ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Actor Darshan: ನಟ ಪ್ರಥಮ್‌ಗೆ ಕೊಲೆ ಬೆದರಿಕೆ, ದರ್ಶನ್‌ ಅಭಿಮಾನಿಗಳ ವಿರುದ್ಧ ದೂರು

Actor Pratham: ಕಳೆದ ಜುಲೈ 22ರಂದು ದೊಡ್ಡಬಳ್ಳಾಪುರದಲ್ಲಿ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಬೇಕರಿ ರಘು ಮತ್ತು ಆತನ ಗ್ಯಾಂಗ್ ನಟ ಪ್ರಥಮ್‌ಗೆ ಡ್ಯಾಗರ್‌ನಿಂದ ಹಲ್ಲೆಗೆ ಯತ್ನಿಸಿ ಕೊಲೆ ಬೆದರಿಕೆ ಹಾಕಿದ್ದರು. ಈ ವಿಚಾರವಾಗಿ ಬೆಂಗಳೂರು ಗ್ರಾಮಾಂತರ ಎಸ್‌ಪಿ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದ್ದರು.

ನಟ ಪ್ರಥಮ್‌ಗೆ ಕೊಲೆ ಬೆದರಿಕೆ, ದರ್ಶನ್‌ ಅಭಿಮಾನಿಗಳ ವಿರುದ್ಧ ದೂರು

ಪ್ರಥಮ್‌, ದರ್ಶನ್

ಹರೀಶ್‌ ಕೇರ ಹರೀಶ್‌ ಕೇರ Jul 30, 2025 10:11 AM

ಬೆಂಗಳೂರು: ನಟ ಪ್ರಥಮ್‌ಗೆ (Actor Pratham) ಕೊಲೆ ಬೆದರಿಕೆ (murder threat) ಹಾಕಿದ ಆರೋಪ ಪ್ರಕರಣದಲ್ಲಿ ನಟ ದರ್ಶನ್ (Actor Darshan) ಅಭಿಮಾನಿಗಳ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ. ನಟ ಪ್ರಥಮ್ ದೂರು ಆಧರಿಸಿ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. BNS u\s 351(2)(3), 352, 126(2) r\w3(5) ರಡಿ ಪ್ರಕರಣ ದಾಖಲಾಗಿದೆ. A1 ಬೇಕರಿ ರಘು, A2 ಯಶಸ್ವಿನಿ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಕಳೆದ ಜುಲೈ 22ರಂದು ದೊಡ್ಡಬಳ್ಳಾಪುರದಲ್ಲಿ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಬೇಕರಿ ರಘು ಮತ್ತು ಆತನ ಗ್ಯಾಂಗ್ ನಟ ಪ್ರಥಮ್‌ಗೆ ಡ್ಯಾಗರ್‌ನಿಂದ ಹಲ್ಲೆಗೆ ಯತ್ನಿಸಿದ್ದು ಕೊಲೆ ಬೆದರಿಕೆ ಹಾಕಿದ್ದರು. ಈ ವಿಚಾರವಾಗಿ ಬೆಂಗಳೂರು ಗ್ರಾಮಾಂತರ ಎಸ್ ಪಿ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದ್ದರು. ಇದೀಗ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ದರ್ಶನ್‌ ಅಭಿಮಾನಿಗಳ ವಿರುದ್ಧದ ರಮ್ಯಾ ದೂರು ತನಿಖೆ ಸಿಸಿಬಿಗೆ

ಬೆಂಗಳೂರು: ನಟ ದರ್ಶನ್ (Actor darshan) ಅಭಿಮಾನಿಗಳ ವಿರುದ್ಧ ನಟಿ ರಮ್ಯಾ (Actress Ramya) ನೀಡಿರುವ ದೂರಿನ ಬಗ್ಗೆ ಸಿಸಿಬಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಸಿಪಿ ಮಟ್ಟದ ಅಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್‌ ಕುಮಾರ್ ಸಿಂಗ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಸಿಬಿ ಸೈಬರ್ ಠಾಣೆಗೆ ಪ್ರಕರಣ ನೀಡಲಾಗಿದೆ. ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತರ ಉಸ್ತುವಾರಿಯಲ್ಲಿ ಡಿಸಿಪಿ ಮಟ್ಟದ ಅಧಿಕಾರಿ ತನಿಖೆ ನಡೆಸುತ್ತಿದ್ದಾರೆ ಎಂದರು.

ನಮ್ಮ ಸಿಸಿಬಿ ಸೈಬರ್ ಠಾಣೆಗೆ ನಟಿ ರಮ್ಯಾ ದೂರು ಕೊಟ್ಟಿದ್ದಾರೆ. ಅಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ. ದೂರಿನ ಬಗ್ಗೆ ಸಿಸಿಬಿ ಅಧಿಕಾರಿಗಳು ತನಿಖೆ ಮಾಡುತ್ತಾರೆ. ತನಿಖೆ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅದರ ಬಗ್ಗೆ ಸಿಸಿಬಿ ಜಾಯಿಂಟ್ ಕಮಿಷನರ್ ತನಿಖೆ ಮಾಡಿ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು. ನಟ ದರ್ಶನ್ ಫ್ಯಾನ್ಸ್ ಅಶ್ಲೀಲ ಸಂದೇಶ ಕಳುಹಿಸಿದ ಸಂಬಂಧ ನಿನ್ನೆ ನಟಿ ರಮ್ಯಾ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ದೂರು ನೀಡಿದ್ದರು. ಈ ದೂರು ಆಧರಿಸಿ ಪ್ರಮೋದ್ ಗೌಡ ಸೇರಿದಂತೆ 43 ಅಕೌಂಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಇದನ್ನೂ ಓದಿ: Sridevi Byrappa: ತಮ್ಮ ಕುಟುಂಬದ ಮಹಿಳೆಗೆ ಅನ್ಯಾಯವಾದಾಗ ನೀವು ಏನು ಮಾಡುತ್ತಿದ್ರಿ?; ರಮ್ಯಾ ಪರ ನಿಂತ ನಟ ಶಿವಣ್ಣ, ವಿನಯ್‌ಗೆ ಯುವ ಪತ್ನಿ ಶ್ರೀದೇವಿ ಪ್ರಶ್ನೆ