ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

SBI ಬ್ಯಾಂಕ್‌ನ ಸೆಕ್ಯೂರಿಟಿ ಏಜೆನ್ಸಿ ಸಿಬ್ಬಂದಿ ಮೇಲೆ ಅಪರಿಚಿತರು ಕಾರದ ಪುಡಿ ಎರಚಿ, ಗುಂಡಿನ ದಾಳಿ ನಡೆಸಿದ್ದಾರೆ. ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

ಹರೀಶ್‌ ಕೇರ ಹರೀಶ್‌ ಕೇರ Jan 16, 2025 1:49 PM

ಬೀದರ್: ಬೀದರ್‌ನಲ್ಲಿ ಅಪರಿಚಿತ ದರೋಡೆಕೋರರು ಎಸ್‌ಬಿಐ ಸೆಕ್ಯೂರಿಟಿ ಏಜೆನ್ಸಿ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ (Murder Case) ಮಾಡಿ 93 ಲಕ್ಷ ರೂ. ದೋಚಿ (Robbery case) ಪರಾರಿಯಾಗಿದ್ದಾರೆ.

ಬೀದರ್‌ನಲ್ಲಿ ಬೆಳ್ಳಂಬೆಳಗ್ಗೆ ಈ ಗುಂಡಿನ ದಾಳಿ ನಡೆದಿದೆ. SBI ಬ್ಯಾಂಕ್‌ನ ಸೆಕ್ಯೂರಿಟಿ ಏಜೆನ್ಸಿ ಸಿಬ್ಬಂದಿ ಮೇಲೆ ಅಪರಿಚಿತರು ಕಾರದ ಪುಡಿ ಎರಚಿ, ಗುಂಡಿನ ದಾಳಿ ನಡೆಸಿದ್ದಾರೆ. ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ವ್ಯಕ್ತಿಯನ್ನು ಬೀದರ್‌ನ ಚಿದ್ರಿ ನಿವಾಸಿ ಗಿರಿ ವೆಂಕಟೇಶ (40) ಎಂದು ಗುರುತಿಸಲಾಗಿದೆ.

ಬೈಕಿನಲ್ಲಿ ಬಂದ ಅಪರಿಚಿತರು ಹಣ ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ. ಹಣ ಕೊಡದಿದ್ದಾಗ ಕಾರದ ಪುಡಿ ಎರಚಿ, ಬಳಿಕ ಗುಂಡಿನ ದಾಳಿ ನಡೆಸಿ, ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪಾತಕಿಯ ಕಾಲಿಗೆ ಗುಂಡು ಹಾರಿಸಿ ಸೆರೆ

ಬಳ್ಳಾರಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ (Physical Abuse) ಎಸಗಿದ ಆರೋಪಿಯ ಕಾಲಿಗೆ ಪೊಲೀಸರು (Police Firing) ಗುಂಡು ಹಾರಿಸಿ ಬಂಧಿಸಿದ್ದಾರೆ. ಬಳ್ಳಾರಿ (Bellary Crime News) ಜಿಲ್ಲೆಯ ತೋರಣಗಲ್‌ನಲ್ಲಿ ಘಟನೆ ನಡೆದಿದೆ. ಮಂಜುನಾಥ್ (26) ಎಂಬಾತ ಅತ್ಯಾಚಾರ ಎಸಗಿದ ಆರೋಪಿ.

ಗುರುವಾರ ಬೆಳಗ್ಗೆ ಪೊಲೀಸರು ಸ್ಥಳ ಮಹಜರಿಗೆ ಕರೆದೊಯ್ದ ವೇಳೆ ಆರೋಪಿ ಪೊಲೀಸರಿಗೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ಸಂದರ್ಭದಲ್ಲಿ ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ.

ಸೋಮವಾರ ನಡೆದ ಅತ್ಯಾಚಾರ ಪ್ರಕರಣ ಸಂಬಂಧ ತನಿಖೆಗೆ ಪೊಲೀಸರು ಮೂರು ತಂಡ ರಚಿಸಿದ್ದರು. ಕೊಪ್ಪಳದ ಹುಲಗಿಯಲ್ಲಿ ಆರೋಪಿಯನ್ನು ಬಂಧಿಸಲಾಗಿತ್ತು. ಬಂಧನದ ಬಳಿಕ ಪಂಚನಾಮೆಗೆ ಹೋದಾಗ ಆತ, ಹೆಡ್ ಕಾನ್ಸ್​​​ಟೇಬಲ್ ರಘುಪತಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಹೀಗಾಗಿ ಆತನ ಮೇಲೆ ಗುಂಡಿನ ದಾಳಿ ನಡೆಸಲಾಯಿತು. ಪಿಎಸ್​ಐ ಡಾಕೇಶ್ ಆರೋಪಿಯ ಬಲಗಾಲಿಗೆ ಮೇಲೆ ಪೈರಿಂಗ್ ಮಾಡಿದ್ದರು. ಸದ್ಯ ಆರೋಪಿಯನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅತ್ಯಾಚಾರಕ್ಕೊಳಗಾಗಿರುವ ಬಾಲಕಿ ಸದ್ಯ ಅಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಜನವರಿ 13ರ ಸೋಮವಾರದಂದು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿತ್ತು. ಆರೋಪಿ ಮಂಜುನಾಥ ಬಾಲಕಿಯನ್ನು ಹೊಂಚು ಹಾಕಿ ಪುಸಲಾಯಿಸಿ ಕರೆದುಕೊಂಡು ಹೋಗಿದ್ದುದು ಮತ್ತು ಆತನ ಚಲನವಲದ ದೃಶ್ಯ ಸಿಸಿ ಕ್ಯಾಮಾರಾದಲ್ಲಿ ಸೆರೆಯಾಗಿತ್ತು.

ಬಾಲಕಿಯನ್ನು ಕರೆದುಕೊಂಡು ಹೋಗುವ ಮುನ್ನ ಆರೋಪಿ ಬಾರ್‌ನಲ್ಲಿ ಮದ್ಯಪಾನ ಮಾಡಿದ್ದ. ಕುಡಿದ ಮತ್ತಿನಲ್ಲಿ ಬಾಲಕಿಯನ್ನು ಕರೆದುಕೊಂಡು ಹೋಗಿದ್ದ. ಬಳಿಕ ಅತ್ಯಾಚಾರವೆಸಗಿ ಪರಾರಿಯಾಗಿದ್ದ. ಆರೋಪಿ ಹುಡುಕಾಟಕ್ಕೆ ಬಳ್ಳಾರಿ ಎಸ್​​ಪಿ ಮೂರು ಪೊಲೀಸ್ ತಂಡ ರಚನೆ ಮಾಡಿದ್ದರು.