ಕಲಬುರಗಿ: ನಗರದ ಸಬ್ ಅರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.
ಹುಮನಾಬಾದ್ ರಸ್ತೆಯ ಕಲಬುರಗಿ ಹೋಟೆಲ್ ಸಮೀಪ ಸಿದ್ದಲಿಂಗ (35) ಎಂಬುವವರನ್ನು ಸೋಮು ಅಲಿಯಾಸ್ ಸೋಮಶೇಖರ ಹಾಗೂ ಇತರರು ಮೈದಾನದ ಕಡೆಗೆ ಕರೆದುಕೊಂಡು ಹೋಗಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: Kalaburagi News: ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಜಪ್ತಿ: ಗೃಹ ಸಚಿವರ ತವರಿನಲ್ಲಿಯೇ ಪೊಲೀಸರಿಂದ ಕಳ್ಳ ಪೊಲೀಸ್ ಆಟ?
ಘಟನೆಯ ಕುರಿತು ಮೃತನ ತಂದೆ ಲಕ್ಷ್ಮಕಾಂತ ಸಾವಳಗಿ (61) ನೀಡಿದ ದೂರಿನ ಮೇರೆಗೆ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ.236/2026, ಬಿಎನ್‌ಎಸ್ ಕಲಂ 103(1) ಅಡಿ ಪ್ರಕರಣ ದಾಖಲಾಗಿದೆ.
ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ., ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪೊಲೀಸರು ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.