲಲು ಯತ್ನಿಸಿದ್ದಾನೆ. ತಕ್ಷಣವೇ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿಗಳು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚ್ಛೇದನ ಹಿನ್ನೆಲೆಯಲ್ಲಿ ಪತಿ ಮತ್ತು ಪತ್ನಿ ಕೋರ್ಟಿಗೆ ಹಾಜರಾಗಿದ್ದರು. ಆರೋಪಿ ಮುತ್ತಪ್ಪ ಬೈಲಹೊಂಗಲ ಪಟ್ಟಣದ ನಿವಾಸಿಯಾಗಿದ್ದು, ಐಶ್ವರ್ಯ ಮತ್ತು ಅನಸೂಯಾಗೆ ಸದ್ಯ ಧಾರವಾಡದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: Lucknow Murder: 10 ವರ್ಷಗಳ ಹಿಂದೆ ತಾಯಿಯನ್ನು ಅವಮಾನಿಸಿದ್ದ ವ್ಯಕ್ತಿಯ ಕೊಲೆ; ಆರೋಪಿಗಳು ಸಿಕ್ಕಿಬಿದ್ದಿದೇ ರೋಚಕ