ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Murder case: ಬಾಲಕನ ಕೊಲೆ, ಹತ್ಯೆಗೈದ ಮೂವರು ಅಪ್ರಾಪ್ತ ವಯಸ್ಕರು ಅರೆಸ್ಟ್

ಕೊಲೆಯಾದ ನಿಂಗರಾಜ್, ಅನುದಾನಿತ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಓದುತ್ತಿದ್ದ. ಕ್ಷುಲ್ಲಕ ವಿಚಾರವಾಗಿ ಜಗಳ ಮಾಡಿಕೊಂಡು ಮೂವರು ಅಪ್ರಾಪ್ತ ಬಾಲಕರು ಸೇರಿ ನಿಂಗರಾಜನನ್ನು ಕೊಲೆ ಮಾಡಿದ್ದಾರೆ. ಸದ್ಯ ಪೊಲೀಸರು ಮೂವರು ಅಪ್ರಾಪ್ತರನ್ನು ಆರೆಸ್ಟ್ ಮಾಡಿದ್ದಾರೆ. ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕನ ಕೊಲೆ, ಹತ್ಯೆಗೈದ ಮೂವರು ಅಪ್ರಾಪ್ತ ವಯಸ್ಕರು ಅರೆಸ್ಟ್

ಸಾಂದರ್ಭಿಕ ಚಿತ್ರ -

ಹರೀಶ್‌ ಕೇರ
ಹರೀಶ್‌ ಕೇರ Jan 15, 2026 7:46 AM

ಧಾರವಾಡ, ಜ.15 : ಧಾರವಾಡದಲ್ಲಿ (Dharavada) ಒಬ್ಬ ಬಾಲಕನ ಭೀಕರವಾದ ಕೊಲೆಯಾಗಿದ್ದು, ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದು ಬಾಲಕನನ್ನು ಕೊಲೆ (murder case) ಮಾಡಲಾಗಿದೆ. ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ನಿನ್ನೆ ಸಂಜೆ ಈ ಕೊಲೆ ನಡೆದಿದೆ. ಕೊಲೆಯಾದ ಬಾಲಕ ನಿಂಗರಾಜ್ ಅವರಿ (16) ಎಂದು ತಿಳಿದುಬಂದಿದೆ.

ಕೊಲೆಯಾದ ನಿಂಗರಾಜ್, ಅನುದಾನಿತ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಓದುತ್ತಿದ್ದ. ಕ್ಷುಲ್ಲಕ ವಿಚಾರವಾಗಿ ಜಗಳ ಮಾಡಿಕೊಂಡು ಮೂವರು ಅಪ್ರಾಪ್ತ ಬಾಲಕರು ಸೇರಿ ನಿಂಗರಾಜನನ್ನು ಕೊಲೆ ಮಾಡಿದ್ದಾರೆ. ಸದ್ಯ ಪೊಲೀಸರು ಮೂವರು ಅಪ್ರಾಪ್ತರನ್ನು ಆರೆಸ್ಟ್ ಮಾಡಿದ್ದಾರೆ. ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೇವಸ್ಥಾನಕ್ಕೆ ಹೋದ ಬಾಲಕನ ಶವ ನದಿಯಲ್ಲಿ ಪತ್ತೆ, ಕೊಲೆ ಶಂಕೆ

ದಕ್ಷಿಣಕನ್ನಡ : ದಕ್ಷಿಣಕನ್ನಡದಲ್ಲಿ ಘೋರ ದುರಂತ ನಡೆದಿದ್ದು, ದೇವಸ್ಥಾನಕ್ಕೆಂದು ಹೋಗಿದ್ದ ಬಾಲಕನ ಶವ ಸಂಶಯಾಸ್ಪದ ರೀತಿಯಲ್ಲಿ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಸಂಬೋಳ್ಯ ಎಂಬಲ್ಲಿ ನಡೆದಿದೆ. ಸಂಬೋಳ್ಯ ಎಂಬಲ್ಲಿಯ ನಿವಾಸಿ ಸುಬ್ರಹ್ಮಣ್ಯ ನಾಯಕ್​ ಅವರ ಪುತ್ರ, ಗೇರುಕಟ್ಟೆ ಪ್ರೌಢಶಾಲಾ ಒಂಬತ್ತನೇ ತರಗತಿ ವಿದ್ಯಾರ್ಥಿ ಸುಮಂತ್​ (15) ಎಂದಿನಂತೆ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯುವ ಧನು ಪೂಜೆಗಾಗಿ ಬೆಳಗ್ಗೆ 5ರ ಸುಮಾರಿಗೆ ಮನೆಯಿಂದ ತೆರಳಿದ್ದಾನೆ.

Bangladesh Violence: ಬಾಂಗ್ಲಾದಲ್ಲಿ ಮುಂದುವರಿದ ಹಿಂದೂ ಹತ್ಯೆಗಳ ಸರಣಿ; ಗಾಯಕ, ಆಟೋ ಚಾಲಕನ ಕೊಲೆ

ಆದರೆ ಅತ್ತ ದೇವಸ್ಥಾನಕ್ಕೂ ಹೋಗದೆ, ಮನೆಗೂ ಹಿಂದಿರುಗದೇ ಇದ್ದಾಗ ಮನೆಯವರು ಗಾಬರಿಗೊಂಡು ಸ್ಥಳೀಯರೊಂದಿಗೆ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಬಾಲಕ ಹೋಗಿದ್ದ ದಾರಿಯಲ್ಲಿ ರಕ್ತದ ಕಲೆಗಳು ಕಂಡುಬಂದಿದ್ದು, ಚಿರತೆ ಕೊಂಡೊಯ್ದಿರಬಹುದು ಎಂಬ ಸಂಶಯ ಸ್ಥಳೀಯರಲ್ಲಿ ಮೂಡಿತ್ತು. ತಕ್ಷಣ ಪೊಲೀಸರಿಗೆ ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ತಲೆಯ ಹಿಂಭಾಗ ಗಂಭೀರ ರೀತಿಯಲ್ಲಿ ಎರಡು ಗಾಯ ಕಂಡುಬಂದಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಶ್ವಾನ ದಳ, ವಿಧಿವಿಜ್ಞಾನ ತಂಡ ಆಗಮಿಸಿ ಪರಿಶೀಲನೆ ನಡೆಸಿದೆ.