ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Murder Case: ತಾಯಿಯ ಪ್ರಿಯಕರನನ್ನು ಕೊಚ್ಚಿ ಕೊಂದು ಪೊಲೀಸರು ಬರುವವರೆಗೂ ಶವದ ಮೇಲೆ ಕಾಲಿಟ್ಟು ನಿಂತ!

10 ವರ್ಷಗಳ ಹಿಂದೆ ಈರಯ್ಯನ ತಾಯಿ ಜೊತೆ ಬಸಪ್ಪ ಮಹಾರಾಷ್ಟ್ರದ ಕೊಲ್ಹಾಪುರಕ್ಕೆ ಓಡಿಹೋಗಿದ್ದ. ಈ ವೇಳೆ ಆರೋಪಿ ಈರಯ್ಯನಿಗೆ 18 ವರ್ಷ ವಯಸ್ಸು. ಹಲವು ವರ್ಷಗಳ ಬಳಿಕ ಈರಯ್ಯನ ತಾಯಿಯನ್ನ ಕೊಲ್ಹಾಪುರದಲ್ಲಿ ಬಿಟ್ಟು ಗ್ರಾಮಕ್ಕೆ ನಾಲ್ಕು ದಿನಗಳ ಹಿಂದೆಯಷ್ಟೇ ಬಸಪ್ಪ ಬಂದಿದ್ದ. ಇದೇ ವಿಚಾರವಾಗಿ ದ್ವೇಷ ಸಾಧಿಸುತ್ತಿದ್ದ ಆರೋಪಿ ಈರಯ್ಯ ಆತನನ್ನು ಕೊಲೆ ಮಾಡಿದ್ದಾನೆ.

ತಾಯಿಯ ಪ್ರಿಯಕರನನ್ನು ಕೊಚ್ಚಿ ಕೊಂದು ಶವದ ಮೇಲೆ ಕಾಲಿಟ್ಟು ನಿಂತ!

ಮೃತ ಬಸಪ್ಪ, ಆರೋಪಿ ಈರಯ್ಯ -

ಹರೀಶ್‌ ಕೇರ
ಹರೀಶ್‌ ಕೇರ Feb 3, 2026 1:48 PM

ಬೆಳಗಾವಿ, ಫೆ. 03: ಅನೈತಿಕ ಸಂಬಂಧ (Illicit relationship) ವಿಚಾರವಾಗಿ ವ್ಯಕ್ತಿಯೊಬ್ಬನನ್ನು ಮಚ್ಚಿನಿಂದ ಸಿಕ್ಕ ಸಿಕ್ಕ ಕಡೆ ಕೊಚ್ಚಿ ಬರ್ಬರ ಹತ್ಯೆ (Murder Case) ಮಾಡಿರುವ ಘಟನೆ ಬೆಳಗಾವಿ (Belagavi news) ಜಿಲ್ಲೆ ಸವದತ್ತಿ ತಾಲೂಕಿನ ಹೂಲಿಕಟ್ಟಿಯಲ್ಲಿ ನಡೆದಿದೆ. ತನ್ನ ತಾಯಿಯ ಜೊತೆಗೇ ಅನೈತಿಕ ಸಂಬಂಧ ಹೊಂದಿದ್ದವನನ್ನು ಮಗ ಕೊಚ್ಚಿ ಕೊಂದಿದ್ದಾನೆ. ಸಡೋಣಿ ಗ್ರಾಮದ ಬಸಪ್ಪ ಹೊಸಮನಿ (51) ಕೊಲೆಯಾದ ವ್ಯಕ್ತಿಯಾಗಿದ್ದು, ಈರಯ್ಯ ಮಠಪತಿ ಆರೋಪಿಯಾಗಿದ್ದಾನೆ. ಭೀಕರ ಕೊಲೆ ಕಂಡು ಗ್ರಾಮವೇ ಬೆಚ್ಚಿ ಬಿದ್ದಿದೆ.

10 ವರ್ಷಗಳ ಹಿಂದೆ ಈರಯ್ಯನ ತಾಯಿ ಜೊತೆ ಬಸಪ್ಪ ಮಹಾರಾಷ್ಟ್ರದ ಕೊಲ್ಹಾಪುರಕ್ಕೆ ಓಡಿಹೋಗಿದ್ದ. ಈ ವೇಳೆ ಆರೋಪಿ ಈರಯ್ಯನಿಗೆ 18 ವರ್ಷ ವಯಸ್ಸು. ಹಲವು ವರ್ಷಗಳ ಬಳಿಕ ಈರಯ್ಯನ ತಾಯಿಯನ್ನ ಕೊಲ್ಹಾಪುರದಲ್ಲಿ ಬಿಟ್ಟು ಗ್ರಾಮಕ್ಕೆ ನಾಲ್ಕು ದಿನಗಳ ಹಿಂದೆಯಷ್ಟೇ ಬಸಪ್ಪ ಬಂದಿದ್ದ. ಇದೇ ವಿಚಾರವಾಗಿ ದ್ವೇಷ ಸಾಧಿಸುತ್ತಿದ್ದ ಆರೋಪಿ ಈರಯ್ಯ ಆತನನ್ನು ಕೊಲೆ ಮಾಡಿದ್ದಾನೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನಾಲ್ಕು ದಿನಗಳ ಹಿಂದೆ ಹೊಸದಾಗಿ ಬಸಪ್ಪ ಜಾಗ ಹುಡುಕಿ ಮನೆ ಕಟ್ಟಲು ಪ್ಲಾನ್ ಮಾಡಿದ್ದ. ಈ ವಿಚಾರ ತಿಳಿದ ಈರಯ್ಯ ಬಸಪ್ಪನ ಬೈಕ್ ಅಡ್ಡಗಟ್ಟಿ ಆತನ ಮೇಲೆ ಮಾರಕಾಸ್ತ್ರಗಳಿಂದ ಕೊಚ್ಚಿ 16 ಬಾರಿ ಇರಿದು ಕೊಲೆ ಮಾಡಿದ್ದಾನೆ. ಬಸಪ್ಪ ಹೊಸಮನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಬಳಿಕ ಸಿನಿಮಾ ಸ್ಟೈಲ್​ನಲ್ಲಿ ಶವದ ಮೇಲೆ ಕಾಲಿಟ್ಟು ನಿಂತು ಆರೋಪಿ ಈರಯ್ಯನೇ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದ. ಪೊಲೀಸರು ಬರುವವರೆಗೂ ಶವದ ಮೇಲೆ ಕಾಲಿಟ್ಟು ನಿಂತಿದ್ದ. ಪ್ರಕರಣ ಸಂಬಂಧ ಆರೋಪಿ ಈರಯ್ಯನ ಬಂಧಿಸಿರುವ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.

ಉತ್ತರ ಪ್ರದೇಶ ಮರ್ಯಾದಾ ಹತ್ಯೆ: ಥೂ ಇವನೆಂಥಾ ಅಪ್ಪ?! ಕರೆಂಟ್ ಶಾಕ್ ನೀಡಿ ಮಗಳನೇ ಕೊಂದ ರಾಕ್ಷಸ

ಜಮೀನು ಒತ್ತುವರಿ, ತಮ್ಮನ ಪ್ರಾಣ ತೆಗೆದ ಅಣ್ಣ

ದಾವಣಗೆರೆ: ಜಮೀನು ಒತ್ತುವರಿ ವಿಚಾರಕ್ಕೆ ನಡೆದ ಗಲಾಟೆಯಲ್ಲಿ (Property Dispute) ವ್ಯಕ್ತಿಯೊಬ್ಬ ತನ್ನ ತಮ್ಮನ ತಲೆ ಮೇಲೆ ಹಲ್ಲೆ ನಡೆಸಿ ಕೊಲೆಗೈದ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡದಲ್ಲಿ ನಡೆದಿದೆ. ಕೊಲೆಯಾದವನನ್ನು ಸಿ.ಕೆ ನೀಲಪ್ಪ (62) ಎಂದು ಗುರುತಿಸಲಾಗಿದೆ. ಹತ್ಯೆಗೈದವನನ್ನು ಸಿ.ಕೆ ಚಂದ್ರಪ್ಪ ಎಂದು ಗುರುತಿಸಲಾಗಿದೆ.

ಜಮೀನು ಒತ್ತುವರಿ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ. ಈ ವೇಳೆ, ಮಾತಿಗೆ ಮಾತು ಬೆಳೆದು ಘರ್ಷಣೆ ನಡೆದು, ಚಂದ್ರಪ್ಪ ತಮ್ಮನ ತಲೆ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದ ನೀಲಪ್ಪ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಾಯಕೊಂಡ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕೊಲೆಯಾದ ನೀಲಪ್ಪ ಕುಟುಂಬಸ್ಥರು, ಕೊಲೆಗೆ ಚಂದ್ರಪ್ಪನ ಕುಟುಂಬದ ಸದಸ್ಯರು ಸಹಕರಿಸಿದ್ದಾರೆ. ಅವರೆಲ್ಲರನ್ನೂ ಪ್ರಕರಣದಲ್ಲಿ ಆರೋಪಿಗಳನ್ನಾಗಿ ಮಾಡಿ ಎಂದು ಪಟ್ಟು ಹಿಡಿದಿದ್ದಾರೆ.

ದೆಹಲಿ ಪೊಲೀಸ್‌ ಕಮಾಂಡೋ ಹತ್ಯೆ ಕೇಸ್‌; ಕೊಲೆಗೂ ಮುನ್ನ ವಿಡಿಯೋ ಮಾಡಿದ್ದ ಪಾಪಿ ಪತಿ