ಬೆಂಗಳೂರು : ಬೆಂಗಳೂರಿನಲ್ಲಿ (bengaluru crime news) ಘೋರ ಘಟನೆಯೊಂದು ನಡೆದಿದ್ದು, ಆನ್‌ಲೈನ್‌ನಲ್ಲಿ ಫ್ರೀ ಫೈರ್ ಗೇಮ್ (Online game) ಚಟಕ್ಕೆ ಬಿದ್ದಿದ್ದ ಬಾಲಕನನ್ನು ಸ್ವಂತ ಸೋದರ ಮಾವನೇ (Uncle) ಬರ್ಬರವಾಗಿ ಹತ್ಯೆ (Murder case) ಮಾಡಿ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. 14 ವರ್ಷದ ಬಾಲಕ ಅಮೋಘ ಕೀರ್ತಿ ಹತ್ಯೆಯಾದ ಬಾಲಕನಾಗಿದ್ದು, ಬಾಲಕನ ಕೊಲೆ ಮಾಡಿ ಮಾವ ನಾಗಪ್ರಸಾದ್ ಸೋಲದೇವನಹಳ್ಳಿ ಠಾಣೆಗೆ ಶರಣಾಗಿದ್ದಾನೆ. ಆನ್ಲೈನ್ ಗೇಮ್ ಚಟಕ್ಕೆ ಬಿದ್ದಿದ್ದ ಬಾಲಕ ಪದೇ ಪದೆ ಹಣ ಕೇಳುತ್ತಿದ್ದ ಎನ್ನಲಾಗಿದ್ದು, ಕೋಪದ ಭರದಲ್ಲಿ ಮಾವನೇ ಕೊಲೆ ಮಾಡಿದ್ದಾನೆ.
ಕಳೆದ 8 ತಿಂಗಳಿನಿಂದ ಮಾವ ನಾಗಪ್ರಸಾದ್ ಜೊತೆಗೆ ಬಾಲಕ ವಾಸವಾಗಿದ್ದ. ಫ್ರೀ ಫೈರ್ ಗೇಮ್ ಚಟಕ್ಕೆ ಬಿದ್ದಿದ್ದ. ಮಾವನಿಗೆ ಪದೇ ಪದೆ ಹಣ ಕೇಳುತ್ತಿದ್ದ. ಇದರಿಂದ ಕೋಪಗೊಂಡ ನಾಗಪ್ರಸಾದ್ ಸೋಮವಾರ ರಾತ್ರಿ ತಂಗಿ ಮಗನ ಕತ್ತು ಸೀಳಿ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ನಂತರ ಮೆಜೆಸ್ಟಿಕ್‌ನಲ್ಲಿ 3 ದಿನ ಕಾಲ ಕಳೆದಿದ್ದಾನೆ. ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಬೆಂಗಳೂರಿನ ವಾಯುವ್ಯ ವಿಭಾಗದ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಳ್ಳರನ್ನು ಹಿಡಿಯಲು ಹೋದ ಪೇದೆಗೆ ಚಾಕು ಇರಿತ
ವಿಜಯಪುರ: ಕಳ್ಳನನ್ನು ಹಿಡಿಯಲು ಹೋದ ಪೊಲೀಸ್ ಪೇದೆಗೆ ಚಾಕು ಇರಿದಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ನಡೆದಿದೆ. ಮನೆ ಕಳ್ಳತನಕ್ಕೆ ಬಂದಿದ್ದ ಕಳ್ಳರನ್ನು ಹಿಡಿಯಲು ಪೊಲೀಸರು ಬೆನ್ನಟ್ಟುವಾಗ ಪೊಲೀಸ್ ಪೇದೆಗೆ ಚಾಕುವಿನಿಂದ (Stabbing Case) ಇರಿಯಲಾಗಿದೆ. ಬಸವನಬಾಗೇವಾಡಿಯ ಖಾನ್ ಆಸ್ಪತ್ರೆಯ ಪಕ್ಕದಲ್ಲಿ ಮಂಗಳವಾರ ರಾತ್ರಿ ಕಳ್ಳರು ಬಂದಿದ್ದಾರೆ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ವೇಳೆ ಕಳ್ಳರನ್ನು ಹಿಡಿಯಲು ಹೋದಾಗ ಪೊಲೀಸ್ ಪೇದೆಗೆ ಚಾಕುವಿನಿಂದ ಇರಿಯಲಾಗಿದೆ.
ಪಿಐ ಗುರುಶಾಂತ ದಾಶ್ಯಾಳ ಸೇರಿ ನಾಲ್ಕು ಪೊಲೀಸರು, ಕಳ್ಳರಿದ್ದ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರನ್ನು ಹಿಡಿಯಲು ಪೊಲೀಸರು ಬೆನ್ನಟ್ಟುತ್ತಿದ್ದಂತೆ ಖದೀಮರು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಪೇದೆ ರಮೇಶ ಅವರು ಒಬ್ಬ ಕಳ್ಳನನ್ನು ಹಿಡಿದಿದ್ದಾರೆ. ಈ ವೇಳೆ ಕಳ್ಳ ತನ್ನ ಜೇಬಿನಲ್ಲಿದ್ದ ಚಾಕು ತೆಗೆದು ಪೇದೆಯ ತೊಡೆ ಹಾಗೂ ಮತ್ತೆರಡು ಕಡೆಗೆ ಇರಿದು ಪರಾರಿಯಾಗಿದ್ದಾನೆ.
ಸಿಪಿಐ ಡ್ರೈವರ್ ಹಾಗೂ ಪೊಲೀಸ್ ಪೇದೆಯಾಗಿರುವ ರಮೇಶ ಗೂಳಿ(36) ಹಲ್ಲೆಗೊಳಗಾದ ಪೊಲೀಸ್ ಪೇದೆಯಾಗಿದ್ದಾರೆ. ಸದ್ಯ ಗಾಯಾಳು ಪ್ರಾಣಾಪಾಯದಿಂದ ಪಾರಾಗಿದ್ದು, ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಕುರಿತು ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ಚಡ್ಡಿ ಗ್ಯಾಂಗ್ ಕಳ್ಳರ ತಂಡವೊಂದು ಕೈಯಲ್ಲಿ ಮಾರಕಾಸ್ತ್ರಗಳನ್ನ ಹಿಡಿದು ಓಡಾಡಿರುವ ದೃಶ್ಯ ಸ್ಥಳೀಯರ ಸಿಸಿ ಟಿವಿಯಲ್ಲಿ ಸೆರೆಯಾಗಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿತ್ತು ಆ ಆತಂಕ ಮರೆಯುವ ಮುನ್ನವೇ ಸದ್ಯ ಮತ್ತೆ ಜಿಲ್ಲೆಯಲ್ಲಿ ಪೊಲೀಸರ ಮೇಲೆ ಕಳ್ಳರು ಹಲ್ಲೆ ಮಾಡಿದ್ದು ನಿಜಕ್ಕೂ ಜಿಲ್ಲೆಯ ಜನರಲ್ಲಿ ಭಯ ಹುಟ್ಟಿಸುವಂತಾಗಿದೆ.
ಇದನ್ನೂ ಓದಿ: ದೇಶವೇ ತಲೆ ತಗ್ಗಿಸುವ ಸುದ್ದಿ: ಪುಣೆಯಲ್ಲಿ ಬೀದಿ ನಾಯಿ ಮೇಲೆ ಅತ್ಯಾಚಾರ ಎಸಗಿದ ಕರ್ನಾಟಕದ ವ್ಯಕ್ತಿ