ಚಿಕ್ಕಬಳ್ಳಾಪುರ: ತಾಲ್ಲೂಕಿನ ಹೊಸಹುಡ್ಯ ಗ್ರಾಮದ ವ್ಯಾಪ್ತಿಯಲ್ಲಿ ಲಕ್ಕಹಳ್ಳಿ ಗೇಟ್ ಬಳಿ ಅಬಕಾರಿ ಇಲಾಖೆ ಅಧಿಕಾರಿ ಎಂ. ಅರುಣ್ ಪ್ರಸಾದ್ ನೇತೃತ್ವದಲ್ಲಿ ದಾಳಿ ನಡೆಸಿ 232 ಎಂ.ಡಿ.ಎಂ.ಎ ಮಾದಕ ವಸ್ತು ಜಪ್ತಿ ಮಾಡಿದ್ದಾರೆ. ಶಿಡ್ಲಘಟ್ಟದ ಸೈಯದ್ ನಯೀಮ್ ಎಂಬಾತ ನನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: Chikkaballapur News: ಆಯುಷ್ ಆಸ್ಪತ್ರೆ ಕಾಮಗಾರಿ ಮೂರು ತಿಂಗಳಲ್ಲಿ ಪೂರ್ಣಗೊಳಿಸಲು ಸೂಚನೆ
ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ವಶಕ್ಕೆ ಪಡೆದ ಮಾದಕ ವಸ್ತುವಿನ ಮೌಲ್ಯ 8 ಲಕ್ಷ ಎಂದು ಅಂದಾಜಿಸಲಾಗಿದೆ. ಮಾದಕ ವಸ್ತುಗಳ ಸಾಗಾಣಿಕೆಯಲ್ಲಿ ತೊಡಗಿರುವ ಇತರೆ ಆರೋಪಿಗಳು ಮತ್ತು ಮುಖ್ಯ ಪ್ಲೆಡರ್ ಗಳ ಮಾಹಿತಿ ಕುರಿತು ತನಿಖೆ ನಡೆಸುತ್ತಿದ್ದಾರೆ.
ಕಾರ್ಯಾಚರಣೆಯಲ್ಲಿ ಅಬಕಾರಿ ಅಧಿಕಾರಿಗಳಾದ ಈರಪ್ಪ, ಮರಂಬೀಡ, ಮಾಳಪ್ಪ ಪೂಜಾರಿ ಮತ್ತು ರೇವಣ್ಣ ಸಿದ್ದಪ್ಪ ಅತಾಪಿ, ಸಿಬ್ಬಂದಿ ಎಂ.ಬಿರಾಜೇಂದ್ರ, ಎನ್ ಮಹೇಶ್ ಭಾಗವಹಿಸಿದ್ದರು.